ಕರ್ನಾಟಕದಲ್ಲಿ (Karnataka) ಇತ್ತೀಚೆಗೆ ಕೆಲವು ಜಿಲ್ಲೆಗಳಲ್ಲಿ ಮಳೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಲು ಕಾಣಿಸಿಕೊಳ್ಳುತ್ತಿದೆ. ಕಳೆದೆರಡು ದಿನಗಳಿಂದ ಆರಂಭವಾದ ಮಳೆರಾಯನ (Rain) ಅಬ್ಬರ, ಇದೀಗ ಕೆಲವು ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೂ ಕೆಲವು ಜಿಲ್ಲೆಗಳಲ್ಲಿ ತಡೆಯಲಾಗದಷ್ಟು ತಾಪಮಾನ ಏರಿಕೆ ಕಂಡಿದೆ. ಕರಾವಳಿ ಜಿಲ್ಲೆಗಳಲ್ಲಂತೂ ಬಿಸಿಲಿನ ಬೇಗೆಗೆ ಜನ ಬೆಚ್ಚಿಬಿದ್ದಿದ್ದಾರೆ. ಆದರೆ ಇದೀಗ ಹವಾಮಾನ ಇಲಾಖೆ ಕೆಲವೆಡೆ ಮಳೆ ಮುಂದುವರೆಯಲಿದೆ ಎಂದು ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯ ಉತ್ತರ ಶ್ರೀಲಂಕಾ ಕೇಂದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಇದೀಗ ರಾಜ್ಯದ ಹಲವು ಕಡೆಗಳಲ್ಲಿ ಮಳೆ ವಾತಾವರಣ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗಿದೆ. ಆದ್ದರಿಂದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೆಯೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ಈ ವಾರದಲ್ಲೂ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಒಣ ಹವೆ!
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವಾಮಾನ ಮುಂದುವರೆಯಲಿದೆ ಎನ್ನಲಾಗಿದೆ. ಬಂಗಾಳಕೊಲ್ಲಿಯಲ್ಲಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ರೆ ಹಗಲಿನಲ್ಲಿ ಬಿಸಿಲು ಹೆಚ್ಚಾಗುವ ನಿರೀಕ್ಷೆಯಿದೆ. ಹಾಗೆಯೇ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಸ್ವಲ್ಪ ಹೆಚ್ಚಾಗಿದ್ದು, ಫೆಬ್ರವರಿ ಅಂತ್ಯದಲ್ಲಿ ಭಾರೀ ಏರಿಕೆ ಕಾಣಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನ ಹವಾಮಾನ:
ಬೆಂಗಳೂರು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆ ಪ್ರಕಾರ ಗರಿಷ್ಠ ತಾಪಮಾನ 31 ರಿಂದ 31 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ. ಇನ್ನು ಕನಿಷ್ಠ ತಾಪಮಾನ 19 ರಿಂದ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಪ್ರಸ್ತುತ ತಾಪಮಾನ ನಿರೀಕ್ಷೆಗಿಂತಲೂ ಏರಿಕೆಯಲ್ಲಿದ್ದು, ಫೆಬ್ರವರಿ ಅಂತ್ಯದಲ್ಲಿ ಬೇಸಿಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ರಾಯಚೂರು, ಕಲಬುರಗಿ, ಬೀದರ್ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ತಾಪಮಾನ 33 ರಿಂದ 35 ಡಿಗ್ರಿ ಸೆಲ್ಸಿಯಸ್ ಇರಬಹುದು ಎನ್ನಲಾಗಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಜೊತೆಗೆ ಬಿಸಿಲು ಕಾಣಿಸಿಕೊಳ್ಳಲಿದೆ ಎನ್ನಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿರುವ ವಾಯುಭಾರ ಕುಸಿತದ ಪ್ರಭಾವ ಕಡಿಮೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ ಒಣ ಹವಾಮಾನ ಮುಂದುವರೆಯಲಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಬೆಳಿಗ್ಗೆ ಹಗುರ ಮಂಜು ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ಬಿಸಿಲಿನ ಬೇಗೆ ಹೆಚ್ಚಾಗಿರುವುದರಿಂದ ಜನರೂ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಹೊರ ಹೋಗುವಾಗ ಸನ್‌ಸ್ಕ್ರೀನ್, ಬಟ್ಟೆ, ಆರೋಗ್ಯಕರ ಆಹಾರ ಸೇವಿಸುವಂತೆ ಸಲಹೆ ನೀಡಲಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications