For Quick Alerts
ALLOW NOTIFICATIONS  
For Daily Alerts

ಕರ್ನಾಟಕ ರಾಜ್ಯ ಬಜೆಟ್: ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಹೆಚ್ಚಳವಿಲ್ಲ!

|

ಇಂದಿನ ಬಜೆಟ್‌ನಲ್ಲಿ ಹೆಚ್ಚಿನ ನಿರೀಕ್ಷೆಯಾಗಿದ್ದ ವಿಚಾರ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕವನ್ನು ಕಡಿತದ ವಿಚಾರವಾಗಿ, ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಉಳಿಸಿಕೊಳ್ಳಲಾಗಿದೆ.

ಈಗಾಗಲೇ ಗಗನಕ್ಕೇರಿರುವ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲಿನ ತೆರಿಗೆಯನ್ನು ತಗ್ಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಒತ್ತಡವಿದೆ. ಹೀಗಾಗಿ ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಸುಂಕ ತಗ್ಗಿಸುವ ನಿರೀಕ್ಷೆ ವ್ಯಕ್ತವಾಗಿತ್ತು. ಆದರೆ ರಾಜ್ಯ ಸರ್ಕಾರವು ಸುಂಕವನ್ನು ತಗ್ಗಿಸದೇ ಯಥಾಸ್ಥಿತಿ ಕಾಯ್ದುಕೊಂಡಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಹೆಚ್ಚಳವಿಲ್ಲ!

 

2021-22ರ ಬಜೆಟ್‌ನಲ್ಲಿ, ಇಂಧನ ಬೆಲೆಗಳ ಹೆಚ್ಚಳದಿಂದಾಗಿ ಈಗಾಗಲೇ ಸಂಕಷ್ಟಗಳನ್ನು ಎದುರಿಸುತ್ತಿರುವ ಜನರ ಮೇಲೆ ಹೊರೆ ನಿವಾರಿಸುವ ಉದ್ದೇಶದಿಂದ ಕರ್ನಾಟಕ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಸೇರಿದಂತೆ ಯಾವುದೇ ತೆರಿಗೆಗಳನ್ನು ಹೆಚ್ಚಿಸಲಾಗಿಲ್ಲ.

ಕರ್ನಾಟಕ ರಾಜ್ಯ ಬಜೆಟ್: ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿ ದರದಲ್ಲಿ ಸಾಲ

2020ರ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಸಂಪನ್ಮೂಲ ಕ್ರೂಢೀಕರಣ ಹೆಚ್ಚಿಸಲು ತೈಲದ ಮೇಲಿನ ತೆರಿಗೆ ಹೆಚ್ಚಳ ಮಾಡಲಾಗಿತ್ತು. ಪೆಟ್ರೋಲ್‌ ಮೇಲಿನ ತೆರಿಗೆ 32 ಪರ್ಸೆಂಟ್ ನಿಂದ 35ಕ್ಕೆ ಏರಿಸಲಾಗಿದೆ. ಡೀಸೆಲ್ ಮೇಲಿನ ತೆರಿಗೆ 21 ರಿಂದ 24ಕ್ಕೆ ಏರಿಸಲಾಗಿತ್ತು.

English summary

Karnataka Budget 2021: No Rise In Taxes On Petrol And Diesel

In the budget 2021-22 Budget, no taxes including Karnataka State Tax on Petrol and Diesel has been increased, in a bid to relieve burden on the people who are already facing hardship due to increase in fuel prices.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X