For Quick Alerts
ALLOW NOTIFICATIONS  
For Daily Alerts

ಕರ್ನಾಟಕವನ್ನು ನಂಬರ್ ಒನ್ ಹೂಡಿಕೆ ಸ್ನೇಹಿ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ: ಪ್ರಹ್ಲಾದ್ ಜೋಶಿ

|

ಮುಂಬೈ ಡಿಸೆಂಬರ್‌ 24: ಕರ್ನಾಟಕವನ್ನು ದೇಶದ ನಂಬರ್ ಒನ್ ಉದ್ಯಮ ಹೂಡಿಕೆ ಸ್ನೇಹಿ ರಾಜ್ಯವನ್ನಾಗಿ ಮಾಡಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

 

''ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ 2020'' ಕುರಿತು ಮುಂಬೈನಲ್ಲಿ ನಡೆದ ರೋಡ್ ಶೋನಲ್ಲಿ ಮಾತನಾಡಿದ ಅವರು, ''ಕರ್ನಾಟಕ ರಾಜ್ಯದಲ್ಲಿ ಉದ್ಯಮ ಹೂಡಿಕೆಗೆ ಪ್ರಶಸ್ತವಾದ ರಾಜ್ಯವಾಗಿದೆ. ಈ ರಾಜ್ಯವು ಅಭಿವೃದ್ಧಿಯಲ್ಲಿ ಮುನ್ನುಗ್ಗುತ್ತಿದ್ದು, ದೇಶದಲ್ಲಿ ಕರ್ನಾಟಕವನ್ನು ನಂಬರ್ ಒನ್ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದ್ದು, ಇದಕ್ಕಾಗಿ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ'' ಎಂದರು.

ಕೈಗಾರಿಕಾ ಮೂಲಸೌಕರ್ಯ, ನೀತಿಗಳು, ಪದ್ಧತಿಗಳನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದು, ಈ ಮೂಲಕ ಕರ್ನಾಟಕವನ್ನು ಜಾಗತಿಕ ಉತ್ಪಾದನಾ ಹಬ್ ಆಗಿ ಮಾಡಲು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ರೋಡ್‌ ಶೋನಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್‌ ಕೃಷ್ಣ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ನೂರಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಭಾಗವಹಿಸಿದರು.

ಎರಡನೇ ಹಂತದ ನಗರಗಳ ಮೇಲೆ ದೃಷ್ಟಿ

ಎರಡನೇ ಹಂತದ ನಗರಗಳ ಮೇಲೆ ದೃಷ್ಟಿ

ಕೈಗಾರಿಕೆ ಸೇರಿದಂತೆ ಇನ್ನಿತರೆ ಉದ್ಯಮಗಳು ಕೇವಲ ಬೆಂಗಳೂರಿಗೆ ಸೀಮಿತವಾಗದೇ ಎರಡನೇ ಹಂತದ ನಗರಗಳಲ್ಲಿಯೂ ಬೆಳೆಯಬೇಕೆಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಈ ನಗರಗಳಲ್ಲಿಯೂ ಉದ್ಯಮ ಸ್ಥಾಪನೆಗೆ ಸಾಕಷ್ಟು ಅವಕಾಶಗಳನ್ನು ಕಲ್ಪಿಸುತ್ತಿವೆ.

ಇದೀಗ ಉತ್ತರ ಕರ್ನಾಟಕದಲ್ಲಿ ಉದ್ದಿಮೆಗಳ ಸ್ಥಾಪನೆಗೆ ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾದ ವಾತಾವರಣ ಸೃಷ್ಟಿಯಾಗಿದ್ದು, ಇಲ್ಲಿ ಬಂಡವಾಳ ಹೂಡಿಕೆಗೆ ಎಲ್ಲಾ ವಿಪುಲ ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಹಾಗೂ ರಾಜ್ಯದ ಎರಡನೇ ಹಂತದ ನಗರಗಳು ಮತ್ತು ಉತ್ತರ ಕರ್ನಾಟಕದಲ್ಲಿ ಬಂಡವಾಳ ಆಕರ್ಷಣೆಗೆ ಮುಂಬೈನಲ್ಲಿ ರೋಡ್ ಶೋ ನಡೆಸುತ್ತಿದ್ದೇವೆ ಎಂದು ಹೇಳಿದರು.

 

ಉತ್ತರ ಕರ್ನಾಟಕದಲ್ಲಿ ಉದ್ದಿಮೆಗಳ ಸ್ಥಾಪನೆ

ಉತ್ತರ ಕರ್ನಾಟಕದಲ್ಲಿ ಉದ್ದಿಮೆಗಳ ಸ್ಥಾಪನೆ

ಉತ್ತರ ಕರ್ನಾಟಕದಲ್ಲಿ ಉದ್ದಿಮೆಗಳ ಸ್ಥಾಪನೆಗೆ ಸಾಕಷ್ಟು ಅವಕಾಶಗಳಿದ್ದು, ಇಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಪ್ರಹ್ಲಾದ್ ಜೋಶಿ ಅವರು ಉದ್ದಿಮೆದಾರರು, ಬಂಡವಾಳ ಹೂಡಿಕೆದಾರರು ಸೇರಿದಂತೆ ಕೈಗಾರಿಕೆ ವಲಯದ ಪಾಲುದಾರರಿಗೆ ಕರೆ ನೀಡಿದರು.

ಇಂದು ಕರ್ನಾಟಕ 216 ಯುಎಸ್ ಬಿಲಿಯನ್ ಡಾಲರ್ ನಷ್ಟು ಆರ್ಥಿಕತೆಯನ್ನು ಹೊಂದಿರುವ ರಾಜ್ಯವಾಗಿದ್ದು, ವಾರ್ಷಿಕ ಶೇ.9.6 ರಷ್ಟು ಪ್ರಗತಿ ಸಾಧಿಸುತ್ತಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಬೆಲೆಯಲ್ಲಿ ಉತ್ಪಾದನಾ ವಾತಾವರಣವನ್ನು ಸೃಷ್ಟಿ ಮಾಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

 2ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ನೀತಿ, ನಿಯಮ

ವಿವಿಧ್ ಕ್ಷೇತ್ರಗಳಿಂದ ಆಸಕ್ತಿ
 

ವಿವಿಧ್ ಕ್ಷೇತ್ರಗಳಿಂದ ಆಸಕ್ತಿ

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ಇಕ್ವಿಪ್ ಮೆಂಟ್, ಆಟೋ, ಆಟೋ ಬಿಡಿ ಭಾಗಗಳು & ಎಲೆಕ್ಟ್ರಿಕಲ್ ವಾಹನಗಳು, ಇಂಡಸ್ಟ್ರಿ 4.0, ಮೂವಿಂಗ್ ಕನ್ಸೂಮರ್ ಗೂಡ್ಸ್, ಇನ್ನೋವೇಶನ್ & ಸ್ಟಾರ್ಟಪ್, ಮಾಹಿತಿ ತಂತ್ರಜ್ಞಾನ ಸೇರಿದಂತೆ ಹತ್ತು ಹಲವಾರು ಉದ್ದಿಮೆಗಳನ್ನು ಸ್ಥಾಪನೆ ಮಾಡಲು ಸರ್ಕಾರಗಳು ಎಲ್ಲಾ ರೀತಿಯ ಸವಲತ್ತುಗಳನ್ನು ನೀಡುತ್ತಿವೆ ಎಂದು ಅವರು ವಿವರಿಸಿದರು.

ರಾಜ್ಯದ ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ಮಾತನಾಡಿ,''ಕರ್ನಾಟಕದ ಹೆಸರು ಜಗತ್ತಿನಾದ್ಯಂತ ತನ್ನದೇ ಛಾಪು ಮೂಡಿಸಿದೆ. ದೇಶದ ಆರ್ಥಿಕ ಪ್ರಗತಿಯಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುವಲ್ಲಿ ಮುಂಚೂಣಿಯಲ್ಲಿರುವ ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಸೃಷ್ಟಿ ಮಾಡಿದ್ದೇವೆ''ಎಂದು ತಿಳಿಸಿದರು.

 

ಎಫ್ ಡಿಐ ಕರ್ನಾಟಕ ಸಿಂಹಪಾಲು

ಎಫ್ ಡಿಐ ಕರ್ನಾಟಕ ಸಿಂಹಪಾಲು

ದೇಶಕ್ಕೆ ಹರಿದು ಬರುತ್ತಿರುವ ವಿದೇಶಿ ನೇರ ಬಂಡವಾಳದಲ್ಲಿ ಕರ್ನಾಟಕ ರಾಜ್ಯದ್ದು ಸಿಂಹಪಾಲಾಗಿದೆ. ವಿದೇಶಿ ನೇರ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯಕ್ಕೆ ದೇಶದಲ್ಲಿ 3 ನೇ ಸ್ಥಾನದಲ್ಲಿದೆ. ರಾಜ್ಯದ ವಾಣಿಜ್ಯ ನಗರವಾಗಿರುವ ಹುಬ್ಬಳ್ಳಿಯು ಉತ್ತರ ಕರ್ನಾಟಕ ಭಾಗದ ಕೈಗಾರಿಕೋದ್ಯಮ ತಾಣವಾಗಿದೆ. ಇಲ್ಲಿ ಗೋಲ್ಡನ್ ಕ್ವಾಡ್ರಿಲ್ಯಾಟ್ರಲ್ ರಾಷ್ಟ್ರೀಯ ಹೆದ್ದಾರಿ 4 (ಮುಂಬೈ-ಬೆಂಗಳೂರು ಕೈಗಾರಿಕಾ ಕಾರಿಡಾರ್) ಹಾದು ಹೋಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹೆಬ್ಬಾಗಿಲಾಗಿರುವ ಹುಬ್ಬಳ್ಳಿ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಉದ್ಯಮಗಳ ಸ್ಥಾಪನೆಗೆ ಪ್ರಶಸ್ತವಾದ ಸ್ಥಳವಾಗಿದೆ ಎಂದು ಅವರು ತಿಳಿಸಿದರು.

4 ಇಂಡಸ್ಟ್ರಿಯಲ್ ಎಸ್ಟೇಟ್

4 ಇಂಡಸ್ಟ್ರಿಯಲ್ ಎಸ್ಟೇಟ್

ಹುಬ್ಬಳ್ಳಿ ಧಾರವಾಡ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆ ಮತ್ತು ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳನ್ನು ಕಲ್ಪಿಸಲಾಗಿದೆ. 9 ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, 4 ಇಂಡಸ್ಟ್ರಿಯಲ್ ಎಸ್ಟೇಟ್ ಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಇದಲ್ಲದೇ, ನೇರವಾಗಿ ದೇಶದ ವಾಣಿಜ್ಯ ನಗರವಾಗಿರುವ ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಿಗೆ ಸರಕು ಸರಂಜಾಮುಗಳನ್ನು ಸಾಗಿಸಲು ರೈಲು, ರಸ್ತೆ ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಉದ್ದಿಮೆದಾರರು ಹೂಡಿಕೆ ಮಾಡಲು ಅನುಕೂಲವಾಗುವಂತಹ ಎಲ್ಲಾ ರೀತಿಯ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಒದಗಿಸಿಕೊಡಲಿದೆ ಎಂದು ಶೆಟ್ಟರ್ ಭರವಸೆ ನೀಡಿದರು.

English summary

Karnataka Govt Roadshow Invest In Karnataka In Mumbai To Attract Investment

Karnataka govt Roadshow Invest in Karnataka in Mumbai to attract investment.
Story first published: Tuesday, December 24, 2019, 13:14 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X