ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿ ಡಿಸೆಂಬರ್ 9 ರಿಂದ ಮುಂದಿನ ಐದು ದಿನಗಳ ಕಾಲ ಹಗುರವಾಗಿ ಸಾಧಾರಣ ಮಳೆಯಾಗಲಿದೆ ಎಂದು ಈ ಹಿಂದೆಯೇ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಈಗ ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಒಟ್ಟಾಗಿ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಭಾನುವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಮೂಲ್ಕಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ (ಎಲ್ಲಾ ಜಿಲ್ಲೆ ದಕ್ಷಿಣ ಕನ್ನಡ), ಪಣಂಬೂರು, ಮಾಣಿ, ಮಂಗಳೂರು, ಉಪ್ಪಿನಂಗಡಿ ಶ್ರವಣಬೆಳಗೊಳ, ಹಾಸನದಲ್ಲಿ ಮಳೆಯಾಗಿದೆ. ಇಂದಿನ ಹವಾಮಾನ ವಿವರ ಇಲ್ಲಿದೆ ಮುಂದೆ ಓದಿ....

ಹವಾಮಾನ ಹೇಗಿರಲಿದೆ?
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣಹವೆಯ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಭಾರೀ ಮಳೆಯ ಮುನ್ಸೂಚನೆಯಿಲ್ಲವಾದರೂ ಗುಡುಗು ಮಿಂಚಿನ ಸಾಧ್ಯತೆಯಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.
ಡಿಸೆಂಬರ್ 12ರ ಬೆಳಿಗ್ಗೆವರೆಗಿನ ಹವಾಮಾನ
24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೆೇಳೆಗೆ ಬಹಳ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಯಿದೆ.
ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಯಿದೆ.
ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ದಕ್ಷಿಣ ಜಿಲ್ಲೆಗಳಾದ ಮಳೆಯಾಗಲಿದೆ. ಹಾಗೆಯೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.


Click it and Unblock the Notifications