ಪ್ಯಾರಾ-ಮೆಡಿಕಲ್ ಕಾಲೇಜುಗಳ ಮೇಲೆ ತೂಗುಗತ್ತಿ..ಕಳಪೆ ಗುಣಮಟ್ಟದ ಶಿಕ್ಷಣ ನೀಡಿದ್ರೆ ಸಂಸ್ಥೆಯೇ ಬಂದ್..!

ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ಯಾರಾ-ಮೆಡಿಕಲ್ ಕಾಲೇಜುಗಳ ಮೇಲೆ ಈಗ ತೂಗುಗತ್ತಿ ನೇತಾಡುತ್ತಿರುವಂತೆ ಕಾಣುತ್ತಿದೆ. ಇಷ್ಟುದಿನ ಕಳಪೆ ಗುಣಮಟ್ಟದ ಶಿಕ್ಷಣೆ ನೀಡುತ್ತಿದ್ದ ಸಂಸ್ಥೆಗಳು ಇನ್ನಾದರೂ ಎಚ್ಚೆತ್ತುಕೊಳ್ಳಲೇಬೇಕು. ಏಕೆಂದರೆ ಕರ್ನಾಟಕದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ಈ ಬಗ್ಗೆ ಗಮನ ಹರಿಸಿದ್ದಾರೆ. ಪ್ಯಾರಾ-ಮೆಡಿಕಲ್ ಕಾಲೇಜುಗಳ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಮತ್ತು ಕಳಪೆ ಶಿಕ್ಷಣ ನೀಡುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಪ್ಯಾರಾ-ಮೆಡಿಕಲ್ ಕಾಲೇಜುಗಳ ಮೇಲೆ ತೂಗುಗತ್ತಿ..!

ಹೌದು, ಕಳಪೆ ವೈದ್ಯಕೀಯ ಶಿಕ್ಷಣ ನೀಡುವ ಸಂಸ್ಥೆಗಳಿಗೆ ಬಿಸಿ ಮುಟ್ಟಿಸಲು ಈ ಸೂಚನೆ ನೀಡಲಾಗಿದೆ. ನಿನ್ನೆ (ಗುರುವಾರ) ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ, ಅನೇಕ ಖಾಸಗಿ ಕಾಲೇಜುಗಳು ಮೂಲಭೂತ ಸೌಲಭ್ಯಗಳಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಕೆಲವು ಕಾಲೇಜುಗಳು ಅನುಮೋದನೆ ಪಡೆಯುವಾಗ ಉತ್ತಮ ಸೌಲಭ್ಯಗಳಿರುವಂತೆ ತೋರಿಸುತ್ತವೆ, ಆದರೆ ವಿದ್ಯಾರ್ಥಿಗಳಿಂದ ಭಾರಿ ಶುಲ್ಕ ವಸೂಲಿ ಮಾಡುತ್ತವೆ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ವಿಫಲವಾಗುತ್ತವೆ ಎಂಬ ವಿಚಾರ ಹೊರಬಂದಿದೆ. ಹೀಗಾಗಿ ಸಚಿವರು ಈ ಬಗ್ಗೆ ಗಮನಹರಿಸಿ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಅಂದಹಾಗೆ ರಾಜ್ಯದಲ್ಲಿ ಒಟ್ಟು 566 ಪ್ಯಾರಾ-ಮೆಡಿಕಲ್ ಕಾಲೇಜುಗಳು ಇವೆ. ಅವುಗಳ ಪೈಕಿ 529 ಖಾಸಗಿ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುತ್ತಿವೆ. 2024-25 ಶೈಕ್ಷಣಿಕ ವರ್ಷದಲ್ಲಿ ಸುಮಾರು 22,256 ವಿದ್ಯಾರ್ಥಿಗಳು ಪ್ಯಾರಾ ಮೆಡಿಕಲ್ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದಾರೆ. ಇನ್ನು ಸರ್ಕಾರಿ ಕಾಲೇಜುಗಳ ವಾರ್ಷಿಕ ಶುಲ್ಕ ₹8,500 ಆದರೆ, ಖಾಸಗಿ ಸಂಸ್ಥೆಗಳ ಶುಲ್ಕ ₹20,000 ಆಗಿದೆ. ಶುಲ್ಕ ಹೆಚ್ಚು ತೆಗೆದುಕೊಂಡಿದ್ದರೂ ಈ ಪೈಕಿ ಅನೇಕ ಖಾಸಗಿ ಸಂಸ್ಥೆಗಳು ಪ್ಯಾರಾ-ಮೆಡಿಕಲ್ ಮಂಡಳಿಯ ಅನುಮೋದನೆ ಪಡೆಯದೇ ಕಾರ್ಯನಿರ್ವಹಿಸುತ್ತಿವೆ. ಇನ್ನು ಕೆಲವು ಸಂಸ್ಥೆಗಳು ವಿದ್ಯಾರ್ಥಿಗಳನ್ನು ಅನುಮೋದನೆಯಿಲ್ಲದೆ ಇತರ ಕಾಲೇಜುಗಳಿಗೆ ವರ್ಗಾಯಿಸುತ್ತಿವೆ ಎಂಬ ಮಾಹಿತಿ ತಿಳಿದುಬಂದಿದೆ.

ಇನ್ನು ಈ ಸಮೀಕ್ಷೆಯ ಪ್ರಕಾರ ಅನೇಕ ಪ್ಯಾರಾ-ಮೆಡಿಕಲ್ ಕಾಲೇಜುಗಳು ಮಾನದಂಡಗಳನ್ನು ಪೂರೈಸದೆ ಕಾರ್ಯನಿರ್ವಹಿಸುತ್ತಿರುವುದರಿಂದ, ವಿದ್ಯಾರ್ಥಿಗಳು ಅಗತ್ಯ ಶಿಕ್ಷಣ ಹಾಗೂ ತರಬೇತಿಯ ಕೊರತೆಯನ್ನು ಎದುರಿಸುತ್ತಿದ್ದಾರೆ. ನೂರಾರು ವಿದ್ಯಾರ್ಥಿಗಳಿಗೆ ಕೇವಲ ಒಂದು ಸೂಕ್ಷ್ಮದರ್ಶಕ ನೀಡಲಾಗಿದೆ, ಜೊತೆಗೆ ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲದೇ ಶಿಕ್ಷಣ ಪಡೆಯುತ್ತಿದ್ದಾರೆ. ಮತ್ತು ಪ್ರಾಯೋಗಿಕ ತರಬೇತಿಗಾಗಿ ಅಗತ್ಯವಿರುವ ಮೂಲಸೌಕರ್ಯಗಳ ಕೊರತೆಯಿದೆ.

ಹೀಗಾಗಿ ಸರ್ಕಾರವೇ ಈ ಬಗ್ಗೆ ಗಮನ ಹರಿಸಿ ಶಿಕ್ಷಣದ ಗುಣಮಟ್ಟವಿಲ್ಲದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಕಳಪೆ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಗಳು ಬಂದ್ ಮಾಡಲಾಗುವ ಬಗ್ಗೆ ತಿಳಿಸಿದೆ. ಹಾಗೂ ವಿದ್ಯಾರ್ಥಿಗಳನ್ನು ಉತ್ತಮ ಪ್ಯಾರಾ-ಮೆಡಿಕಲ್ ಕಾಲೇಜುಗಳಿಗೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದೆ.

ಇನ್ನು ಕರ್ನಾಟಕದಲ್ಲಿ ಪ್ಯಾರಾ-ಮೆಡಿಕಲ್ ಶಿಕ್ಷಣ ವ್ಯಾಪಕವಾಗಿ ಬೆಳೆದಿದೆ. ಈ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ, ವೈದ್ಯಕೀಯ ಇಮೇಜಿಂಗ್ ತಂತ್ರಜ್ಞಾನ, ಆರೋಗ್ಯ ನಿರೀಕ್ಷಕ, ವೈದ್ಯಕೀಯ ದಾಖಲೆಗಳ ತಂತ್ರಜ್ಞಾನ, ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ತಂತ್ರಜ್ಞಾನ, ಡಯಾಲಿಸಿಸ್ ತಂತ್ರಜ್ಞಾನ, ನೇತ್ರ ತಂತ್ರಜ್ಞಾನ, ದಂತ ಮೆಕ್ಯಾನಿಕ್ಸ್, ದಂತ ನೈರ್ಮಲ್ಯ ಮುಂತಾದ ಡಿಪ್ಲೊಮಾ ಕೋರ್ಸ್‌ಗಳನ್ನು ಆಯ್ಕೆ ಮಾಡಬಹುದು. ಹಾಗೂ ಈ ಕ್ಷೇತ್ರಗಳಿಗೆ ಕರ್ನಾಟಕದಲ್ಲಿ ಹೆಚ್ಚು ಸ್ಕೋಪ್ ಕೂಡ ಇದೆ.

ಈ ಹೊಸ ಕ್ರಮಗಳಿಂದ, ಪ್ಯಾರಾ-ಮೆಡಿಕಲ್ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಿ, ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಪದವಿಪೂರ್ವ ಕೋರ್ಸ್‌ಗಳನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಆಸ್ಪತ್ರೆಗಳು, ವೈದ್ಯಕೀಯ ಮತ್ತು ದಂತ ಕಾಲೇಜುಗಳು, ಆರೋಗ್ಯ ಕೇಂದ್ರಗಳು ಹಾಗೂ ಪ್ರಯೋಗಾಲಯಗಳಲ್ಲಿ ಉದ್ಯೋಗ ಅವಕಾಶಗಳು ಲಭ್ಯವಿರುತ್ತವೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+