ನಿಮ್ಮ ಮನೆಯ ಬಾಗಿಲ ಬಳಿ ನಿಮ್ಮುಂದೆ ಪೊಲೀಸರು ಬರುತ್ತಾರೆ. ಹೌದು,ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಂಡಿರುವ 'ಮನೆ-ಮನೆಗೆ ಪೊಲೀಸ್' ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ಇಂದು ಚಾಲನೆಯನ್ನು ನೀಡಲಾಗಿದೆ. ಬೆಂಗಳೂರು ಪೊಲೀಸರು ಹೊರತಂದಿರುವ 'ಮನೆ ಮನೆಗೆ ಪೊಲೀಸ್' ಕೈಪಿಡಿಯನ್ನು ಬಿಡುಗಡೆಯನ್ನು ಮಾಡಿದ್ಧಾರೆ.
ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಈ ಕ್ರಮವನ್ನು ಕೈಗೊಂಡಿದೆ. ಸರ್ಕಾರವು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ, ಸಮಾಜದಲ್ಲಿ ನಿರ್ಭಯ ವಾತಾವರಣ ನಿರ್ಮಾಣ ಮಾಡಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಮನ್ವಯತೆ ಅತ್ಯಗತ್ಯವಾಗಿದ್ದು, ಸಾರ್ವಜನಿಕರು ಯಾವುದೇ ದೂರಗಳು ಇದ್ದರು ಮನೆಯ ಬಳಿಯಲ್ಲಿ ನೀಡಬಹುದು.

ದೇಶದಲ್ಲಿ ಪ್ರಥಮ ಬಾರಿಗೆ ಮನೆ ಮನೆಗೆ ಪೊಲೀಸ್ ವಿನೂತನವಾದ ಕಾರ್ಯಕ್ರಮ ಮಾಡಲಾಗುತ್ತಿದೆ. ಇನ್ನು ಮುಂದೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ರಾಜ್ಯದಾದ್ಯಂತ ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ದೂರುಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಿದ್ದಾರೆ. ನಿಮಗೆ ಯಾರಿಂದಲೂ ತೊಂದರೆ, ದೌರ್ಜನ್ಯ, ಮೋಸ ಹೋಗಿದ್ದರೆ, ನೆರೆಹೊರೆಯಲ್ಲಿ ಕಂಡುಬರುವ ಕಾನೂನು ಬಾಹಿರ ಚಟುವಟಿಕೆಗಳ ಕುರಿತು ಯಾವುದೇ ಆತಂಕವಿಲ್ಲದೆ ಮುಕ್ತ ಮನಸ್ಸಿನೊಂದಿಗೆ ನಿಮ್ಮ ಸಮಸ್ಯೆಗಳನ್ನು ಪೊಲೀಸರೊಂದಿಗೆ ಹಂಚಿಕೊಳ್ಳಿ.
ನಿಮ್ಮ ಸಹಕಾರವಿದ್ದರೆ ಎಂತಹ ಅಪರಾಧಗಳನ್ನಾದರೂ ತಡೆಗಟ್ಟಬಹುದು. ಅಪರಾಧಗಳಾಗುವ ಮುನ್ನವೇ ಅಪರಾಧಗಳನ್ನು ಮಟ್ಟ ಹಾಕಲು ಪೊಲೀಸರಿಗೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ. ಇದನ್ನು ಸರ್ಕಾರ ಅರಿತುಕೊಂಡೆ 'ಮನೆ ಮನೆಗೆ ಪೊಲೀಸ್' ಅರ್ಥಪೂರ್ಣ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ರಾಜ್ಯದ ಎಲ್ಲ ನಾಗರಿಕರು ಈ ಕಾರ್ಯಕ್ರಮಕ್ಕೆ ಕೈಜೋಡಿಸಿ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ಧಾರೆ.
ನಿಮ್ಮ ರಕ್ಷಕರರು ನಿಮ್ಮ ಮನೆ ಬಾಗಿಲ ಬಳಿ
ಈ ಕಾರ್ಯಕ್ರಮದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬೆಂಗಳೂರು ನಗರ ಪೊಲೀಸ್ ಮಾಹಿತಿಯನ್ನು ಹಂಚಿಕೊಂಡಿದೆ. ಈ ಪೋಸ್ಟ್‌ನಲ್ಲಿ ಬೆಂಗಳೂರಿನ ನಾಗರಿಕರೇ..ನಿಮ್ಮ ರಕ್ಷಕರ ನಿಮ್ಮ ಮನೆ ಬಾಗಿಲ ಬಳಿ ಬರಲಿದ್ದೇವೆ.
ಮನೆ ಮನೆಗೆ ಪೊಲೀಸ್" ಉಪಕ್ರಮವು ಇದೇ ಜುಲೈ 18 ರಿಂದ ಆರಂಭವಾಗುತ್ತಿದೆ. ಬೆಂಗಳೂರು ಪೊಲೀಸರು ನಿಮ್ಮ ಮನೆಗೆ ಬರಲಿದ್ದಾರೆ. ಅವರೊಂದಿಗೆ ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಕಾರ್ಯಕ್ರಮದ ವಿಶೇತೆಗಳೇನು..?
- ಪ್ರತಿ ಪೊಲೀಸ್ ಠಾಣಾ ಯನ್ನು ಬೀಟ್‌ಗಳಾಗಿ ವಿಂಗಡಿಸಿದ್ದು, ಬೀಟ್‌ಗಳನ್ನು ಸಬ್ ಬೀಟ್‌ಗಳಾಗಿ ವಿಂಗಡಿಸಿದೆ.
- ಸಬ್‌ಬೀಟ್‌ಗಳಲ್ಲಿ 40-50 ಮನೆಗಳನ್ನೊಳಗೊಂಡ ಒಂದು ಕ್ಲಸ್ಟರ್/ಸಮೂಹವನ್ನಾಗಿ ರಚಿಸಿಕೊಳ್ಳಲಾಗುವುದು
- ಪ್ರತಿ ಕ್ಲಸ್ಪರ್‌ಗೆ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ನೇಮಿಸಿ ಉಸ್ತುವರಿ ಅಧಿಕಾರಿಗಳು ಇರುತ್ತಾರೆ.
- ಪ್ರತಿ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು/ಸಮಸ್ಯೆಸ ಲಹೆಗಳನ್ನು ಕ್ರೂಢೀಕರಿಸಿ ರಿಜಿಸ್ಟರ್ನನಲ್ಲಿ ನಮೂದು ಮಾಡಿಕೊಳ್ಳಲಾಗುವುದು.
- ಅಹವಾಲುಗಳನ್ನು ತಕ್ಷಣವೇ ಬಗೆಹರಿಸಲು ಕಾನೂನು ಪ್ರಯತ್ನಗಳನ್ನು ಮಾಡುವುದು ಹಾಗೂ ಸಾರ್ವಜನಿಕರಿಂದ ಪ್ರತಿಕ್ರಿಯೆ ಪಡೆಯಲಾಗುವುದು. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಮುಕ್ತವಾಗಿ ಮಹಿಳೆಯರ ಸಮಸ್ಯೆಯನ್ನು ಆಲಿಸಲಿದ್ದಾರೆ.
- ಮಹಿಳೆ ಮತ್ತು ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸಿ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಣೆ.
- ಕೌಟುಂಬಿಕ ದೌರ್ಜನ್ಯ ವಿರುದ್ಧ ಜಾಗೃತಿ ಮತ್ತು ಕಾನೂನಿನ ಅರಿವು ಮೂಡಿಸುವುದು.
- ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳ ಮಾಹಿತಿಯನ್ನು ನಾಗರೀಕರಿಗೆ ನೀಡುವುದು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications