ಕೇಂದ್ರ ಸರ್ಕಾರವು ಫೆ.1 ರಂದು ಬಜೆಟ್ ಮಂಡನೆ ಮಾಡಿದ್ದು ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಆಯವ್ಯಯ ಮಂಡನೆಗೆ ತಯಾರಿ ಆರಂಭಿಸಿದೆ.ರಾಜ್ಯ ಬಜೆಟ್‌ಗೆ ದಿನಗಣನೆ ಆರಂಭವಾಗಿದ್ದು, ನಾಳೆಯಿಂದ (ಮಾ. 3) ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ.
ಹೌದು, ಮಾರ್ಚ್ 3ರಿಂದ 21ರವರೆಗೆ ರಾಜ್ಯ ಬಜೆಟ್ ಅಧಿವೇಶನ ನಡೆಯಲಿದ್ದು, ಬಜೆಟ್ ಅಧಿವೇಶನದ ಆರಂಭದಲ್ಲಿ ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಲಿದ್ದಾರೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಮಾರ್ಚ್ 7ರಂದು 2025-26ನೇ ಸಾಲಿನರಾಜ್ಯ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ.
ರಾಜ್ಯ ಬಜೆಟ್ ಅಧಿವೇಶನವು ಶನಿವಾರ ಮತ್ತು ಭಾನುವಾರಗಳನ್ನು ಹೊರತುಪಡಿಸಿ 14 ದಿನಗಳ ಕಾಲ ಬಜೆಟ್‌ಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತೇವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಗಳುನಡೆಯುತ್ತವೆ. ಈ ಸಂದರ್ಭದಲ್ಲಿ ಹಲವಾರು ಬೆಳವಣಿಗೆಗಳು, ಹೊಸ ಯೋಜನೆಗಳು, ಮತ್ತು ವಿವಿಧ ಪ್ರಸ್ತಾವನೆಗಳ ಮೇಲೆ ಚರ್ಚೆಗಳು ನಡೆಯಲಿವೆ.
2025-26ನೇ ಸಾಲಿನ ರಾಜ್ಯ ಬಜೆಟ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸಿದ್ಧತೆಗಳು ಮಾಡಿಕೊಂಡಿದ್ದಾರೆ.5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ಸಹ ನಡೆಸಿದ್ದಾರೆ.
16ನೇ ದಾಖಲೆಯ ಬಜೆಟ್
ಈ ಬಾರಿ ವಿಧಾನ ಸಭೆಯಲ್ಲಿ 16ನೇ ದಾಖಲೆಯ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಬೆಲೆ ಏರಿಕೆಗೆ ಬಗ್ಗೆ ಭಾರೀ ನಿರೀಕ್ಷೆಯನ್ನು ಸಾಮಾನ್ಯ ಜನರು ಇಟ್ಟಿಕೊಂಡಿದ್ದಾರೆ. ಹೊಸ ವರ್ಷದ ಮೊದಲ ಅಧಿವೇಶನ ಇದಾಗಿದ್ದು, ಮಾರ್ಚ್ 3ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮಾರ್ಚ್ 4, 5, 6ರಂದು ಚರ್ಚೆ ನಡೆಯಲಿದೆ. ಮಾರ್ಚ್ 7ರ ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಮಾಹಿತಿಯನ್ನು ತಿಳಿಸಿದ್ದಾರೆ.
ಈಗಾಗಲೇ ಫೆಬ್ರವರಿ 6 ರಿಂದ ನಿರಂತರವಾಗಿ ಸಿದ್ದರಾಮಯ್ಯ ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದಾರೆ. ಬಜೆಟ್ ಮಂಡನೆ ತಯಾರಿ ನಡೆಸಿದ್ದಾರೆ. ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 2023ರ ಜುಲೈನಲ್ಲಿ ಹಣಕಾಸು ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿದರು.
ಕೃಷಿಕರ ಪರ ಬಜೆಟ್ ಮಂಡನೆ
ದ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ತಯಾರಿ ಮಾಡುವಾಗ ನಾವು ಇತಿಮಿತಿಯಲ್ಲಿ ಮಾಡಿದ್ದೇವೆ ಯಾವೆಲ್ಲಾ ಅಂಶಗಳನ್ನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರ್ತೀನಿ ಎಂಬ ಮಾತು ಕೊಡ್ತೀನಿ ಎಂದರು. 2025-26ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ 16ನೇ ಬಾರಿ ಮತ್ತು ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರು ಎಂಬ ಹೆಗ್ಗಳಿಕೆಯನ್ನು ಸಿಎಂ ಸಿದ್ದರಾಮಯ್ಯ ಪಡೆಯಲಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ಸದ್ಯ ಮಂಡಿನೋವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ವಿಧಾನಸೌಧದಲ್ಲಿ ವಿಶೇಷ ರ್ಯಾಂಪ್ ಸಿದ್ದಗೊಳ್ಳುತ್ತಿದೆ. ಬಜೆಟ್ ಮಂಡನೆ ಅವರಿಗೆ ವಿಧಾನಸೌಧದಕ್ಕೆ ಆಗಮಿಸಲು ಅನುಕೂಲ ಆಗಲಿ ಎಂದು ರ್ಯಾಂಪ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕರ್ನಾಟಕದ 2025-26ನೇ ಸಾಲಿನ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎಂದು ಅಂದಾಜಿಸಲಾಗಿದೆ. 5 ಗ್ಯಾರಂಟಿ ಯೋಜನೆಗಳ ಘೋಷಣೆ, ಅನುಷ್ಠಾನದ ಬಳಿಕ ಕರ್ನಾಟಕ ಸರ್ಕಾರ ಖಜಾನೆ ಭರ್ತಿ ಮಾಡಲು ಹರಸಾಹಸ ಪಡುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಕರ್ನಾಟಕ ಸರ್ಕಾರದ ಬಜೆಟ್ ಮೇಲೆ ಅಪಾರ ನಿರೀಕ್ಷೆಗಳಿಲ್ಲ. ಕಾರಣ ಗ್ಯಾರಂಟಿ ಯೋಜನೆಗಳು. ಸರ್ಕಾರ ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಬದಲು ಈಗ ಇರುವ ಯೋಜನೆಗಳಿಗೆ ಅನುದಾನವನ್ನು ಹಂಚಿಕೆ ಮಾಡುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಚುನಾವಣೆಯೂ ಇಲ್ಲದ ಕಾರಣ ಜನಪ್ರಿಯ ಯೋಜನೆಗಳ ಮೊರೆ ಹೋಗದೆ ಆದಾಯ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications