ಕರ್ನಾಟಕದ ನೂತನ ಸರ್ಕಾರವು 2023-24 ನೇ ಸಾಲಿನ ರಾಜ್ಯದ ಪರಿಷ್ಕ್ರೃತ ಆಯವ್ಯಯ ಮಂಡನೆಯನ್ನು ಇಂದು (ಜುಲೈ 7) ಮಾಡಲಿದೆ. ಕರ್ನಾಟಕದ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ತನ್ನ 14ನೇ ದಾಖಲೆಯ ಬಜೆಟ್ ಮಂಡನೆಯನ್ನು ಇಂದು ಮಾಡಲಿದ್ದಾರೆ. ಪ್ರಮುಖವಾಗಿ 5 ಗ್ಯಾರಂಟಿಗಳ ಹೆಚ್ಚು ಗಮನವನ್ನು ಸರ್ಕಾರವು ಹರಿಸುವ ಸಾಧ್ಯತೆಯಿದೆ. ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಈ ಗ್ಯಾರಂಟಿಗಳನ್ನು ಸರ್ಕಾರ ಜಾರಿ ಮಾಡಲಿದೆ.
ಚುನಾವಣಾ ಪೂರ್ವ ಘೋಷಣೆಗಳನ್ನು ಈಗ ಜಾರಿ ತರಲಾಗುತ್ತಿದ್ದು, ಇದು ಬಡ ಮತ್ತು ಮಧ್ಯಮ ವರ್ಗದವರಿಗೆ ಒಟ್ಟಾರೆಯಾಗಿ ರಾಜ್ಯದ ಜನರಿಗೆ ಸಹಾಯ ಮಾಡಲಿದೆ. ಆದರೆ ಪ್ರಸ್ತುತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಮೇಲೆಯೂ ಸರ್ಕಾರ ಗಮನ ಹರಿಸುವ ಅಗತ್ಯವಿದೆ ಎಂಬುವುದು ತಜ್ಞರ ಅಭಿಪ್ರಾಯವಾಗಿದೆ. ಯಾವುದೇ ಬಜೆಟ್ ಆದರೂ ಕೂಡ ಈ ಎರಡು ಕ್ಷೇತ್ರಗಳ ಮೇಲೆ ಅಗತ್ಯವಾದ ಗಮನ ಹರಿಸುವುದು ಮುಖ್ಯ ಎಂಬ ಅಭಿಪ್ರಾಯವಿದೆ.

ಬಜೆಟ್‌ನಲ್ಲಿ ಕೈಗಾರಿಕೆಗಳ, ಉದ್ಯಮಗಳ ನಿರೀಕ್ಷೆಯೇನಿದೆ?
ನಿರುದ್ಯೋಗಿಗಳಿಗೆ ಉದ್ಯೋಗವನ್ನು ತೆರೆಯುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ತೆರೆಯಬೇಕಾಗಿದೆ. ಕರ್ನಾಟಕ ರಾಜ್ಯದ ಶ್ರೀಮಂತರೇ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ ಹೂಡಿಕೆ ಮಾಡಲು ಸರ್ಕಾರ ಉತ್ತೇಜನ ನೀಡಬೇಕು. ಹಾಗೆಯೇ ಸ್ಟಾರ್ಟ್‌ಅಪ್‌ಗಳಿಗೆ ಬೆಂಗಳೂರು ಹೆಸರುವಾಸಿಯಾಗಿದೆ. ಹಾಗಿರುವಾಗ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಸಾಲ ಯೋಜನೆ ಜಾರಿ ಮಾಡಲು ಒತ್ತು ನೀಡಬೇಕು ಎಂಬುವುದು ಕೈಗಾರಿಕೆ, ಉದ್ಯಮ ಕ್ಷೇತ್ರದ ನಿರೀಕ್ಷೆಗಳಾಗಿದೆ.
ಶಿಕ್ಷಣ, ಆರೋಗ್ಯ, ಉದ್ಯಮ ಕ್ಷೇತ್ರಕ್ಕೂ ಗಮನವಿರಲಿ
ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಬಹುತೇಕ ಎಲ್ಲ ಪಕ್ಷಗಳ ದೊಡ್ಡ ವೈಫಲ್ಯವು ಶಿಕ್ಷಣ ಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ಲಕ್ಷಾಂತರ ಕೋಟಿ ಜನರ ತೆರಿಗೆ ಹಣ ಹರಿದುಬರುತ್ತಿದ್ದರೂ ಇಂದಿಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಕ್ಕಳ ಉತ್ತೀರ್ಣ ಪ್ರಮಾಣ ಶೇ. 100 ಆಗಿಲ್ಲ. ಈ ಹಿಂದಿನ ಬಜೆಟ್‌ನಲ್ಲಿ ಸರ್ಕಾರವು ಶಿಕ್ಷಣಕ್ಕೆ ಬಜೆಟ್ ಅನ್ನು 38,000 ಕೋಟಿ ರೂಪಾಯಿಗೆ ಏರಿಕೆ ಮಾಡಿದೆ. ಈ ಹಿಂದೆ 2019-20 ಹಣಕಾಸು ವರ್ಷದಲ್ಲಿ 27,000 ಕೋಟಿ ರೂಪಾಯಿ ಆಗಿದೆ. ಆದರೆ ಸರ್ಕಾರಿ ಶಾಲಾ - ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಕಾರ್ಯವು ನಡೆಯಬೇಕಾಗಿದೆ.
ಇನ್ನು ಆರೋಗ್ಯ ಕ್ಷೇತ್ರವು ಸರ್ಕಾರದ ಮುಂದೆ ಇರುವ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ಆರೋಗ್ಯ ಕ್ಷೇತ್ರದ ವಿಚಾರಕ್ಕೆ ಬಂದಾಗ ಎದುರಾಗುವ ಎರಡು ಸಮಸ್ಯೆಗಳು ಬಜೆಟ್ ಮೊತ್ತ ಹಾಗೂ ಅದರ ಕಾರ್ಯರೂಪತೆ. ಹಿಂದಿನ ಸರ್ಕಾರವು ಆರೋಗ್ಯ ಕ್ಷೇತ್ರಕ್ಕೆ 15,000 ಕೋಟಿ ರೂಪಾಯಿ ಬಜೆಟ್ ಹಂಚಿಕೆ ಮಾಡಿದೆ. ದೇಶದ ಶ್ರೀಮಂತ ರಾಜ್ಯಗಳಲ್ಲಿ ಒಂದಾದ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಇದು ಸಾಕಾಗದು.
ಇನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಪ್ರಮುಖವಾಗಿ ಬಿಜೆಪಿ ಸರ್ಕಾರವು ಘೋಷಿಸಿದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಕಾಯಿದೆ, 2022 ಎಂಬ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸುವ ಮಸೂದೆಯನ್ನು ಮಂಡನೆ ಮಾಡಬಹುದು. ಇನ್ನು ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಕಾಯ್ದೆಯನ್ನು ರದ್ದುಗೊಳಿಸುವ ಮಸೂದೆಯನ್ನು ಕೂಡಾ ಸರ್ಕಾರ ಮಾಡುವ ನಿರೀಕ್ಷೆಯಿದೆ. ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಕಾಯಿದೆ, 2020 ಗೆ ಸಂಬಂಧಿಸಿ ತಿದ್ದುಪಡಿ ಮಾಡುವ ನಿರೀಕ್ಷೆಯೂ ಇದೆ.
ಸೋಮವಾರದಿಂದ, ಜುಲೈ 3ರಂದು ಕರ್ನಾಟಕ ರಾಜ್ಯದ ಬಜೆಟ್ ಅಧಿವೇಶನವು ಆರಂಭವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಈ ಆಡಳಿತಾವಧಿಯ ಮೊದಲ ಬಜೆಟ್ ಅಧಿವೇಶದ ಇದಾಗಿದೆ. ಅಧಿಕಾರಕ್ಕೆ ಬಂದ ಒಂದುವರೆ ತಿಂಗಳುಗಳ ಬಳಿಕ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು ಇಂದು ಬಜೆಟ್ ಮಂಡನೆ ಮಾಡಲಾಗುತ್ತದೆ. ಕರ್ನಾಟಕ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಸೋಮವಾರ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವ ಮೂಲಕ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications