ಉಚಿತ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ. ಈ ಫ್ರೀ ಯೋಜನೆಗಳಲ್ಲಿ ಒಂದಾದ 'ಶಕ್ತಿ' ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಯೋಜನೆಯು ಸಾಲದ ಹೊರೆ ಮತ್ತಷ್ಟು ಹೆಚ್ಚು ಮಾಡಿದೆ ಎನ್ನಲಾಗಿದೆ. ಹೌದು,ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಡಿಯಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ 5,200 ಕೋಟಿ ನಷ್ಟವಾಗಿ ಎಂದು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ಈ ಕುರಿತು ವಿಧಾನ ಪರಿಷತ್‌ನಲ್ಲಿ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಮಾತ್ರವಲ್ಲದೆ, ಭಾರತ ಮತ್ತು ಪ್ರಪಂಚದಾದ್ಯಂತದ ಸಾರ್ವಜನಿಕ ಸಾರಿಗೆ ಸೇವೆಗಳು ಲಾಭಕ್ಕಿಂತ ಹೆಚ್ಚಿನ ನಷ್ಟವನ್ನೇ ಎದುರಿಸುತ್ತಿವೆ. ಆದರೆ ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಬಿಎಂಟಿಸಿಗಳಿಗೆ 5,200 ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿಯನ್ನು ತಿಳಿಸಿದ್ದಾರೆ.

ರಾಜ್ಯದಲ್ಲಿ ಒಂದು ಗ್ರಾಮವು 1.5 ಕಿ.ಮೀ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ಸೇವೆಯನ್ನು ಹೊಂದಿದ್ದರೆ ಅದನ್ನು ಬಸ್ ಸೇವೆ ಹೊಂದಿರುವ ಗ್ರಾಮವೆಂದೇ ಸರ್ಕಾರ ಪರಿಗಣಿನೆಗೆ ತಗೆದುಕೊಳ್ಳಲಾಗುತ್ತದೆ ಈ ರೀತಿಯಲ್ಲಿ ಗಣನೆಗೆ ತಗೆದುಕೊಂಡರೆ ,
ನಮ್ಮ ರಾಜ್ಯದ ಸರಿ ಸುಮಾರು ಶೇ.97ರಷ್ಟು ಹಳ್ಳಿಗಳಿಗೆ ನಾವು ಬಸ್ ಸೇವೆಗಳನ್ನು ಒದಗಿಸುತ್ತಿದ್ದೇವೆ. ಹಾಗೂ ಎಲ್ಲ ಬಸ್ ಸೇವೆಗಳೂ ಸಹ ಶೇ. 40 ರಷ್ಟು ನಷ್ಟದಲ್ಲಿವೆ ಶೇ.30 ರಷ್ಟರಲ್ಲಿ ಲಾಭವೂ ಇಲ್ಲ, ನಷ್ಟವೂ ಇಲ್ಲ, ಉಳಿದ ಶೇ. 30 ರಷ್ಟು ಮಾತ್ರ ಇದ ಎಂದರು.
ನಮ್ಮ ಸರ್ಕಾರ ಲಾಭ ನಷ್ಟ ಎನ್ನದೇ ಎಲ್ಲಾ ಮಾರ್ಗಗಳಲ್ಲಿಯೂ ಬಸ್ ಸೇವೆ ಒದಗಿಸುತ್ತಿದೆ. ಖಾಸಗಿ ವಲಯ ಲಾಭ ಗಳಿಸುವ ಮಾರ್ಗಗಳಲ್ಲಿ ಮಾತ್ರ ಸೇವೆ ಒದಗಿಸಲಿದ್ದು, ಸರ್ಕಾರ ಇದಕ್ಕೆ ಭಿನ್ನವಾದ ರೀತಿಯಲ್ಲಿ ಇದೆ. ಇನ್ನೂ ಸಾರಿಗೆ ಬೇಕಾದ ಕಾರ್ಯಾಚರಣೆಯ ವೆಚ್ಚವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ.
ಈಗಲೇ ಸಾರಿಗೆ ಇಲಾಖೆ ಡೀಸೆಲ್ ದರದಲ್ಲಿ ಏರಿಕೆ, ನೌಕರರ ಸಂಬಳ, ಬಿಡಿಭಾಗಗಳ ಬೆಲೆಯಲ್ಲಿನ ಏರಿಕೆ ಮತ್ತು ಇತರ ವೆಚ್ಚಗಳು ನಷ್ಟಕ್ಕೆ ಕಾರಣವಾಗಿವೆ ಎಂದು ಹೇಳಿಕೆಯನ್ನು ನೀಡಿದ್ದಾರೆ. ನಷ್ಟದ ಪರಿಸ್ಥತಿಯಲ್ಲಿ ಇದ್ದರೂ ಸಹ ಮಹಿಳೆಯರಿಗೆ ಉಚಿತ ಸೇವೆಯನ್ನು ನೀಡುತ್ತಿದೆ.
ಸಾರಿಗೆ ಇಲಾಖೆಯ ನಷ್ಟವನ್ನು ಸರಿದೂಗಿಸಲು ಹಾಗೂ ಸಾರಿಗೆ ನಿಗಮಗಳ ಆರ್ಥಿಕ ಪುನಶ್ವೇತನಕ್ಕೆ ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಇಂಧನ ಬೆಲೆ ಹೆಚ್ಚಳದೊಂದಿಗೆ ಸಿಬ್ಬಂದಿ ಹಾಗೂ ವಾಹನ ಬಿಡಿಭಾಗಗಳು ಅಧಿಕಗೊಂಡಿವೆ. ಆರ್ಥಿಕ ಹೊರೆ ಉಂಟಾಗಿದ್ದರಿಂದ ಕಳೆದ ಜನವರಿಯಲ್ಲಿ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲಾಗಿದೆ.
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ 2024-25ನೇ ಸಾಲಿನಲ್ಲಿ ಮೀಸಲಿಟ್ಟಿದ್ದ 9,978 ಕೋಟಿ ಅನುದಾನ ಪೈಕಿ 7,796 ಕೋಟಿ ಈಗಾಗಲೇ ಮಂಜೂರಾಗಿದೆ. ಬಾಕಿ ಸುಮಾರು 2 ಸಾವಿರ ಕೋಟಿ ಬಿಡುಗಡೆಯಾಗಬೇಕಿದೆ. ಅನುದಾನ ಮಂಜೂರಾದ ಬಳಿಕ ಸಾರಿಗೆ ನಿಗಮಗಳಿಗೆ ನೀಡಲಾಗುವುದು ಎಂದು ಮಾಹಿತಿಯನ್ನು ತಿಳಿಸಿದ್ದರು.
ಬಿಎಂಟಿಸಿ ನಿಗಮ ಹೊರತುಪಡಿಸಿದರೆ ಹಿಂದಿನ ಸರ್ಕಾರವು ಇನ್ನಿತರ ಸಾರಿಗೆ ನಿಗಮಗಳಿಗೆ ಬಸ್ ಖರೀದಿಗೆ ಮುಂದಾಗಿರಲಿಲ್ಲ. ಆದರೆ ಸರ್ಕಾರ ಅಧಿಕಾರ ಬಂದ ಬಳಿಕ ಇದುವರೆಗೂ 5360 ಬಸ್ ಖರೀದಿ ಮಾಡಿದೆ.
ಸಾರಿಗೆ ಇಲಾಖೆಯಲ್ಲಿ 2016ರಿಂದ 23ರವರೆಗೆ 14 ಸಾವಿರ ಮಂದಿ ನೌಕರರು ನಿವೃತ್ತರಾಗಿದ್ದರಿಂದ ಉದ್ಯೋಗ ನೇಮಕಾತಿ ನಡೆದಿರಲಿಲ್ಲ. ಖಾಲಿ ಹಾಗೂ ತೆಹುದ್ದೆಗಳ ಭರ್ತಿಗಾಗಿ 9 ಸಾವಿರ ಮಂದಿಯನ್ನು ನೇಮಕಾತಿ ಮಾಡಲಾಗಿದೆ. ಇನ್ನೂ 1 ಸಾವಿರ ಮಂದಿಗೆ ಅನುಕಂಪ ಆಧಾರದ ಮೇರೆಗೆ ಉದ್ಯೋಗ ನೀಡಲಾಗಿದೆ. ದಿನಕ್ಕೆ 1.96 ಲಕ್ಷ ಟ್ರಿಪ್‌ಗಳು ಸಾರಿಗೆ ನಿಗಮಗಳ ಬಸ್ಗಳು ಕಾರ್ಯಾಚರಣೆ ಮಾಡುತ್ತಿವೆ ಎಂದು ಅವರು ಮಾಹಿಯನ್ನು ತಿಳಿಸಿದ್ದಾರೆ.


Click it and Unblock the Notifications