ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಫೆಬ್ರವರಿ 16) ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ್ದಾರೆ. ಸಿದ್ಧರಾಮಯ್ಯರ ದಾಖಲೆಯ 15ನೇ ಬಜೆಟ್ ಇದಾಗಿದ್ದು, ಸಿಎಂ ಆಗಿ ಎಂಟನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ.
ಈ ಬಜೆಟ್‌ನಲ್ಲಿ ಅನುದಾನ ಹಂಚಿಕೆ ವಿಚಾರಕ್ಕೆ ಬಂದಾಗ ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟಂತೆ ಕಾಣುತ್ತಿದೆ. ಎಲ್ಲಾ ಕ್ಷೇತ್ರಗಳಿಗೆ ಸರ್ಕಾರ ಹಂಚಿಕೆ ಮಾಡಿದ ಅನುದಾನದ ಲೆಕ್ಕಾಚಾರವನ್ನು ನಾವು ನೋಡಿದಾಗ ಶಿಕ್ಷಣ ಕ್ಷೇತ್ರಕ್ಕೆ ಅಧಿಕ ಹಣಕಾಸು ಹಂಚಿಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅನುದಾನ, ಇತರೆ ವಿವರ ಇಲ್ಲಿದೆ ಮುಂದೆ ಓದಿ....

ಶಿಕ್ಷಣ ಕ್ಷೇತ್ರಕ್ಕೆಷ್ಟು ಅನುದಾನ?
ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರವು ಅತೀ ಅಧಿಕ ಅನುದಾನವನ್ನು ನೀಡಿದೆ. ಸುಮಾರು 44422 ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಘೋಷಿಸಿದೆ. ಅದಾದ ಬಳಿಕ ಹೆಚ್ಚಿನ ಅನುದಾನವಾದ 34406 ಕೋಟಿ ರೂಪಾಯಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಲಾಗುತ್ತದೆ. ಪಶುಸಂಗೋಪನೆಗೆ ಅತೀ ಕಡಿಮೆ ಅಂದರೆ 3307 ಕೋಟಿ ರೂಪಾಯಿ ನೀಡಲಾಗಿದೆ.
ಕನ್ನಡ ಶಾಲೆ ಅಭಿವೃದ್ಧಿಗೆ ಸರ್ಕಾರದ ಕ್ರಮ
ಮುಖ್ಯವಾಗಿ ಕನ್ನಡ ಶಾಲೆಯನ್ನು ಅಭಿವೃದ್ಧಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. "ಗುಣಾತ್ಮಕ ಶಿಕ್ಷಣ & ಅಗತ್ಯ ಮೂಲ ಸೌಕರ್ಯ ಒದಗಿಸಲು ವಿಶೇಷ ಗಮನ ಹರಿಸಲಾಗಿದೆ. ಸರ್ಕಾರಿ ಶಾಲೆ ಮಕ್ಕಳು ಕೂಡ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿ ಆಗಬೇಕೆಂಬ ಆಶಯದ ಜೊತೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ," ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
"ಪೂರ್ವ ಪ್ರಾಥಮಿಕ ಹಂತದಿಂದಲು ಪದವಿ ಪೂರ್ವ ತರಗತಿ ತನಕ ಶಿಕ್ಷಣವನ್ನು ಒಂದೇ ಸೂರಿನ ಅಡಿಯಲ್ಲಿ ನೀಡುವ ಉದ್ದೇಶವಿದೆ. ಆದ್ದರಿಂದಾಗಿ ಕೆಲವು ಶಾಲೆಗಳನ್ನ ಸಿ.ಎಸ್.ಆರ್. ಅನುದಾನ ಅಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತದೆ," ಎಂದು ಸಿಎಂ ಹೇಳಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ
1. 2024-25ನೇ ಸಾಲಿನಲ್ಲಿ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
2. ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
3. 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು
J-PAL ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
4. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
5. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು.
6. 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು.
7. ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ- ಕೇಂದ್ರಗಳನ್ನಾಗಿ ರೂಪಿಸಲು ನಾವು-ಮನುಜರು ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.
8. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
9. ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ
10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು.
10. ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು.
11. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು
20,000 ವಿದ್ಯಾರ್ಥಿಗಳಿಗೆ NEET/JEE/CET ತರಬೇತಿ ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
12. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ.
13. ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು.
ಉನ್ನತ ಶಿಕ್ಷಣ
1. ಆಯೋಗವು ಶೀಘ್ರದಲ್ಲಿಯೇ ವರದಿಯನ್ನು ಸಲ್ಲಿಸಲಿದ್ದು, ಅದರಂತೆ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು.
2. ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ಗಳ ಉನ್ನತೀಕರಣಕ್ಕಾಗಿ ಒಟ್ಟು 30 ಕೋಟಿ ರೂ. ಅನುದಾನ ಒದಗಿಸಲಾಗುವುದು.
3. 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ
250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ ಒದಗಿಸಲಾಗುವುದು. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಅಗತ್ಯತೆಗನುಗುಣವಾಗಿ ತುಂಬಲಾಗುವುದು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು.
4. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು.
5. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (UVCE) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಸರ್ಕಾರದಿಂದ
100 ಕೋಟಿ ರೂ. ಅನುದಾನ ಒದಗಿಸಲಾಗುವುದು. ಜೊತೆಗೆ ಸಿ.ಎಸ್.ಆರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುವುದು.
6. ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಗೊಳಿಸಲು ಬೇರು-ಚಿಗುರು ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
7. ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ತಮ್ಮ ಆವಿಷ್ಕಾರಗಳಿಗೆ ಪೇಟೆಂಟ್ ಪಡೆದುಕೊಳ್ಳಲು ಅಗತ್ಯವಾದ ತಾಂತ್ರಿಕ ಮತ್ತು ಆರ್ಥಿಕ ನೆರವು ನೀಡಲು 10 ಕೋಟಿ ರೂ.ಗಳ
Corpus Fund ಸ್ಥಾಪಿಸಲಾಗುವುದು.
8. ವಿಷಯ ತಜ್ಞರು, ನಾಗರಿಕ ಸೇವಾ ಅಧಿಕಾರಿಗಳು ಮತ್ತು ಉದ್ಯಮಿಗಳಿಂದ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಎಂಬ ಕಾರ್ಯಕ್ರಮದಡಿ ಮಾರ್ಗದರ್ಶನವನ್ನು (Mentorship) ನೀಡಲಾಗುವುದು.
9. ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡವನ್ನು 54 ಕೋಟಿ ರೂ. ವೆಚ್ಚದಲ್ಲಿ ಹಾಗೂ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ಕಟ್ಟಡ ನಿರ್ಮಾಣವನ್ನು
116 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.
ವೈದ್ಯಕೀಯ ಶಿಕ್ಷಣ
1. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು.
2. 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
3. ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು.
4. ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪಿಸಲಾಗುವುದು.
5. ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗುವುದು.
6. ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆಯನ್ನು ನೀಡಲು ಕ್ರಮವಹಿಸಲಾಗುವುದು.
7. ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
8. ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭಿಸಲಾಗುವುದು.
9. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಸಲಾಗುವುದು.
10. ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು.
11. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL) ಅನ್ನು ಸ್ಥಾಪಿಸಲಾಗುವುದು.
12. ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು Health Repository ಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.
13. ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ. ವೈದ್ಯಕೀಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
14. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡವನ್ನು ನಿರ್ಮಿಸಲಾಗುವುದು.
More From GoodReturns

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್‌ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications