ರಾಜ್ಯ ಸರ್ಕಾರದ ಆಯವ್ಯಯ ಮಂಡನೆಗೆ ದಿನಗಣನೆ ಶುರುವಾಗಿದ್ದು,ಇಂದಿನಿಂದ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಈ ಬಾರಿ ಸಿಎಂ ಸಿದ್ದರಾಮಯ್ಯ 16ನೇ ಬಜೆಟ್ ಮಂಡನೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಲಿದ್ದಾರೆ.
ಹೌದು, ಇದುವರೆಗೂ ಸಿಎಂ ಸಿದ್ದರಾಮಯ್ಯ 15 ಬಜೆಟ್‌ನ್ನು ಮಂಡನೆ ಮಾಡಿದ್ದಾರೆ. ಆದರೆ ಈ 16ನೇ ದಾಖಲೆಯ ಬಜೆಟ್ ಮೇಲೆ ಭಾರೀ ನಿರೀಕ್ಷೆಗಳು ಇವೆ. ಮೆಟ್ರೋ ದರ ಏರಿಕೆ, ಬಸ್ ಟಿಕೆಟ್ ಹೆಚ್ಚಳ, ಗ್ಯಾರಂಟಿ ಯೋಜನೆಗಳ ಸಾಧಕ- ಭಾಧಕಗಳ ಕುರಿತು ಚರ್ಚೆಗಳು ನಡೆಯಲಿದೆ. ವಿರೋಧ ಪಕ್ಷವಾದ ಬಿಜೆಪಿ ಕಾಂಗ್ರೆಸ್ ಸರ್ಕಾರಕ್ಕೆ ಎದುರೇಟು ಕೊಡಲು ಸಿದ್ದವಾಗಿದೆ.

ಇಂದಿನ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭ
ಮಾರ್ಚ್ 3ರಿಂದ 21ರವರೆಗೆ ರಾಜ್ಯ ಬಜೆಟ್ ಅಧಿವೇಶನ ನಡೆಯಲಿದ್ದು, ಬಜೆಟ್ ಅಧಿವೇಶನದ ಆರಂಭದಲ್ಲಿ ಜಂಟಿ ಸದನ ಉದ್ದೇಶಿಸಿ ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಲಿದ್ದಾರೆ. ಮಂಗಳವಾರದಿಂದ ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಗುರುವಾರ ವಂದನಾ ನಿರ್ಣಯ ಕೈಗೊಳ್ಳಲಾಗುವುದು. ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2025 -26 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಮಾ. 10 ರಿಂದ 21ರವರೆಗೆ ಬಜೆಟ್ ಮೇಲೆ ಚರ್ಚೆಗಳು ನಡೆಯುತ್ತವೆ.
ರಾಜ್ಯ ಬಜೆಟ್ ಅಧಿವೇಶನವು ಶನಿವಾರ ಮತ್ತು ಭಾನುವಾರಗಳನ್ನು ಹೊರತುಪಡಿಸಿ 14 ದಿನಗಳ ಕಾಲ ಬಜೆಟ್‌ಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತೇವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಗಳುನಡೆಯುತ್ತವೆ. ಈ ಸಂದರ್ಭದಲ್ಲಿ ಹಲವಾರು ಬೆಳವಣಿಗೆಗಳು, ಹೊಸ ಯೋಜನೆಗಳು, ಮತ್ತು ವಿವಿಧ ಪ್ರಸ್ತಾವನೆಗಳ ಮೇಲೆ ಚರ್ಚೆಗಳು ನಡೆಯಲಿವೆ.
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ
ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ 16ನೇ ದಾಖಲೆಯ ಬಜೆಟ್‌ನ್ನು ಮಂಡನೆ ಮಾಡಲಿದ್ದಾರೆ.
ರಾಜ್ಯ ಬಜೆಟ್ 2025 ಲೈವ್ ಸ್ಟ್ರೀಮಿಂಗ್: ಉಚಿತ ವೀಕ್ಷಣೆ ಎಲ್ಲಿ?
ರಾಜ್ಯ ಬಜೆಟ್ 2025 ಅನ್ನು ದೂರದರ್ಶನ (ಡಿಡಿ ನ್ಯೂಸ್),ರಾಜ್ಯ ಹಣಕಾಸು ಸಚಿವಾಲಯದ ಅಧಿಕೃತ ವೆಬ್‌ಸೈಟ್,ಮತ್ತು ಸರ್ಕಾರದ ಅಧಿಕೃತ ಯೂಟ್ಯೂಬ್ (YouTube) ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುವುದು.
ಈಗಾಗಲೇ ಫೆಬ್ರವರಿ 6 ರಿಂದ ನಿರಂತರವಾಗಿ ಸಿದ್ದರಾಮಯ್ಯ ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದಾರೆ. ಬಜೆಟ್ ಮಂಡನೆ ತಯಾರಿ ನಡೆಸಿದ್ದಾರೆ. ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 2023ರ ಜುಲೈನಲ್ಲಿ ಹಣಕಾಸು ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿದರು.
ಕೃಷಿಕರ ಪರ ಬಜೆಟ್ ಮಂಡನೆ
ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ತಯಾರಿ ಮಾಡುವಾಗ ನಾವು ಇತಿಮಿತಿಯಲ್ಲಿ ಮಾಡಿದ್ದೇವೆ ಯಾವೆಲ್ಲಾ ಅಂಶಗಳನ್ನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರ್ತೀನಿ ಎಂಬ ಮಾತು ಕೊಡ್ತೀನಿ ಎಂದರು. 2025-26ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ 16ನೇ ಬಾರಿ ಮತ್ತು ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರು ಎಂಬ ಹೆಗ್ಗಳಿಕೆಯನ್ನು ಸಿಎಂ ಸಿದ್ದರಾಮಯ್ಯ ಪಡೆಯಲಿದ್ದಾರೆ.
ಕಾವೇರಿ ನೀರಿನ ಬೆಲೆ ಏರಿಕೆ, ಮುಡಾಪ್ರಕರಣ, ಗ್ಯಾರಂಟಿ ಯೋಜನೆಗಳ ಅಸಮರ್ಪಕ ಅನುಷ್ಠಾನ, ಸಾಲದ ಸುಳಿಯಲ್ಲಿ ಸರ್ಕಾರ, ಬೆಲೆ ಏರಿಕೆ. ಮೆಟ್ರೋ ದರ ಏರಿಕೆ, ಕೆಎಸ್‌ಆರ್ ಟಿಸಿ ದರ ಏರಿಕೆ ಮುಂತಾದ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸರ್ಕಾರದ ವಿರುದ್ಧ ಸಮರ ಸಾರಲು ಮುಂದಾಗಿವೆ.
ಸಿಎಂ ಸಿದ್ದರಾಮಯ್ಯನವರು ಸದ್ಯ ಮಂಡಿನೋವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ವಿಧಾನಸೌಧದಲ್ಲಿ ವಿಶೇಷ ರ್ಯಾಂಪ್ ಸಿದ್ದಗೊಳ್ಳುತ್ತಿದೆ. ಬಜೆಟ್ ಮಂಡನೆ ಅವರಿಗೆ ವಿಧಾನಸೌಧದಕ್ಕೆ ಆಗಮಿಸಲು ಅನುಕೂಲ ಆಗಲಿ ಎಂದು ರ್ಯಾಂಪ್ ವ್ಯವಸ್ಥೆ ಕಲ್ಪಿಸಲಾಗಿದೆ.


Click it and Unblock the Notifications