ಬೆಂಗಳೂರು: ಭಾರತದಲ್ಲಿ ಚೀನಾ ವಸ್ತುಗಳನ್ನು ನಿಷೇಧ ಮಾಡುವ ಕುರಿತಂತೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ವಿರೋಧ ವ್ಯಕ್ತಪಡಿಸಿದೆ.
ಒಂದು ವೇಳೆ ಭಾರತದಲ್ಲಿ ಚೀನಾ ವಸ್ತುಗಳನ್ನು ಸಂಪೂರ್ಣವಾಗಿ ನಿರಾಕರಿಸಿದರೆ ಸಣ್ಣ ಕೈಗಾರಿಕೆಗಳು ಭಾರೀ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿವೆ ಎಂದು ಕಾಸಿಯಾ ಅಭಿಪ್ರಾಯಪಟ್ಟಿದೆ. ಭಾರತ ಮತ್ತು ಚೀನಾದ ನಡುವೆ ವಾರ್ಷಿಕವಾಗಿ 90 ಬಿಲಿಯನ್ ಡಾಲರ್ ವಹಿವಾಟು ಇದೆ. ವಿಶ್ವದಲ್ಲಿ ದೊಡ್ಡ ಉತ್ಪಾದನಾ ರಾಷ್ಟ್ರವಾಗಿರುವ ಚೀನಾವನ್ನು ಭಾರತ ಸಾಕಷ್ಟು ಅವಲಂಬಿಸಿದೆ. ಹೀಗಾಗಿ ಏಕಾಏಕಿ ಚೀನಾದ ವಸ್ತುಗಳ ಮೇಲೆ ನಿರ್ಭಂಧ ವಿಧಿಸುವುದು ಸರಿಯಲ್ಲ ಎಂದು ಕಾಸಿಯಾ ಹೇಳಿದೆ.
ಭಾರತದ ಅನೇಕ ಕ್ಷೇತ್ರಗಳಲ್ಲಿ ಚೀನಾದ ಅನೇಕ ಕಂಪನಿಗಳು ಹೂಡಿಕೆ ಮಾಡಿವೆ. ಇದರಿಂದ ಲಕ್ಷಾಂತರ ಜನರಿಗೆ ಉದ್ಯೋಗವಕಾಶಗಳು ಸಿಕ್ಕಿವೆ. ಅದೇ ರೀತಿ ಭಾರತದ ಅನೇಕ ಕಂಪನಿಗಳು ಚೀನಾದಲ್ಲಿ ಹೂಡಿಕೆ ಮಾಡಿವೆ. ಒಂದು ವೇಳೆ ಚೀನಾವನ್ನು ಬಹಿಷ್ಕರಿಸಿದರೇ ಈ ಎಲ್ಲ ವ್ಯವಹಾರಗಳು ನಿಂತು, ಲಕ್ಷಾಂತರ ಕೋಟಿ ರುಪಾಯಿ ಹಾನಿಯಾಗಲಿದೆ. ಇದು ಭಾರತದ ಆರ್ಥಿಕ ಹಿಂಜರಿತಕ್ಕೆ ಮಹತ್ವದ ಕಾರಣವಾಗಲಿದೆ ಎಂದು ಕಾಸಿಯಾ ಹೇಳಿದೆ.

ಕೋವಿಡ್ 19 ರ ಪರಿಣಾಮ ಕರ್ನಾಟಕದ ಸಣ್ಣ ಕೈಗಾರಿಕೆಗಳು ಭಾರೀ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಸರ್ಕಾರ ಶೇ 4 ರ ಬಡ್ಡಿ ದರದಲ್ಲಿ ಸಾಲ ವಿತರಿಸಿ ಅವುಗಳನ್ನು ಪುನಶ್ಚೇತನ ಮಾಡಬೇಕು ಎಂದು ಕಾಸಿಯಾ ಮನವಿ ಮಾಡಿದೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

America-Israel, Iran Conflict: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತೀವ್ರ; ತುರ್ತು ಕದನ ವಿರಾಮಕ್ಕೆ ಚೀನಾ ಒತ್ತಾಯ



Click it and Unblock the Notifications