ಕರ್ನಾಟಕ ರಾಜ್ಯ ಮುಖ್ಯಮಂತ್ರಿ, ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ 2023-24ನೇ ಹಣಕಾಸು ವರ್ಷದ ಬಜೆಟ್ ಮಂಡನೆಯನ್ನು ಫೆಬ್ರವರಿ 17ರಂದು ಆರಂಭಿಸಿದ್ದಾರೆ. ಈ ಬಜೆಟ್ ಮಂಡನೆ ವೇಳೆ ರೈತರಿಗೆ ಬಂಪರ್ ಕೊಡುಗೆಯನ್ನು ಘೋಷಣೆ ಮಾಡಿದ್ದಾರೆ.
ರೈತರಿಗೆ ತೆರಿಗೆರಹಿತ ಅಂದರೆ ತೆರಿಗೆ ಇಲ್ಲದೆ ನೀಡಲಾಗುವ ಡೀಸೆಲ್ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ. ರೈತರಿಗೆ ತೆರಿಗೆ ಇಲ್ಲದೆ ನೀಡಲಾಗುವ ಡೀಸೆಲ್ ಪ್ರಮಾಣವನ್ನು 1.5 ಲಕ್ಷ ಕಿಲೋ ಲೀಟರ್‌ನಿಂದ 2 ಲಕ್ಷ ಕಿಲೋ ಲೀಟರ್‌ಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಇನ್ನು ಎಲ್ಲ ಯಾಂತ್ರೀಕೃತ ಬೋಟ್‌ಗಳಲ್ಲಿ ಇಸ್ರೋ ಅಭಿವೃದ್ಧಿ ಪಡಿಸಿದ ಜಿಯೋ-ಪೊಸಿಷನಿಂಗ್ ತಂತ್ರಜ್ಞಾನವನ್ನು ಅಳವಡಿಸಲಾಗುವುದು. ಕರಾವಳಿಯ ಉಡುಜಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಸೀಫುಡ್ ಪಾರ್ಕ್ ಆರಂಭ ಮಾಡಲಾಗುವುದು ಎಂದು ಕೂಡಾ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬಜೆಟ್ ಆರಂಭದಲ್ಲಿಯೇ ರೈತರಿಗೆ ಬಂಪರ್ ಗಿಫ್ಟ್ ಘೋಷಣೆ ಮಾಡಲಾಗಿದೆ. ರೈತರಿಗೆ 5 ಲಕ್ಷ ರೂಪಾಯಿ ಸಾಲ ನೀಡುವ ಘೋಷಣೆ ಮಾಡಲಾಗಿದೆ. ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡುವ ಘೋಷಣೆ ಮಾಡಲಾಗಿದೆ. ಸಾಲ ಮಿತಿಯನ್ನು 3 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.
ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತನೆ ಮಾಡಲು 40 ಕೋಟಿ ರೂಪಾಯಿ ಘೋಷಿಸಿದ ಮುಖ್ಯಮಂತ್ರಿ ಈ ಪರಿವರ್ತನೆ ಆಗುವವರೆಗೂ ಸೀಮೆಎಣ್ಣೆ ಸಹಾಯಧನ ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಭೂಸಿರಿ ಎಂಬ ನೂತನ ಯೋಜನೆ ಅಡಿ 10,000 ರೂ. ಸಹಾಯಧನ ನೀಡುವ ನಿರ್ಧಾರವನ್ನು ಕೂಡಾ ಮಾಡಲಾಗಿದೆ.
ರೈತ ಸಿರಿ ಯೋಜನೆಯಡಿಯಲ್ಲಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟರ್ಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಿಸಲಾಗಿದೆ. ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಎಂಬ ಯೋಜನೆ ಆರಂಭದ ಘೋಷಣೆ ಮಾಡಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!



Click it and Unblock the Notifications