ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು(KSEAB) ಇಂದು( ಜೂನ್ 13 ಶುಕ್ರವಾರ) ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಿದೆ. ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕವನ್ನು ಪಡೆದುಕೊಂಡಿದ್ದಾರೆ.ರಿಸಲ್ಟ್ ನೋಡೋದು ಹೇಗೆ? ಎಂಬ ಹೆಚ್ಚಿನ ವಿವರ ಇಲ್ಲಿದೆ ನೋಡಿ.
ಕರ್ನಾಟಕ SSLC 2 ಫಲಿತಾಂಶ 2025
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 10 ನೇ ತರಗತಿಯ ಪರೀಕ್ಷೆಯ 2 ನೇ ಫಲಿತಾಂಶವನ್ನು 2025ನ್ನು ಇಂದು ಪ್ರಕಟಿಸಿದೆ ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ನೋಡಬಹುದು.

87,330 ವಿದ್ಯಾರ್ಥಿಗಳು ಉತ್ತೀರ್ಣ
ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ (KSEAB) ನಡೆಸಿದ 2025 ರ ಪರೀಕ್ಷೆ -2 ರ ಪರೀಕ್ಷೆಯಲ್ಲಿ ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕೆಎಸ್ಇಎಬಿ ಅಧಿಕೃತವಾಗಿ ಮಾಹಿತಿಯನ್ನು ತಿಳಿಸಿದೆ. ಈ ವರ್ಷ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಮೇ 26 ರಿಂದ ಜೂನ್ 2, 2025 ರವರೆಗೆ ನಡೆಯಿತು. ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆಯೊಂದಿಗೆ ಪ್ರಾರಂಭವಾಯಿತು ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಎನ್‌ಎಸ್‌ಐ 'ಸಿ' ನಲ್ಲಿ ಪ್ರೋಗ್ರಾಮಿಂಗ್ ಮತ್ತು ಅರ್ಥಶಾಸ್ತ್ರ ಪತ್ರಿಕೆಗಳ ಅಂಶಗಳೊಂದಿಗೆ ಕೊನೆಗೊಂಡಿತು. ಎಲ್ಲಾ ಪರೀಕ್ಷೆಗಳನ್ನು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಒಂದೇ ಪಾಳಿಯಲ್ಲಿ ನಡೆಸಲಾಯಿತು.
ಈ ಕುರಿತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು ಇಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಇದು ನಮ್ಮಗೆ ಸಂತಸ ತಂದಿದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.ಈ ಫಲಿತಾಂಶವು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂರು ಪರೀಕ್ಷಾ ಪದ್ಧತಿಯ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದು ಅವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.
ಕರ್ನಾಟಕ SSLC 2 ಫಲಿತಾಂಶ 2025 ಪರಿಶೀಲಿಸುವುದು ಹೇಗೆ?
1. ಮೊದಲು karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
2. ತದ ನಂತರ ಮುಖಪುಟದಲ್ಲಿ KSEAB 10ನೇ SSLC ಪರೀಕ್ಷೆಯ 2 ಫಲಿತಾಂಶಗಳು 2025 ಅಂತ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
3. ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ ಮತ್ತು ಸಲ್ಲಿಸಿ.
4. ಪರದೆಯ ಮೇಲೆ ಪ್ರದರ್ಶಿಸಲಾದ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.
5.ನಂತರ ಫಲಿತಾಂಶದ ಪ್ರತಿಯನ್ನು ಮುದ್ರಣಮಾಡಿ, ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೇಕಾಗುತ್ತದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-3: ಶುಲ್ಕ ವಿನಾಯಿತಿ
2024-25ನೇ ಸಾಲಿನ ಪರೀಕ್ಷೆ-2 ರಲ್ಲಿ ಫಲಿತಾಂಶ ಪೂರ್ಣಗೊಳಿಸದ ಶಾಲಾ ಅಭ್ಯರ್ಥಿಗಳಿಗೆ ಪರೀಕ್ಷೆ-3ಕ್ಕೆ ಪರೀಕ್ಷಾ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.ಆದರೆ, ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು ಎಂದು ಶಿಕ್ಷಣ ಸಚಿವ ವಧುಬಂಗಾರಪ್ಪ ಮಾಗಿತಿಯನ್ನು ತಿಳಿಸಿದ್ದಾರೆ. ಇದಲ್ಲದೇ 3ನೇ ಪರೀಕ್ಷೆಗೂ ಸಹ ಪರಿಹಾರ ಬೋಧನಾ ತರಗತಿಗಳನ್ನು ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಮತ್ತೊಂದು ಅವಕಾಶವನ್ನು ನೀಡಲಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.ಈ ಪರೀಕ್ಷೆಯನ್ನು ತಗೆದುಕೊಳ್ಳವವರಿಗೆ ಪರೀಕ್ಷೆಯ ವಿನಾಯಿತಿ ಕೂಡ ಇರುತ್ತದೆ.ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು.
2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರಲ್ಲಿ ಸರ್ಕಾರಿ ಶಾಲೆಗಳ ಉತ್ತೀರ್ಣವಾದರ ಪ್ರಮಾಣ ಶೇ. 36.65ರಷ್ಟು ಇತ್ತು.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications