ಕರ್ನಾಟಕ (Karnataka) ರಾಜ್ಯದಲ್ಲಿ ಫೆಬ್ರವರಿ ಆರಂಭವಾಗುತ್ತಿದ್ದಂತೆ ತಾಪಮಾನವೂ ಏರಿಕೆ ಕಂಡಿತ್ತು. ಆದ್ರೆ ಇದೀಗ ಫೆಬ್ರವರಿ ಅಂತ್ಯದ ವೇಳೆಗೆ ಮತ್ತೆ ಚಳಿ, ಮಳೆ ಬರುವ ನಿರೀಕ್ಷೆಗಳಿದೆ. ಕಳೆದೆರಡು ದಿನಗಳಿಂದ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ, ಮಳೆ, ಚಳಿ ಹವಾಮಾನ ಕಂಡು ಬಂದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ, ಕರ್ನಾಟಕ ರಾಜ್ಯಕ್ಕೂ ತಟ್ಟಿದೆ. ಆ ಕಾರಣದಿಂದ ಇದೀಗ ರಾಜ್ಯದ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain) ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಮಳೆ?
ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೇ ಹವಾಮಾನ ಇಲಾಖೆ ಕೂಡಾ ಈ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಇನ್ನು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ನಿನ್ನೆ, ಮೊನ್ನೆ ಮಳೆಯಾಗಿತ್ತು.
ಇನ್ನು ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಿದ್ದು, ಕೆಲವೆಡೆ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್!
ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ವಿಜಯಪುರ, ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಮುಂದಿನ 1 ವಾರ ರಾಜ್ಯದ ಹಲವೆಡೆ ಒಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನ ಹವಾಮಾನ!
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆ ಸಂಪೂರ್ಣ ಮೋಡಕವಿದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ. ಇನ್ನು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.
ಕರಾವಳಿ ಜಿಲ್ಲೆಗಳ ಹವಾಮಾನ:
ಒಟ್ಟಾರೆ ಒಣ ಹವೆ ಇರುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ. ಆದ್ರೆ ಕೆಲವೊಂದು ಕಡೆ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ.
ಉತ್ತರ ಒಳನಾಡು ಜಿಲ್ಲೆಗಳು:
ಇನ್ನು ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸೂಚನೆ ಇದ್ದರೂ, ಒಣ ಹವೆಯೂ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದಂತೆ, ಕೆಲವೆಡೆ ದಿಢೀರ್ ಮಳೆಯಾಗಿದೆ. ಅಲ್ಲದೇ ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗಿದ್ದು, ಕೆಲವು ದಿನಗಳವರೆಗೆ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದೀಗ ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಸ್ವಲ್ಪ ಏರಿಕೆ ಕಾಣಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಕೆಲವು ಕಡೆಗಳಲ್ಲಿ ಮಳೆ ಇಂದು ಬಾರದೇ ಇರಬಹುದು ಎಂದು ಹೇಳಲಾಗಿದೆ.


Click it and Unblock the Notifications