ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ಧಾರೆ.

ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಬಜೆಟ್ ವೇಳೆ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಸತಿ ಸೆಸ್ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು ಸ್ಥಾಪಿಸಲಾಗುವುದು. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ ಮಾಡಲಾಗುವುದು ಎಂಬ ಭರವಸೆಯನ್ನು ಸಿಎಂ ನೀಡಿದ್ದಾರೆ.

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications