SSLC Result 2025:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಬಾರಿ ಶೇ.66.14ರಷ್ಟು ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಬಾರಿಯ SSLC ಫಲಿತಾಂಶದಲ್ಲಿ ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರು 11ನೇ ಸ್ಥಾನದಲ್ಲಿ ಇದೆ.

SSLC RESULT: ಇವರೇ ರಾಜ್ಯಕ್ಕೆ ಪ್ರಥಮ
SSLC ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಮಾರ್ಕ್ಸ್ ಪಡೆದಿದ್ದಾರೆ.
ಬೆಂಗಳೂರು ಗ್ರಾಮೀಣ ಜಿಲ್ಲೆಯ ಭಾವನಾ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಾಹ್ನವಿ, ನಮಿತ, ಮೈಸೂರು ಜಿಲ್ಲೆಯ ಧನುಷ್, ಶಿವಮೊಗ್ಗ ಜಿಲ್ಲೆಯ ನಮನ, ಚಿತ್ರದುರ್ಗ ಜಿಲ್ಲೆಯ ನಂದನ್, ಹಾಗೂ ಮಂಡ್ಯ ಜಿಲ್ಲೆಯ ಧೃತಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಾಗುತ್ತದೆ. ಪ್ರಸ್ತುತ, ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ ರಾಜ್ಯದ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ.
8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು
ಕಳೆದ ತಿಂಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆಗಳು ನಡೆದಿದ್ದವು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ. ಕೆಲ ಸಣಪುಟ್ಟ ಕಾರ್ಯಗಳಿದ್ದು, ಅದು ಕೂಡಲೇ ಮುಕ್ತಾಯವಾಗಿದೆ. ನಾಳೆಯೇ (ಮೇ 2 ರಂ)ದು ಫಲಿತಾಂಶ ಪ್ರಕಟವಾಗಲಿದೆ. ಸಾಧ್ಯತೆಯಿದೆ. ರಾಜ್ಯದ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೊಂದಯಿಸಿಕೊಂಡಿದ್ದರು. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಜೊತೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವುದು ಹೇಗೆ?
ಹಂತ 1: ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿರುವ SSLC ಫಲಿತಾಂಶ 2025 (SSLC Results 2025) ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಇದಾದ ಬಳಿಕ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಗೋಚರಿಸುತ್ತದೆ.
ಹಂತ 5: ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಆಫ್ ಲೈನ್‌ನಲ್ಲಿಯೂ ಫಲಿತಾಂಶ ಲಭ್ಯ
ಆಫ್ ಲೈನ್‌ನಲ್ಲಿ ಫಲಿತಾಂಶವನ್ನು ನೋಡಲು ಬಯಸುವವರು ತಮ್ಮ ನೋಂದಣಿ ಸಂಖ್ಯೆಯೊಂದಿಗೆ 56263 ಸಂಖ್ಯೆಗೆ ಸಂದೇಶ (ಎಸ್ಎಂಎಸ್) ಕಳುಹಿಸಬಹುದು. ಈ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.
ಫೇಲ್ ಆದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಕಡಿಮೆ ಅಂಕ ಗಳಿಸಿ ಅನುತ್ತೀರ್ಣರಾದವರಿಗೆ ಮತ್ತೆರಡು ಬಾರಿ ಅವಕಾಶವನ್ನು ನೀಡಲಾಗಿದೆ. ಈ ಬಾರಿ ನೀವು ಎಕ್ಸಾಮ್ ಶುಲ್ಕ ಇಲ್ಲದೆಯೇ ಪರೀಕ್ಷೆ ಬರೆಯುವ ಅವಕಾಶವನ್ನು ನೀಡಿದೆ.ಫೇಲ್ ಆದ ವಿದ್ಯಾರ್ಥಿಗಳಿಗೆ ಸ್ಪೆಷಲ್ ಕ್ಲಾಸ್ ಮಾಡಲು ಶಾಲೆಗಳಿಗೆ ಸೂಚನೆಯನ್ನು ನೀಡಲಾಗಿದೆ.
SMS ಮೂಲಕ SSLC ಫಲಿತಾಂಶವನ್ನು ನೋಡಬಹುದು
ವಿದ್ಯಾರ್ಥಿಗಳು ತಮ್ಮ ಕರ್ನಾಟಕ SSLC ಫಲಿತಾಂಶ 2025 ಅನ್ನು SMS ಮೂಲಕವೂ ಪರಿಶೀಲಿಸಬಹುದು.KSEEB10 ಎಂದು ಟೈಪ್ ಮಾಡಿ ನಿಮ್ಮ ರೋಲ್ ನಂಬರ್ ಹಾಕಿ 56263 ಗೆ SMS ಕಳುಹಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.


Click it and Unblock the Notifications