Karnataka Budget 2025 Live: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಇಡೀ ರಾಜ್ಯದ ಜನತೆಯ ಚಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸುವ ಬಜೆಟ್‌ನತ್ತ ನೆಟ್ಟಿದೆ. ಹೌದು, ಇಂದು (ಮಾರ್ಚ್ 7) ಸಿಎಂ ಸಿದ್ದರಾಮಯ್ಯ (Siddaramaiah) ರಾಜ್ಯ ಬಜೆಟ್ (Karnataka Budget 2025) ಮಂಡನೆ ಮಾಡಲಿದ್ದಾರೆ. ಇದು ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಆಗಿದೆ. ವಿಶೇಷವೆಂದರೆ, ಸಿಎಂ ಆಗಿ 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಅತ್ಯಧಿಕ ಬಜೆಟ್ ಮಂಡನೆ ಮಾಡಿರುವ ದಾಖಲೆಯನ್ನು ಸಿದ್ದರಾಮಯ್ಯ ಹೆಸರಿಗೆ ಸೇರ್ಪಡೆಯಾಗಿದೆ.
ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಒತ್ತಡದ ನಡುವೆ ಸಿದ್ದರಾಮಯ್ಯ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಈ ಬಾರಿ ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂದು ಜನಸಾಮಾನ್ಯರಲ್ಲಿ ಭಾರೀ ನಿರೀಕ್ಷೆ ಹುಟ್ಟಿದೆ. ಈಗಾಗಲೇ ಬಜೆಟ್ ಮಂಡನೆಗೆ ಬೇಕಾದ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಡುತ್ತಿದೆ. ಈ ಕಾರಣದಿಂದ ಅವರು ಈ ಬಾರಿ ಕುಳಿತುಕೊಂಡೇ ಬಜೆಟ್ ಭಾಷಣ ಮಾಡುವ ಸಾಧ್ಯತೆಯಿದೆ. ಬನ್ನಿ, ಬಜೆಟ್ ಯಾವಾಗ? ಎಲ್ಲಿ ಉಚಿತವಾಗಿ ಲೈವ್ ವೀಕ್ಷಣೆ ಮಾಡಬೇಕು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.

ಸಿದ್ದರಾಮಯ್ಯ ಬಜೆಟ್ ಭಾಷಣ ಪ್ರಾರಂಭ ಯಾವಾಗ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುವ ಸಮಯ, ಬಜೆಟ್ ಭಾಷಣ ಎಷ್ಟು ಗಂಟೆಗೆ ಪ್ರಾರಂಭ ಎಂಬ ಬಗ್ಗೆ ಹಲವರಿ ಕುತೂಹಲವಿದೆ. ಈಗಾಗಲೇ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಶುರುವಾಗಿದೆ. ಇಂದು (ಮಾರ್ಚ್ 7, ಶುಕ್ರವಾರ) ರಾಜ್ಯ ಬಜೆಟ್ 2025 ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬೆಳಗ್ಗೆ 10.15 ಗಂಟೆಗೆ ಬಜೆಟ್ ಭಾಷಣ ಪ್ರಾರಂಭಿಸಲಿದ್ದಾರೆ.
ಬಜೆಟ್ ಭಾಷಣವನ್ನು ಎಲ್ಲಿ ಉಚಿತವಾಗಿ ವೀಕ್ಷಣೆ ಮಾಡಬೇಕು?
ಕರ್ನಾಟಕ ಬಜೆಟ್ 2025 ಮಂಡಿಸುವಾಗ ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಭಾಷಣವನ್ನು ವಿಧಾನ ಮಂಡಲದ ವೆಬ್‌ಕಾಸ್ಟ್‌ನಲ್ಲಿ ನೇರ ಪ್ರಸಾರ ನೋಡಬಹುದು. ಹಾಗೆಯೇ ರಾಜ್ಯದ ವಿವಿಧ ಖಾಸಗಿ ಸುದ್ದಿವಾಹಿನಿಗಳು ಸಿದ್ದರಾಮಯ್ಯ ಬಜೆಟ್ ಭಾಷಣವನ್ನು ನೇರ ಪ್ರಸಾರ ಮಾಡಲಿವೆ.
ಬಜೆಟ್ ಗಾತ್ರ 4 ಲಕ್ಷ ಕೋಟಿ ದಾಟುವ ನಿರೀಕ್ಷೆ
ಸಿಎಂ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 16 ನೇ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ರಾಜ್ಯದಲ್ಲಿ ಅತಿಹೆಚ್ಚು ಬಜೆಟ್ ಮಂಡನೆ ದಾಖಲೆಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದಾಗ (1995-96) ಮೊದಲ ಮುಂಗಡ ಪತ್ರ ಮಂಡನೆ ಮಾಡಿದ್ದರು. ಮೊದಲ ಬಜೆಟ್‌ನಲ್ಲಿ ಅವರು, ಕೇವಲ 10,859 ಕೋಟಿ ಗಾತ್ರ ಬಜೆಟ್ ಮಂಡಿಸಿದ್ದರು. ಇಂದು ಮಂಡನೆ ಮಾಡಲಿರುವ 16ನೇ ಬಜೆಟ್ ಬರೋಬ್ಬರಿ 4 ಲಕ್ಷ ಕೋಟಿ ರೂ. ದಾಟುವ ನಿರೀಕ್ಷೆ ದಟ್ಟವಾಗಿದೆ. ಈ ಬಜೆಟ್ ಸಾಲದಲ್ಲೂ ದಾಖಲೆ ಸೃಷ್ಟಿಸಲಿದೆ.
ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ಅನುದಾನ
2024-25ರಲ್ಲಿ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ. ಆಗಿತ್ತು. ಈ ಬಾರಿಯ ಬಜೆಟ್ ಗಾತ್ರವು 4 ಲಕ್ಷ ಕೋಟಿ ರೂ. ಮೀರುವ ಸಾಧ್ಯತೆಯಿದೆ. ಉಚಿತ ಐದು ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿಗೂ ಹೆಚ್ಚು ಅನುದಾನ ಹಂಚಿಕೆ ಮಾಡಬಹುದು. ಇದಕ್ಕೆ ಕಾರಣ, ಉಚಿತ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದೆ. ಇನ್ನೂ ಅಭಿವೃದ್ಧಿ ಕಾರ್ಯಗಳಿಗಾಗಿ 55,877 ಕೋಟಿ ಅನುದಾನ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ರಾಹುಕಾಲ ಆರಂಭಕ್ಕೂ ಮೊದಲೇ ಬಜೆಟ್ ಮಂಡನೆ
ಇಂದು ಬೆಳಗ್ಗೆ 11.01ಕ್ಕೆ ರಾಹುಕಾಲ ಆರಂಭವಾಗುತ್ತದೆ. ಇದಕ್ಕೂ ಮೊದಲು ಬೆಳಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಮಂಡಿ ನೋವಿನಿಂದ ಬಳಲುತ್ತಿರುವ ಹಿನ್ನೆಲೆ ಮೊದಲ 10 ನಿಮಿಷ ಮಾತ್ರ ನಿಂತುಕೊಂಡು ಬಜೆಟ್ ಮಂಡಿಸಲಿದ್ದಾರೆ. ಅಂದಾಜು 1.25 ಲಕ್ಷ ಕೋಟಿ ಸಾಲದ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ. ಅಭಿವೃದ್ಧಿ ಕಾರ್ಯ, ಗ್ಯಾರಂಟಿಗಳನ್ನು ಬ್ಯಾಲೆನ್ಸ್ ಮಾಡುವ ದೊಡ್ಡ ಸವಾಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿದೆ.
More From GoodReturns

Karnataka Budget 2026: ಸಿದ್ದರಾಮಯ್ಯ ಬಜೆಟ್ ಮಂಡಣೆ ಎಷ್ಟು ಗಂಟೆಗೆ ಆರಂಭ? ಎಲ್ಲಿ ನೋಡಬಹುದು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್‌ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications