ಪ್ರಸ್ತುತ ದೇಶದಲ್ಲಿ ಕೋವಿಡ್‌ನ ಹೊಸ ತಳಿ ಬಿಎಫ್ 7 ಕಾಣಿಸಿಕೊಂಡಿದೆ. ಈ ಹೊಸ ತಳಿ ಕರ್ನಾಟಕ ರಾಜ್ಯವನ್ನು ಕೂಡಾ ಕಾಣಿಸಿಕೊಂಡಿದ್ದು, ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ನಡುವೆ ಈಗ ಬಿಎಫ್ 7 ಸೋಂಕಿತರಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರವು ಸೋಮವಾರ ಘೋಷಿಸಿದೆ.
"ನಾವು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಎಲ್ಲ ಶಂಕಿತ ಪ್ರಕರಣ ಹೊಂದಿರುವವರನ್ನು ಐಸೋಲೇಟ್ ಮಾಡುತ್ತೇವೆ. ಚಿಕಿತ್ಸೆ ಕೂಡಾ ಇಲ್ಲಿ ನೀಡಲಾಗುತ್ತದೆ. ಹಾಗೆಯೇ ಕೋವಿಡ್‌ನ ಹೊಸ ತಳಿ BF.7 ಸೋಂಕಿತರಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ," ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಇನ್ನು ಎಲ್ಲ ಜಿಲ್ಲೆಗಳಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯು ಎಲ್ಲ ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರ ಮೊದಲಾದವುಗಳಿಗೆ ಭೇಟಿ ನೀಡಲಿದೆ. ಆಸ್ಪತ್ರೆಯಲ್ಲಿ ಹೇಗೆ ಸಿದ್ಧತೆ ನಡೆಸಲಾಗಿದೆ, ಆಕ್ಸಿಜನ್ ಪ್ಲಾಂಟ್ ವ್ಯವಸ್ಥೆ ಹೇಗಿದೆ, ಐಸಿಯು ವೆಂಟಿಲೇಟರ್ ಎಷ್ಟಿದೆ, ಸ್ಥಿತಿ ಹೇಗಿದೆ ಎಂದು ಪರಿಶೀಲಿಸಲಿದೆ ಎಂದು ಕೂಡಾ ಹೇಳಿದ್ದಾರೆ.

ಹೊಸ ಸಮಿತಿಯಲ್ಲಿ ಯಾರು ಇರುತ್ತಾರೆ?
ಈ ಕೋವಿಡ್ ನಿರ್ವಹಣೆಯ ಹೊಸ ಸಮಿತಿಯ ನೇತೃತ್ವವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ವಹಿಸಿಕೊಳ್ಳಲಿದ್ದಾರೆ. ಹಾಗೆಯೇ ಈ ಸಮಿತಿಯಲ್ಲಿ ಜಿಲ್ಲಾ ಪಂಜಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಅಧಿಕಾರಿಗಳು ಇರಲಿದ್ದಾರೆ. ಇನ್ನು ರಾಜ್ಯದಲ್ಲಿ ಈವರೆಗೆ ಒಟ್ಟು 7 BF.7 ತಳಿ ಕಾಣಿಸಿಕೊಂಡಿದೆ.
ಇನ್ನು ಬಿಬಿಎಂಪಿ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 30 ಬೆಡ್‌ಗಿಂತಲೂ ಅಧಿಕ ಬೆಡ್‌ಗಳು ಇರುವ 419 ಖಾಸಗಿ ಆಸ್ಪತ್ರೆಗಳು ಇದೆ. ಆದರೆ ಕೋವಿಡ್ ಸಾಂಕ್ರಾಮಿಕ ಸ್ಥಿತಿ ಸುಧಾರಿಸಿಕೊಂಡ ಬಳಿಕ ಆರೋಗ್ಯ ಇಲಾಖೆಗೆ ಪ್ರತಿ ದಿನ ಅಪ್‌ಡೇಟ್ ಲಭ್ಯವಾಗಿಲ್ಲ. ಆದರೆ ಪ್ರಸ್ತುತ ಕೋವಿಡ್ ನಿಯಮ ಬಿಗಿಗೊಳಿಸಿ, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, "ನಾನು ಆಸ್ಪತ್ರೆಗಳಲ್ಲಿ ಎಷ್ಟು ಆಕ್ಸಿಜನ್ ಬೆಡ್‌ಗಳು ಇದೆ, ಐಸಿಯುಗಳು ಎಷ್ಟಿದೆ, ವೆಂಟಿಲೇಟರ್ ಎಷ್ಟಿದೆ, ಹೇಗೆ ಕಾರ್ಯನಿರ್ವಹಣೆ ಮಾಡುತ್ತಿದೆ, ಪೈಪ್‌ಲೈನ್ ವ್ಯವಸ್ಥೆ ಹೇಗಿದೆ ಎಂದು ಪರಿಶೀಲನೆ ಮಾಡಬೇಕಾಗಿದೆ. ಬೆಡ್‌ಗಳ ಮಾಹಿತಿ ನೀಡುವಂತೆ ನಾವು ಈಗಾಗಲೇ ಸೂಚಿಸಿದ್ದೇವೆ. ಇದರಿಂದಾಗಿ ನಮಗೆ ಸಂಪೂರ್ಣವಾದ ಮಾಹಿತಿ ಲಭ್ಯವಾಗಲಿದೆ," ಎಂದು ತಿಳಿಸಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications