ಗಾಯದ ಮೇಲೆ ಬರೆ! ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ ಹೌದು, ಹೊಸ ವರ್ಷದ ಮರು ದಿನವೇ ರಾಜ್ಯದ ಜನರಿಗೆ ಸರ್ಕಾರ ಶಾಕಿಂಗ್ ಸುದ್ದಿ ಕೊಟ್ಟಿದೆ. ಬಸ್ ಪ್ರಯಾಣ ದರ (bus fare hike) ಶೇಕಡಾ 15ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ದರ ಏರಿಕೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಹೆಚ್ಚಳ
ಇಮ್ಮುಂದೆ ಬಸ್ ಪ್ರಯಾಣ ಶೇಕಡಾ 15ರಷ್ಟು ಹೆಚ್ಚಳವಾಗಲಿದೆ. ಶೇಕಡಾ 15 ರಷ್ಟು ದರ ಏರಿಕೆ ಅಂದ್ರೆ ನೀವು ಇದುವರೆಗೂ 100 ರೂಪಾಯಿಗೆ ಟಿಕೆಟ್ ಕೊಟ್ಟು ಪ್ರಯಾಣಿಸುತ್ತಿದ್ದರೆ ಇನ್ನು ಮುಂದೆ 115 ರೂಪಾಯಿ ಪಾವತಿಸಬೇಕು. ಸರ್ಕಾರಿ ಬಸ್‌ನಲ್ಲಿ 200 ರೂಪಾಯಿ ಕೊಟ್ಟು ಪ್ರಯಾಣಿಸುವವರು 230 ರೂಪಾಯಿಗಳ ಹಣವನ್ನು ಕೊಟ್ಟು ಪ್ರಯಾಣ ಮಾಡಬೇಕಾಗುತ್ತದೆ.
ಬಸ್ ಪ್ರಯಾಣ ದರ ಏರಿಕೆಗೆ ಕಾರಣವೇನು?
ಪ್ರಯಾಣ ದರ ಏರಿಕೆಗೆ ಕಾರಣ ವಿವರಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಇಂಧನ ಬೆಲೆ ಹೆಚ್ಚಳ ಮತ್ತು ನೌಕರರ ಮೇಲಿನ ವೆಚ್ಚದಂತಹ ಕಾರ್ಯಾಚರಣೆ ವೆಚ್ಚದಲ್ಲಿ ಭಾರಿ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
9 ವರ್ಷಗಳ ಹಿಂದೆ ಬಸ್ ಪ್ರಯಾಣ ದರ ಹೆಚ್ಚಿಸಲಾಗಿತ್ತು. ಕಳೆದ ಬಾರಿ 2015ರ ಜ.10ರಂದು ರಾಜ್ಯ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಏರಿಕೆಯಾಗಿದ್ದು, ಡೀಸೆಲ್ ದರ ಲೀಟರ್ ಗೆ 60.90 ರೂ. ನಷ್ಟಿತ್ತು. ಅಲ್ಲಿಂದೀಚೆಗೆ ಡೀಸೆಲ್ ದರದಲ್ಲಿ ಗಣನೀಯ ಏರಿಕೆಯಾಗಿದ್ದು, ಇದರ ಪರಿಣಾಮ ಬಸ್ ಗಳ ಓಡಾಟದ ವೆಚ್ಚದ ಮೇಲೆ ಕಾಣುತ್ತಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ
ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ, ಹೆಚ್.ಡಿ ಕುಮಾರಸ್ವಾಮಿ ಅವರು, ಈ ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರ್ಕಾರ ಎಂದು ಕರೆಯುತ್ತಾರಾ? ಈ ಸರ್ಕಾರ ಬಂದಾಗಿನಿಂದ ಬರೀ ಬೆಲೆ ಏರಿಕೆ ಮಾಡುವುದೇ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ರಾಜ್ಯದಲ್ಲಿ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರ್ಕಾರ ಪ್ರಯಾಣ ದರವನ್ನು ಶೇ.15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೂ ಅಭ್ಯಾಸವಾಗಿ ಹೋಗಿದೆ. ಎರಡು ದಿನ ಆಕ್ರೋಶ ವ್ಯಕ್ತಪಡಿಸಿ ಮೂರನೇ ದಿನ ಮರೆತು ಹೋಗಿ, ಪ್ರಯಾಣ ದರ ಏರಿಕೆಗೆ ಅಡ್ಜೆಸ್ಟ್ ಆಗುತ್ತಾರೆ. ಇದು ನೈಜ ಪರಿಸ್ಥಿತಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?



Click it and Unblock the Notifications