ಕರ್ನಾಟಕಕ್ಕೆ ಜೂನ್ ತಿಂಗಳಲ್ಲಿ ಮದ್ಯ ಮಾರಾಟದಿಂದ 2460 ಕೋಟಿ ರುಪಾಯಿ ಆದಾಯ ಬಂದಿದೆ. ಮೇ ತಿಂಗಳಿಗೆ ಹೋಲಿಸಿದರೆ ಇದು ಹೆಚ್ಚು. ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಆರ್ಥಿಕ ಸಮಸ್ಯೆ ಎದುರಾಗಿರುವಾಗ ತುಂಬ ಅಗತ್ಯ ಇರುವ ಹಣಕಾಸು ಆದಾಯದ ಮೂಲ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಮದ್ಯ ಮಾರಾಟದ ಮೂಲಕ 1,400 ಕೋಟಿ ರುಪಾಯಿ ಆದಾಯ ಬಂದಿತ್ತು.
ಲೈಸೆನ್ಸ್ ಶುಲ್ಕದಲ್ಲಿನ ಹೆಚ್ಚಳ ಮತ್ತು ಹಲವು ಮಳಿಗೆಗಳಿಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದರಿಂದ ಆದಾಯದಲ್ಲಿ ಗಮನಾರ್ಹವಾದ ಏರಿಕೆ ಆಗಿದೆ. ಒಟ್ಟು 2,460 ಕೋಟಿ ರುಪಾಯಿಯ ಆದಾಯದ ಪೈಕಿ 2,000 ಕೋಟಿ ಬಂದಿರುವುದು ಭಾರತೀಯ ಮದ್ಯದಿಂದ ಹಾಗೂ 190 ಕೋಟಿ ರುಪಾಯಿ ಬಿಯರ್ ಮಾರಾಟದಿಂದ ಎಂದು ಕರ್ನಾಟಕ ಅಬಕಾರಿ ಇಲಾಖೆ ತಿಳಿಸಿದೆ.

"270 ಕೋಟಿ ರುಪಾಯಿಯಷ್ಟು ಮೊತ್ತ ಪರವಾನಗಿ ಶುಲ್ಕದ ರೂಪದಲ್ಲಿ ಬಂದಿದೆ" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 56.30 ಲಕ್ಷ ಭಾರತೀಯ ಮದ್ಯ ಮತ್ತು 21.54 ಲಕ್ಷ ಬಾಕ್ಸ್ ಬಿಯರ್ ಮಾರಾಟ ಮಾಡಲಾಗಿದೆ. ಅತಿ ಹೆಚ್ಚು ಮದ್ಯ ಸೇವನೆ ಮಾಡುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. 2020- 21ನೇ ಸಾಲಿಗೆ 22,700 ಕೋಟಿ ರುಪಾಯಿ ಗುರಿ ಹಾಕಿಕೊಳ್ಳಲಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications