ಶುಕ್ರವಾರ ಸಿಎಂ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಹೊಸ ಯೋಜನೆಗಳನ್ನು ಘೋಷಿಸಿದ್ದು, ಬ್ರ್ಯಾಂಡ್ ಬೆಂಗಳೂರು ನಿರ್ಮಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಾರಿದ್ದಾರೆ.
ಸುಗಮ ಸಂಚಾರ-ಬ್ರಾಂಡ್ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿ, ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಇನ್ನು ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಿ, ಆರ್ಥಿಕ ಚಟುವಟಿಕೆ ವೃದ್ಧಿಸಲು ಸಹಕಾರಿಯಾಗುವಂತೆ ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಿಯಿಸಲು ಉದ್ದೇಶಿಸಲಾಗಿದೆ. 27 ಸಾವಿರ ಕೋಟಿ ವೆಚ್ಚದಲ್ಲಿ 73 ಕಿಲೋ ಮೀಟರ್ ಉದ್ದದ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಕರೆಯಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಆಕರ್ಷಕ ಪ್ರವಾಸಿ ತಾಣಗಣನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಅಲ್ಲದೆ ನಗರದಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲು ನಿರ್ಧರಿಸಿದೆ. ನಗರಾಭಿವೃದ್ಧಿ ಅಂಗಸಂಸ್ಥೆಗಳಾದ ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ.
ಬೆಂಗಳೂರಿನಲ್ಲಿ ಬಿಎಂಟಿಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್ ಅರ್ಬನ್ ರೈಲು ಯೋಜನೆಗಳಿಗೆ ಚುರುಕು ಮುಟ್ಟಿಸಲು ನಿರ್ಧರಿಸಲಾಗಿದೆ. ಅಲ್ಲದೆ ನಮ್ಮ ಮೆಟ್ರೋ 2025ರ ಮಾರ್ಚ್ ಒಳಗೆ ಹೆಚ್ಚುವರಿಯಾಗಿ 44 ಕಿಲೋ ಮೀಟರ್ ಮಾರ್ಗ ವಿಸ್ತರಣೆ ಆಗಲಿದೆ.

ಬೆಂಗಳೂರು ನಗರಕ್ಕೆ 1334 ಹೊಸ ಎಲೆಕ್ಟ್ರಿಕ್ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ಸುಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸಲಿದೆ. ಅಲ್ಲದೆ ಮಹಿಳಾ ಪ್ರಯಾಣಿಕೆ ಹಿತದ ದೃಷ್ಟಿಯಿಂದ ಮೊಬೈಲ್ ಆಪ್ ಅನ್ನು ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ.
ಕಾವೇರಿ ಹಂತ5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಬರ್ 2024ರಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ 228 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆಯನ್ನು ಅಳವಿಡಿಸಲಾಿಳಿಗುವುದು ಎಂದು ಸಿಎಂ ತಿಳಿಸಿದ್ದಾರೆ.
7 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು 441 ಕೋಟಿ ರೂಗಳ ಮೊತ್ತದಲ್ಲಿ ಉನ್ನತೀಕರಿಸಲಾಗುವುದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


Click it and Unblock the Notifications