ಬೆಂಗಳೂರು, ಆಗಸ್ಟ್ 31: ಕರ್ನಾಟಕ ಸರ್ಕಾರವು ಗ್ರಾಮೀಣ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು ಇ-ಕಾಮರ್ಸ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ.
ಬೆಂಗಳೂರಿನಲ್ಲಿ ನಡೆದ ಗ್ರಾಮೀಣ ಮಹಿಳಾ ಉದ್ಯಮಶೀಲತೆಯ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿ ಭಾಗವಹಿಸಿ ಮಾತನಾಡಿದ ಕರ್ನಾಟಕ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, " ಗ್ರಾಮೀಣ ಪ್ರದೇಶದಲ್ಲಿ ಸ್ವಾವಲಂಭಿ ಯೋಜನೆಯಡಿ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು ಇ-ಕಾಮರ್ಸ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು" ಎಂದು ಘೋಷಿಸಿದ್ದಾರೆ.

ಮಹಿಳಾ ಸ್ವ-ಸಹಾಯ ಗುಂಪುಗಳು (ಎಸ್‌ಎಚ್‌ಜಿ) ಅವರ ಉದ್ಯಮಶೀಲತೆ ಮತ್ತು ಗ್ರಾಮೀಣ ಆರ್ಥಿಕತೆಗೆ ಮಹಿಳೆಯ ಕೊಡುಗೆಯನ್ನು ಶ್ಲಾಘಿಸಿದ ಅವರು, " ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜೀವನೋಪಾಯ ಮಿಷನ್ ಇಲಾಖೆಯ ಉಪಕ್ರಮವಾದ ರಾಜ್ಯ ಸರ್ಕಾರದ "ಸ್ವಾವಲಂಬನೆ ಯೋಜನೆ"ಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು" ಎಂದು ಹೇಳಿದ್ದಾರೆ.
"ಆರಂಭದಲ್ಲಿ 150 ಮಹಿಳಾ ಸ್ವಸಹಾಯ ಗುಂಪುಗಳಿಗೆ ಈ ಯೋಜನೆ ತಲುಪಿಸುವ ಗುರಿ ಹಾಕಿಕೊಳ್ಳಲಾಗಿತ್ತು. ಆದರೆ ಗುರಿಯನ್ನೂ ಮೀರಿ ಯೋಜನೆ ಯಶಸ್ವಿಯಾಗಿದೆ. 40000 ಮಹಿಳೆಯರು ನೆರವಿಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಹೆಚ್ಚುತ್ತಿರುವ ಅರ್ಜಿದಾರರ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ಸ್ವಾವಲಂಬನೆ ಯೋಜನೆಯನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲಿದ್ದು, ತಳಮಟ್ಟದಲ್ಲಿ ಹೆಚ್ಚಿನ ಮಹಿಳಾ ಸೂಕ್ಷ್ಮ ಉದ್ಯಮಿಗಳನ್ನು ಗುರುತಿಸಿ ಬೆಂಬಲಿಸುವ ಗುರಿ ಹೊಂದಿದೆ . ಜೊತೆಗೆ ಈ ಯೋಜನೆ ಅಡಿ ತಯಾರಿಸಲಾದ ಉತ್ಪನ್ನಗಳ ಮಾರಾಟಕ್ಕೆ 'ಸಂಜೀವಿನಿ' ಎಂಬ ಇ -ಮಾರುಕಟ್ಟೆ ಪೋರ್ಟಲ್ ಅನ್ನು ಶೀಘ್ರವೇ ಆರಂಭಿಸಲಾಗುತ್ತದೆ" ಎಂದು ಹೇಳಿದ್ದಾರೆ.
ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಗಾಗಿ ನಮ್ಮ ಸಾಂಘಿಕ ಪ್ರಯತ್ನದ ಫಲ, ಇದು ಸ್ವಸಹಾಯ ಸಂಘಗಳ ಗ್ರಾಮೀಣ ಮಹಿಳೆಯರಲ್ಲಿ ಉದ್ಯಮಶೀಲತೆಯ ಉತ್ಸಾಹ ಚಿಮ್ಮಿಸುವ ಹಾಗೂ ಸುಸ್ಥಿರ ಬದುಕು ಕಟ್ಟಿಕೊಳ್ಳುವ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವ ಮಹತ್ವದ ಕಾರ್ಯಕ್ರಮವಾಗಿದೆ. ಸ್ವಾವಲಂಬನೆ ಯೋಜನೆಯ ಅಡಿಯಲ್ಲಿ ಅನುದಾನ ಹಾಗೂ ಸಾಲದ ರೂಪದಲ್ಲಿ ಮಹಿಳೆಯರ ಉದ್ಯಮಗಳಿಗೆ ನೆರವು ನೀಡುತ್ತಾ ಬಂದಿದ್ದು, ಇದರಿಂದ ಅವರು ಮಹತ್ವದ ಯಶಸ್ಸು. ಮಹಿಳಾ ಉದ್ಯಮಶೀಲರಿಗೆ ಲೆಕ್ಕ ಪತ್ರಗಳನ್ನು ನಿರ್ವಹಿಸುವುದು, ಹಣಕಾಸಿನ ನಿರ್ವಹಣೆ, ವ್ಯಾಪಾರದ ರೂಪುರೇಷೆಗಳು, ಪ್ಯಾಕೇಜಿಂಗ್, ಬ್ರಾಂಡಿಂಗ್, ಮಾರಾಟ ಮತ್ತು ಸಾಮಾಜಿಕ ಜಾಲತಾಣಗಳನ್ನು ಅವುಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವುದರ ಮೂಲಕ ಹೆಚ್ಚಿನ ಜನರಿಗೆ ತಲುಪಿಸುವ ಚಾಕಚತ್ಯತೆಯನ್ನು ತಿಳಿಸಿಕೊಡುವ ಮಾರ್ಗದರ್ಶನ ಸಭೆಗಳು ಮಹತ್ವದ ಮತ್ತು ಬಹುಮುಖ್ಯ ಪಾತ್ರ ನಿರ್ವಹಿಸಿವೆ " ಎಂದು ಹೇಳಿದ್ದಾರೆ.
IIM ಬೆಂಗಳೂರಿನ ಸಹಯೋಗದೊಂದಿಗೆ 2023 ರಂದು ಅ. 11 ಪ್ರಾರಂಭವಾದ ಸ್ವಾವಲಂಬನೆ ಇನ್ಕ್ಯುಬೇಶನ್ ಕಾರ್ಯಕ್ರಮವನ್ನು ರಾಜ್ಯದಾದ್ಯಂತ 150 ಸ್ವಸಹಾಯ ಗುಂಪು ಮಹಿಳಾ ಉದ್ಯಮಿಗಳಿಗೆ ಬೆಂಬಲಿಸಲು ವಿನ್ಯಾಸಗೊಳಿಸಲಾಗಿದೆ.


Click it and Unblock the Notifications