ಕರ್ನಾಟಕದ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ತನ್ನ 14ನೇ ದಾಖಲೆಯ ಬಜೆಟ್ ಮಂಡನೆಯನ್ನು ಆರಂಭ ಮಾಡಿದ್ದಾರೆ. ಸ್ತ್ರೀಯರಿಗೆ, ರೈತರಿಗೆ ವಿವಿಧ ಯೋಜನೆಗಳನ್ನು ಜಾರಿ ಮಾಡಿದ್ದು, ಅಬಕಾರಿ ಸುಂಕ ಏರಿಸುವ ಮೂಲಕ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ. ಈ ನಡುವೆ ನಾವು ಈ ಬಾರಿ ರಾಜ್ಯದ ಬಜೆಟ್ ಗಾತ್ರ ಹೆಚ್ಚಳವಾಗಿರುವುದನ್ನು ಗಮನಿಸಬಹುದಾಗಿದೆ.
ಮಾರ್ಚ್ ತಿಂಗಳಿನಲ್ಲಿ ಅಂದಿನ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ 3,09,182 ಕೋಟಿ ರೂಪಾಯಿ ಗಾತ್ರದ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಅದಾದ ಬಳಿಕ ಚುನಾವಣೆ ನಡೆದು ಹೊಸ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ ಗಾತ್ರವು ಈ ಹಿಂದಿನ ಬಜೆಟ್‌ನ ಗ್ರಾತಕ್ಕಿಂತ ಅಧಿಕವಾಗಿದೆ.

ಬಜೆಟ್ ಗಾತ್ರದಲ್ಲಿ 18,565 ಕೋಟಿ ರೂಪಾಯಿ ಹೆಚ್ಚಳ ಕಂಡು ಬಂದಿದೆ. ಈ ಬಾರಿ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಅನ್ನು ಮಂಡನೆ ಮಾಡಲಾಗಿದೆ. ಕರ್ನಾಟಕದ ಸಿದ್ಧರಾಮಯ್ಯ ಸರ್ಕಾರವು ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಚುನಾವಣೆಗೂ ಮುನ್ನ ಘೋಷಿಸಿದ್ದು, ಅದರ ಅನುಷ್ಠಾನವಾಗಲಿದೆ.
ಅದಕ್ಕಾಗಿ ಬಜೆಟ್ ಹಂಚಿಕೆಯನ್ನು ಕೂಡಾ ಸರ್ಕಾರ ಮಾಡಿದೆ. ಶಕ್ತಿ ಯೋಜನೆಗೆ ವಾರ್ಷಿಕ 4 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಗೃಹಜ್ಯೋತಿ ಯೋಜನೆಗೆ 13,910 ಕೋಟಿ ರೂಪಾಯಿ ಅನುದಾನವನ್ನು ಘೋಷಣೆ ಮಾಡಲಾಗಿದೆ.
ಐದು ಗ್ಯಾರಂಟಿ ಯೋಜನೆಗಳು
ಗೃಹ ಜ್ಯೋತಿ (ಮನೆಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದು), ಗೃಹ ಲಕ್ಷ್ಮಿ (ಬಿಪಿಎಲ್/ಎಪಿಎಲ್ ಪಡಿತರ ಚೀಟಿ ಹೊಂದಿರುವ ಮಹಿಳಾ ಮುಖ್ಯಸ್ಥರಿಗೆ 2,000 ರೂಪಾಯಿ ಭರವಸೆ) ಎರಡು ಗ್ಯಾರಂಟಿಗಳಾಗಿದೆ. ಅನ್ನ ಭಾಗ್ಯ (ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ), ಯುವ ನಿಧಿ (ಈ ಶೈಕ್ಷಣಿಕ ವರ್ಷದಲ್ಲಿ ಉತ್ತೀರ್ಣರಾದ ನಿರುದ್ಯೋಗಿ ಪದವೀಧರರಿಗೆ 3,000 ರೂಪಾಯಿ ಭತ್ಯೆ), ಮತ್ತು ಶಕ್ತಿ ಕರ್ನಾಟಕದಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ನೀಡುವ ಯೋಜನೆಗಳಾಗಿದೆ. ಈಗಾಗಲೇ ಶಕ್ತಿ ಯೋಜನೆಯು ಜಾರಿಗೆ ಬಂದಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications