ಆಟೋ, ಟ್ಯಾಕ್ಸಿ ಚಾಲಕರಿಗೆ 40 ಕೋಟಿ ರು ಬಿಡುಗಡೆ
ಬೆಂಗಳೂರು, ಜೂನ್ 11: ಕೊರೊನಾವೈರಸ್ ಲಾಕ್‌ಡೌನ್ ಸಲುವಾಗಿ ಕಳೆದ ಮೂರು ತಿಂಗಳು ಆದಾಯವಿಲ್ಲದೇ ತೀವ್ರ ತೊಂದರೆ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಕರ್ನಾಟಕ ಸರ್ಕಾರ ತಲಾ 5 ಸಾವಿರ ರುಪಾಯಿಯ ಭರವಸೆ ನೀಡಿತ್ತು.
ಇದರ ಅಂಗವಾಗಿ ಕರ್ನಾಟಕ ಸರ್ಕಾರ ಬುಧವಾರ 40 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಂದು ಬಾರಿ ಪರಿಹಾರವಾಗಿ ತಲಾ 5 ಸಾವಿರ ರುಪಾಯಿ ಘೋಷಣೆ ಮಾಡಿದ್ದರು.
ಸದ್ಯ ಹಣ ಪಡೆಯಲು 1 ಲಕ್ಷ ಟ್ಯಾಕ್ಸಿ ಮತ್ತು ಆಟೋ ಚಾಲಕರು ಹೆಸರು ನೋಂದಾಯಿಸಿಕೊಂಡಿದ್ದು, ಇನ್ನೂ 6 ಲಕ್ಷ ಜನ ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಕಾರ್ಮಿಕ ಇಲಾಖೆಯಲ್ಲಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನದಲ್ಲಿ ಹಣ ಬಿಡುಗಡೆ ಮಾಡಲಾಗಿದೆ.

ಹಂತ ಹಂತವಾಗಿ ಟ್ಯಾಕ್ಸಿ ಮತ್ತು ಆಟೋ ಚಾಲಕಕರಿಗೆ ಪರಿಹಾರದ ಹಣ ಜಮಾವಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications