Karnataka Ration Card: ಪಡಿತರ ಚೀಟಿ ಪಡೆಯಲು ದೊಡ್ಡ ಬದಲಾವಣೆ.. ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚುವ ಸಾಧ್ಯತೆ

PHH..ಅಂದರೆ ಕರ್ನಾಟಕದಲ್ಲಿ ಆದ್ಯತಾ ಕುಟುಂಬಗಳಿಗೆ ನೀಡಲಾಗುವ ಪಡಿತರ ಚೀಟಿಗಳಿಗಾಗಿ, ನಿಗದಿ ಪಡಿಸಿರುವ ಆದಾಯ..ಈ ಆದಾಯದ ವಿಚಾರದಲ್ಲಿ ರಾಜ್ಯದ ಜನತೆಗೆ ಸರ್ಕಾರದಿಂದ ಶೀಘ್ರದಲ್ಲೇ ಗುಡ್‌ನ್ಯೂಸ್ ಸಿಗೋ ಸಾಧ್ಯತೆ. ಅದೇನೆಂದರೆ ಆದಾಯ ಮಿತಿಯನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ವಿಷಯವನ್ನು ವಿಧಾನಸಭೆಯಲ್ಲಿ ಚರ್ಚಿಸುವ ವೇಳೆ ಸರ್ಕಾರ ಈ ಕುರಿತು ಪರಿಶೀಲನೆ ನಡೆಸುವುದಾಗಿ ತಿಳಿಸಿದೆ. ಈಗಿನ ಆರ್ಥಿಕ ಪರಿಸ್ಥಿತಿ ಹಾಗೂ ಜೀವನ ವೆಚ್ಚದ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಆದಾಯ ಮಿತಿಯನ್ನು ನಿಗದಿಪಡಿಸುವ ಸಾಧ್ಯತೆ ಇದೆ. ಇದನ್ನು ಜಾರಿಗೆ ತಂದರೆ ಇನ್ನೂ ಹೆಚ್ಚು ಕುಟುಂಬಗಳಿಗೆ ಪಡಿತರ ಸಿಗಲಿದೆ.

ಪಡಿತರ ಚೀಟಿ ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚುವ ಸಾಧ್ಯತೆ

ಪ್ರಸ್ತುತ ಇರುವ ಆದಾಯ ಮಿತಿ:

ಇದೀಗ ಜಾರಿಯಲ್ಲಿರುವ ನಿಯಮಗಳ ಪ್ರಕಾರ, ಒಂದು ಕುಟುಂಬವನ್ನು ಆದ್ಯತಾ ಕುಟುಂಬ (PHH) ಎಂದು ಗುರುತಿಸಲು ಅದರ ವಾರ್ಷಿಕ ಆದಾಯವು 1.2 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು. ಈ ಮಿತಿಯನ್ನು 2017ರಲ್ಲಿ ಸರ್ಕಾರ ನಿಗದಿಪಡಿಸಿತ್ತು. ಆದರೆ ಕಳೆದ ಕೆಲವು ವರ್ಷಗಳಲ್ಲಿ ಜೀವನ ವೆಚ್ಚವು ಹೆಚ್ಚಾಗಿದ್ದು, ಅನೇಕ ಕುಟುಂಬಗಳ ಆರ್ಥಿಕ ಸ್ಥಿತಿಯಲ್ಲಿಯೂ ಬದಲಾವಣೆ ಕಂಡುಬಂದಿದೆ. ಆದ್ದರಿಂದ ಈ ಆದಾಯ ಮಿತಿಯನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸರ್ಕಾರದ ವಲಯದಲ್ಲಿದೆ.

ವಿಧಾನಸಭೆಯಲ್ಲಿ ಸರ್ಕಾರದ ಪ್ರತಿಕ್ರಿಯೆ:

ವಿಧಾನಸಭೆಯಲ್ಲಿ ಈ ವಿಷಯದ ಕುರಿತು ಪ್ರಶ್ನೆ ಕೇಳಲಾಗಿತ್ತು. ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು. ಇದಕ್ಕೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಪ್ರಸ್ತುತ ಇರುವ ಆದಾಯ ಮಿತಿಯನ್ನು ಮರುಪರಿಶೀಲಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ಆಡಳಿತ ಸುಧಾರಣಾ ಆಯೋಗದ ಶಿಫಾರಸು:

ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಸಹ ಈ ವಿಷಯದಲ್ಲಿ ಸಲಹೆ ನೀಡಿದೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರ ನೇತೃತ್ವದ ಈ ಆಯೋಗವು ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂಪಾಯಿವರೆಗೆ ಹೆಚ್ಚಿಸುವಂತೆ ಶಿಫಾರಸು ಮಾಡಿದೆ. ಈ ಶಿಫಾರಸನ್ನು ಸಂಬಂಧಿಸಿದ ಇಲಾಖೆ ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸರ್ಕಾರ ತಿಳಿಸಿದೆ.

ನಗರ ಪ್ರದೇಶಗಳ ಜೀವನ ವೆಚ್ಚ:

ನಗರ ಪ್ರದೇಶಗಳಲ್ಲಿ, ವಿಶೇಷವಾಗಿ ಬೆಂಗಳೂರಿನಂತಹ ಮಹಾನಗರಗಳಲ್ಲಿ ಜೀವನ ವೆಚ್ಚವು ಹೆಚ್ಚು ಇರುವುದನ್ನು ಶಾಸಕರು ಗಮನಕ್ಕೆ ತಂದಿದ್ದಾರೆ. ಮನೆ ಬಾಡಿಗೆ, ಶಿಕ್ಷಣ, ಆರೋಗ್ಯ ಮತ್ತು ದಿನನಿತ್ಯದ ಖರ್ಚುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಮಧ್ಯಮ ಹಾಗೂ ಕಡಿಮೆ ಆದಾಯದ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ.

ರಾಜ್ಯದಲ್ಲಿ ಪಡಿತರ ಚೀಟಿಗಳ ಸಂಖ್ಯೆ:

ಸರ್ಕಾರದ ಮಾಹಿತಿಯ ಪ್ರಕಾರ ಕರ್ನಾಟಕದಲ್ಲಿ ಈಗಾಗಲೇ ಸುಮಾರು 1.24 ಕೋಟಿ ಕುಟುಂಬಗಳು PHH ಅಥವಾ ಅಂತ್ಯೋದಯ ಪಡಿತರ ಚೀಟಿಗಳನ್ನು ಹೊಂದಿವೆ. ಕೇಂದ್ರ ಸರ್ಕಾರವು ರಾಜ್ಯದಲ್ಲಿ ಸುಮಾರು 1.09 ಕೋಟಿ ಕುಟುಂಬಗಳನ್ನು ಮಾತ್ರ ಅರ್ಹರೆಂದು ಗುರುತಿಸಿದ್ದರೂ, ರಾಜ್ಯ ಸರ್ಕಾರವು ಹೆಚ್ಚುವರಿ ಕುಟುಂಬಗಳನ್ನು ಒಳಗೊಂಡಿದೆ. ಈ ಮೂಲಕ ಹೆಚ್ಚಿನ ಜನರಿಗೆ ಆಹಾರ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ.

ಪಡಿತರ ಚೀಟಿಗಳಿಗೆ ಹೆಚ್ಚುತ್ತಿರುವ ಬೇಡಿಕೆ:

ಪಡಿತರ ಚೀಟಿಗಳು ಈಗ ಆಹಾರ ಧಾನ್ಯಗಳ ವಿತರಣೆ ಮಾತ್ರವಲ್ಲದೆ ಹಲವು ಸರ್ಕಾರಿ ಯೋಜನೆಗಳಿಗೆ ಪ್ರಮುಖ ದಾಖಲೆಗಳಾಗಿ ಬಳಕೆಯಾಗುತ್ತಿವೆ. ಇದರಿಂದಾಗಿ ಜನರಲ್ಲಿ ಈ ಚೀಟಿಗಳಿಗೆ ಹೆಚ್ಚಿನ ಬೇಡಿಕೆ ಕಂಡುಬರುತ್ತಿದೆ. ಹಿಂದೆ ಬಡತನ ರೇಖೆಗಿಂತ ಕೆಳಗಿನ (BPL) ಕಾರ್ಡ್ ಎಂದು ಕರೆಯಲಾಗುತ್ತಿದ್ದ ಈ ಚೀಟಿ ಹಲವಾರು ಸೌಲಭ್ಯಗಳಿಗೆ ಆಧಾರವಾಗಿರುವುದರಿಂದ ಅನೇಕರು ಇದನ್ನು ಪಡೆಯಲು ಆಸಕ್ತಿ ತೋರುತ್ತಿದ್ದಾರೆ.

ಆದಾಯ ಮಿತಿಯನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವುದಕ್ಕೂ ಮೊದಲು ಎಲ್ಲಾ ಅಂಶಗಳನ್ನು ಪರಿಶೀಲಿಸುವ ಸಾಧ್ಯತೆ ಇದೆ. ಜೀವನ ವೆಚ್ಚ, ಜನಸಂಖ್ಯೆಯ ಸ್ಥಿತಿ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೊಸ ನಿಯಮಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ. ಈ ಬದಲಾವಣೆ ಜಾರಿಯಾದರೆ ಹಲವಾರು ಕುಟುಂಬಗಳಿಗೆ ಪಡಿತರ ಚೀಟಿ ಪಡೆಯಲು ಅವಕಾಶ ಹೆಚ್ಚಾಗುವ ಸಾಧ್ಯತೆ ಇದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+