For Quick Alerts
ALLOW NOTIFICATIONS  
For Daily Alerts

ಕರ್ನಾಟಕದ ಪ್ರಮುಖ ನಗರಗಳಲ್ಲಿ ಸರ್ಕಾರಿ ಜ್ಯುವೆಲರಿ ಪಾರ್ಕ್ ಸ್ಥಾಪನೆ

|

ಮೊದಲ ಬಾರಿಗೆ ಕರ್ನಾಟಕದಲ್ಲಿ ಸರಕಾರಿ ಒಡೆತನದ ಆಭರಣ ಮಳಿಗೆಗಳನ್ನು (ಜ್ಯುವೆಲ್ಲರಿ ಶಾಪ್) ತೆರೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇದರ ಜೊತೆಗೆ ಆಭರಣ ತಯಾರಿಕೆಯ ಘಟಕ (ಜ್ಯುವೆಲರಿ ಪಾರ್ಕ್) ವನ್ನು ಪ್ರಾರಂಭಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಬೆಂಗಳೂರಿನ ಬದಲು ಬೀದರ್ ಅಥವಾ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿಯಲ್ಲಿ ಸುಮಾರು 50 ರಿಂದ 75 ಎಕರೆ ಜಮೀನಿನಲ್ಲಿ ಜ್ಯುವೆಲರಿ ಪಾರ್ಕ್ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ವಿಕಾಸಸೌಧದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಜ್ಯುವೆಲರಿ ಪಾರ್ಕ್ ನಿರ್ಮಾಣವಾಗಲಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಸ್ಥಾಪನೆ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಕರ್ನಾಟಕದ ಪ್ರಮುಖ ನಗರಗಳಲ್ಲಿ ಸರ್ಕಾರಿ ಜ್ಯುವೆಲರಿ ಪಾರ್ಕ್ ಸ್ಥಾಪನೆ

ಬೆಂಗಳೂರಿನ ಹೊರ ಭಾಗದಲ್ಲಿ ಜ್ಯುವೆಲರಿ ಪಾರ್ಕ್ ಪ್ರಾರಂಭಿಸುವುದಾದರೆ ತಮಗೆ ತೆರಿಗೆ ವಿನಾಯ್ತಿ ನೀಡಬೇಕೆಂಬ ಸಂಘಟನೆಗಳ ಮನವಿಯನ್ನು ಪುರಸ್ಕರಿಸಿದ ಸಚಿವ ನಿರಾಣಿ ಅವರು, ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಭರವಸೆ ನೀಡಿದರು.

ದೇಶದಲ್ಲೇ ಚಿನ್ನ ಉತ್ಪಾದನೆ ಮಾಡುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕದ ಹಟ್ಟಿ ಚಿನ್ನದ ಗಣಿಗಾರಿಕೆಯಲ್ಲಿ ಅದಿರು‌ ತೆಗೆಯುವುದನ್ನು ಖಾಸಗಿಯವರಿಗೆ ನೀಡಲು ಚಿಂತನೆ ನಡೆದಿದೆ ಎಂದು ಸಭೆ ನಂತರ ಹೇಳಿದರು. ಸಭೆಯಲ್ಲಿ ಸಭೆಯಲ್ಲಿ ಬೆಂಗಳೂರು ಜ್ಯುವೆಲರಿ ಅಸೋಸಿಯೇಷನ್, ಕರ್ನಾಟಕ ಜ್ಯುವೆಲರಿ ಫೆಡರೇಷನ್, ಜ್ಯುವೆಲರಿ ಅಸೋಸಿಯೇಷನ್‌ ಮುಖಂಡರು ಭಾಗವಹಿಸಿದ್ದರು.

English summary

Karnataka govt to have it's own retail gold jewellery chain

Karnataka which produces its own gold through the Hutti gold mines will get into the retail business through the mines and geology department.
Story first published: Sunday, March 21, 2021, 12:09 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X