ನವದೆಹಲಿ, ಆಗಸ್ಟ್ 16: 2023-24ರ ಸಾಲಿನಲ್ಲಿ 54,427 ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಕರ್ನಾಟಕಕ್ಕೆ ಹರಿದು ಬಂದಿದೆ. ಎಫ್‌ಡಿಎ ಹೂಡಿಕೆಗೆ ಕರ್ನಾಟಕ ದೇಶದಲ್ಲಿಯೇ ನೆಚ್ಚಿನ ತಾಣವಾಗಿದ್ದು ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಜೊತೆಗೆ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಕೈಗಾರಿಕೆ, ಕೃಷಿ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಬಹು ಆಯಾಮದ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು. ರಾಷ್ಟ್ರಧ್ವಜಾರೋಹಣ ನೆರವೇರಿಸಿ 78ನೇ ಸ್ವಾತಂತ್ರ್ಯೋತ್ಸವದ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, 13 ಕೈಗಾರಿಕೆಕಾ ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ತಿಳಿಸಿದರು. ಈ ಮೂಲಕ 42,915 ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆ ಹರಿದು ಬರಲಿದೆ ಎಂದು ಇಳಿಸಿದರು.

ಸುಮಾರು 22,600 ಉದ್ಯೋಗ ಸೃಷ್ಟಿ ನಿರೀಕ್ಷೆಯಿದೆ. 2023-24ರ ಅವಧಿಯಲ್ಲಿ ಏಕ ಗವಾಕ್ಷಿ ಸಮಿತಿಗಳ ಮೂಲಕ 591 ಹೂಡಿಕೆ ಯೋಜನೆಗಳನ್ನು ಸರ್ಕಾರ ಅನುಮೋದಿಸಿದೆ. 84,232 ಕೋಟಿ ರೂ. ಹೂಡಿಕೆ ಹರಿದು ಬರಲಿದ್ದು ಮತ್ತು 1,56,986 ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಅವರು ಹೇಳಿದರು.
"2023-24ರಲ್ಲಿ, ನಮ್ಮ ರಾಜ್ಯವು ರಫ್ತಿನಲ್ಲಿ ಮೊದಲ ಸ್ಥಾನದಲ್ಲಿದೆ. 1,66,545 ಮಿಲಿಯನ್ ಡಾಲರ್ ಮೌಲ್ಯದೊಂದಿಗೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 5.20 ಹೆಚ್ಚಿಗೆ ಬೆಳವಣಿಗೆ ಸಾದಿಸಿದೆ. 2025 ರಲ್ಲಿ ನಡೆಯಲಿರುವ ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್-ಇನ್ವೆಸ್ಟ್ ಕರ್ನಾಟಕ 2025 ರಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆವೆ. ಪ್ರಪಂಚದಾದ್ಯಂತ ರೋಡ್ ಶೋಗಳನ್ನು ನಡೆಸುವ ಮೂಲಕ ಹೂಡಿಕೆದಾರರನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಕರ್ನಾಟಕ ಕ್ಲೀನ್ ಮೊಬಿಲಿಟಿ ಪಾಲಿಸಿ 2024-29 ಅನ್ನು ರಚಿಸಿದ್ದು, ಕ್ಲೀನ್ ಮೊಬಿಲಿಟಿ ವೆಹಿಕಲ್ ವಲಯದಲ್ಲಿ 50,000 ಕೋಟಿ ರೂ. ಹೂಡಿಕೆ ಹರಿದು ಬರಲಿದ್ದು ಮತ್ತು ಸರಿಸುಮಾರು ಒಂದು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು.
ನೀತಿಯು ಈಗ ಅನುಮೋದನೆಯ ಅಂತಿಮ ಹಂತದಲ್ಲಿದೆ. ಐಟಿ ಮತ್ತು ಬಿಟಿ ವಲಯಗಳಲ್ಲಿನ ಬೇಡಿಕೆಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಲು 'ಕೌಶಲ್ಯ ಸಲಹಾ ಸಮಿತಿ'ಯನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಉತ್ತಮ ಮೂಲಸೌಕರ್ಯ ಮತ್ತು ಸಾರಿಗೆ ಸಂಪರ್ಕವು ಆರ್ಥಿಕ ಬೆಳವಣಿಗೆಗೆ ವೇಗವರ್ಧಕವಾಗಿದೆ, ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷದಲ್ಲಿ 1,917 ಕಿಮೀ ರಾಜ್ಯ ಹೆದ್ದಾರಿಗಳು, 2,502 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳು ಮತ್ತು 150 ಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು. ಸರ್ಕಾರದ "ಬ್ರಾಂಡ್ ಬೆಂಗಳೂರು" ಕಾರ್ಯಕ್ರಮದ ಮುಖೇನ ರಾಜ್ಯದ ರಾಜಧಾನಿಯನ್ನು ವಿಶ್ವದರ್ಜೆಯ ನಗರವನ್ನಾಗಿ ಪರಿವರ್ತಿಸಲು ಮುಂದಾಗಿದೆ. 48,686 ರೂ. ಬಳಸಿಕೊಂಡು ಸಮಗ್ರ ಮಹಾನಗರವನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.
ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವ ಪ್ರಯತ್ನದಲ್ಲಿ ಪೆರಿಫೆರಲ್ ರಿಂಗ್ ರೋಡ್ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತದೆ. ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಲು ಈ ಬಾರಿ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಎತ್ತಿನಹೊಳೆ ಯೋಜನೆಯಡಿ ಈ ವರ್ಷ 855.02 ಕೋಟಿ ರೂ. ವೆಚ್ಚ ಮಾಡಲಾಗಿದೆ. ರಾಜ್ಯದ ಹಲವೆಡೆ ಮುಂಗಾರು ಮಳೆಯಿಂದ ಉಂಟಾಗಿರುವ ಪ್ರವಾಹಕ್ಕೆ ಸಂಬಂಧಿಸಿ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಉಸ್ತುವಾರಿ ಸಚಿವರು ಕೂಡ ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಮಾನವ ಪ್ರಾಣ ಹಾನಿ, ಜಾನುವಾರು ಮತ್ತು ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ನಾನು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಮನೆ ಕಳೆದುಕೊಂಡವರಿಗೆ 1.2 ಲಕ್ಷ ರೂಪಾಯಿ ಪರಿಹಾರದೊಂದಿಗೆ ಮನೆಗಳನ್ನು ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಪಶ್ಚಿಮಘಟ್ಟ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನದ 250 ಗ್ರಾಮ ಪಂಚಾಯಿತಿಗಳ 1,351 ಗ್ರಾಮಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಹಳಿದೆ. ಈ ಪ್ರದೇಶಗಳಲ್ಲಿ ಭೂಕುಸಿತವನ್ನು ತಡೆಗಟ್ಟಲು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ ಮತ್ತು ರಾಷ್ಟ್ರೀಯ ರಾಕ್ ಮೆಕ್ಯಾನಿಕ್ಸ್ (ಎನ್‌ಐಆರ್‌ಎಂ) ಸಹಯೋಗದಲ್ಲಿ ರೂ 100 ಕೋಟಿ ವೆಚ್ಚದಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಮಾನವ-ವನ್ಯಜೀವಿ ಸಂಘರ್ಷದ ಕುರಿತು ಮಾತನಾಡಿದ ಸಿಎಂ, ಇದನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಸರ್ಕಾರ ಅಧಿಕಾರಕ್ಕೆ ಬಂದ ನಂತರ 120 ಕಿಮೀ ರೈಲ್ವೆ ಬ್ಯಾರಿಕೇಡ್‌ಗಳ ನಿರ್ಮಾಣಕ್ಕೆ ಚಾಲನೆ ನೀಡಿದೆ. ಹೆಚ್ಚುವರಿಯಾಗಿ, 7 ಆನೆ ಕಾರ್ಯಪಡೆ ಮತ್ತು 2 ಚಿರತೆ ಕಾರ್ಯಪಡೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications