ಜು.25ಕ್ಕೆ ಬೆಂಗಳೂರು ಬಂದ್! GST ನೋಟಿಸ್ ವಿರುದ್ಧ ವ್ಯಾಪಾರಿಗಳ ಪ್ರತಿಭಟನೆ ಹೌದು, ಯುಪಿಐ ವಹಿವಾಟುಗಳಿಗೆ ಸಂಬಂಧಿಸಿದಂತೆ ಜಿಎಸ್‌ಟಿ ನೋಟಿಸ್‌ಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ಬೆಂಗಳೂರಿನ ಸಣ್ಣ ವ್ಯಾಪಾರಿಗಳು ಪ್ರತಿಭಟನೆಯನ್ನು ಮಾಡಲು ಮುಂದಾಗಿದ್ದಾರೆ. ಹಾಲು ಮಾರಾಟರಿಂದ ಇಡೀದು ಬೀದಿಬದಿಯ ವ್ಯಾಪಾರಿಗಳು ಒಟ್ಟುಗೂಡಿ ಜುಲೈ 23 ರಿಂದ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಲು ನಿರ್ಧಾರವನ್ನು ಮಾಡಿದ್ದಾರೆ ಎಂದು ವರದಿಗಳು ಆಗಿವೆ.
ಈಗಾಗಲೇ ಅನೇಕ ವ್ಯಾಪಾರಿಗಳು ಹಾಲು ಮತ್ತು ಡೈರಿ ಉತ್ಪನ್ನಗಳ ಮಾರಾಟವನ್ನು ಸ್ಥಗಿತವನ್ನು ಕೂಡ ಮಾಡಿದ್ಧಾರೆ ನಾಳೆಯಿಂದ ಹೋರಾಟ ಇನ್ನೂ ಹೆಚ್ಚಾಗಬಹುದು.

ಜುಲೈ 25ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜುಲೈ 25ಕ್ಕೆ ಬೃಹತ್ ರ್‍ಯಾಲಿಯೊಂದಿಗೆ ಜಿಎಸ್‌ಟಿ ನೋಟಿಸ್ ವಿರುದ್ಧ ಹೋರಾಟ ನಡೆಯಲಿದೆ. ಈ ಹೋರಾಟಕ್ಕೆ ಕ್ಯಾಬ್ ಮತ್ತು ಆಟೋ ಚಾಲಕರು ಸಹ ಬೆಂಬಲವನ್ನು ಕೊಟ್ಟಿದ್ದಾರೆ.
ಇಷ್ಟಲ್ಲಾ ಬೆಳವಣಿಗೆ ನಡೆಯುತ್ತಿರುವ ಮಧ್ಯೆ ರಾಜ್ಯ ಸರ್ಕಾರವು "ಜಿಎಸ್‌ಟಿ ತಿಳಿಯಿರಿ" ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಉಪಕ್ರಮದ ಮುಖ್ಯ ಉದ್ದೇಶ ತೆರಿಗೆ ಅನುಸರಣೆಯ ಕುರಿತು ವ್ಯಾಪಾರಿಗಳಿಗೆ ಮಾಹಿತಿ ನೀಡುವುದು ಮತ್ತು ಅವರಲ್ಲಿ ವಿಶ್ವಾಸ ಮೂಡಿಸುವಂತಹ ಕಾರ್ಯಕ್ರಮವಾಗಿದೆ.ವ್ಯಾಪಾರಿಗಳಿಗೆ ಸಹಾಯ ಮಾಡಲು ವಾಣಿಜ್ಯ ತೆರಿಗೆ ಇಲಾಖೆ ಸಹಾಯವಾಣಿ (1800 425 6300) ತೆರೆದಿದೆ ಮತ್ತು ಮಾಹಿತಿ ಕಾರ್ಯಾಗಾರಗಳನ್ನು ನಡೆಸಲು ಸಿದ್ಧತೆಯನ್ಉ ಮಾಡಲಾಗುತ್ತದೆ.
ಜಿಎಸ್‌ಟಿ ನೋಟಿಸ್‌ಗಳನ್ನು ಹಿಂಪಡೆಯಲು ಸರ್ಕಾರಕ್ಕೆ ಮನವಿ
ಸಣ್ಣ ವ್ಯಾಪಾರಿಗಳು ಜಿಎಸ್‌ಟಿ ನೋಟಿಸ್‌ಗಳನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಮನವಿಯನ್ನು ಮಾಡಿಕೊಂಡಿದ್ದಾರೆ.
ರಾಜಕೀಯ ವಾಗ್ವಾದ ಕಾರಣ
ಜಿಎಸ್‌ಟಿ ನೋಟಿಸ್ ವಿಚಾರವು ರಾಜಕೀಯ ವಾಗ್ವಾದ ಕೂಡ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜಿಎಸ್‌ಟಿ ಮೂಲಕ ಸಣ್ಣ ಉದ್ಯಮಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ಪ್ರತಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಜೆಪಿ ಅನಗತ್ಯವಾಗಿ ಜಿಎಸ್‌ಟಿ ನೋಟಿಸ್‌ಗಳ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹಾಕುತ್ತಿದೆ ಎಂದು ತಿರುಗುಬಾಣವನ್ನು ಬಿಟ್ಟಿದೆ.
ಕೇಂದ್ರ ಜೊತೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ
ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ ನಿಂದ ತೆರಿಗೆ ನೋಟೀಸ್ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಜಿಎಸ್‌ಟಿ ಪದ್ಧತಿ ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್‌ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯ ಸರ್ಕಾರಗಳ ಜವಾಬ್ದಾರಿಯಿಲ್ಲ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.


Click it and Unblock the Notifications