ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ (ಫೆಬ್ರವರಿ 16) ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್‌ನಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಸಿಹಿಸುದ್ದಿಯನ್ನು ಸಿಎಂ ನೀಡಿದ್ದಾರೆ.
2024-25ನೇ ಸಾಲಿನ ಬಜೆಟ್ ಭಾಷಣ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಶೀಘ್ರವೇ 7ನೇ ವೇತನ ಆಯೋಗವನ್ನು ಜಾರಿ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ಸಮಿತಿ ವರದಿ ಆಧಾರದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

7ನೇ ವೇತನ ಆಯೋಗವನ್ನು ಜಾರಿಗೊಳಿಸಲು ಸರ್ಕಾರ ವಿಳಂಬ ಮಾಡುತ್ತಿದೆ. ಈ ನಡುವೆ ವೇತನ ಹೆಚ್ಚಳದ ಪ್ರಸ್ತಾವನೆಯು ಇಲ್ಲದಂತಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರಿ ನೌಕರರು ಈ ವರ್ಷ ವೇತನ ಹೆಚ್ಚಳವಿಲ್ಲದೆ ಉದ್ಯೋಗ ಮಾಡಬೇಕಾದ ಸ್ಥಿತಿ ಉಂಟಾಗಬಹುದು ಎಂದು ಇತ್ತೀಚೆಗೆ ವರದಿಯಾಗಿದೆ.
ಈ ನಡುವೆ ಬಜೆಟ್‌ನಲ್ಲಿ ಶೀಘ್ರವೇ 7ನೇ ವೇತನ ಆಯೋಗದ ಜಾರಿ ಬಗ್ಗೆ ಸುಳಿವು ನೀಡುವ ಮೂಲಕ ಮುಖ್ಯಮಂತ್ರಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಉದ್ಯೋಗಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇತನ ಆಯೋಗದ ವರದಿಯನ್ನು ಸ್ವೀಕರಿಸಿ ಹಣ ಮಂಜೂರು ಮಾಡುತ್ತಾರೆ ಎಂಬ ಭರವಸೆಯಲ್ಲಿದ್ದಾರೆ.
ಈ ಬಗ್ಗೆ ಇತ್ತೀಚೆಗೆ ಕೆಎಸ್‌ಜಿಎ ಕಾರ್ಯದರ್ಶಿ ಸದಾನಂದ ನೆಲಗುದ್ರಿ ಮಾತನಾಡಿ, "ವೇತನ ಹೆಚ್ಚಳದ ಬೇಡಿಕೆ ಬಹುಕಾಲದಿಂದ ಬಾಕಿ ಉಳಿದಿದ್ದು, ಅದನ್ನು ಪೂರೈಸುವ ಸರ್ಕಾರದ ಬದ್ಧತೆ," ಎಂದು ಒತ್ತಿ ಹೇಳಿದರು. ವೇತನ ಹೆಚ್ಚಳವನ್ನು ಬಜೆಟ್‌ನಲ್ಲಿ ಘೋಷಿಸುವ ಅಗತ್ಯವಿಲ್ಲ ಮತ್ತು ಸಿದ್ದರಾಮಯ್ಯ ಬಜೆಟ್ ಮಂಡನೆಯ ಹೊರಗೆ ಅದನ್ನು ತಿಳಿಸಬಹುದು ಎಂದು ಕೆಎಸ್‌ಜಿಎ ಹೇಳಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್‌ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications