ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿ ಡಿಸೆಂಬರ್ 9 ರಿಂದ ಮುಂದಿನ ಐದು ದಿನಗಳ ಕಾಲ ಹಗುರವಾಗಿ ಸಾಧಾರಣ ಮಳೆಯಾಗಲಿದೆ. ಪ್ರಮುಖವಾಗಿ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ.
ಕರ್ನಾಟಕದ ಯಾವುದೇ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿಲ್ಲ. ಹಾಗೆಯೇ ಈ ಅವಧಿಯಲ್ಲಿ ಗುಡುಗು, ಮಿಂಚು ಬರುವ ಸಾಧ್ಯತೆಯನ್ನು ಕೂಡಾ ಹವಾಮಾನ ಇಲಾಖೆ ತಿಳಿಸಿಲ್ಲ. ಆದರೆ ಕೆಲವು ಕಡೆಗಳಲ್ಲಿ ಹಗುರವಾಗಿ ಮಳೆಯಾಗಲಿದೆ ಎಂದು ತಿಳಿಸಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಎಂದು ತಿಳಿಯಲು ಇಲ್ಲಿದೆ ವಿವರ ಮುಂದೆ ಓದಿ....

ಶುಕ್ರವಾರ ಹವಾಮಾನ ಹೇಗಿತ್ತು?
ಶುಕ್ರವಾರ ದಿಕ್ಷಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೆೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 12.5 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.
ಡಿಸೆಂಬರ್ 10 ಮುಂಜಾನವರೆಗಿನ ಹವಾಮಾನ
ಮುಂದಿನ 24 ಗಂಟೆಗಳು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಆದರೆ ಗುಡುಗು ಮುನ್ನೆಚ್ಚರಿಕೆಯನ್ನು, ಭಾರೀ ಮಳೆಯ ಮುನ್ನೆಚ್ಚರಿಕೆಯನ್ನು, ತಾಪಮಾನ ಎಚ್ಚರಿಕೆ, ಮೀನುಗಾರರಿಗೆ ಎಚ್ಚರಿಕೆಯನ್ನು ಹವಾಮಾನ ಇಲಾಖೆಯು ನೀಡಿಲ್ಲ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿಯೂ ಇದೇ ಹವಾಮಾನ ಇರಲಿದೆ.
ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಕೊಂಚ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ತುಮಕೂರು, ಹಾಸನ, ಕೋಲಾರ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಕೊಡಗು, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಕೊಪ್ಪಳ, ಗದಗ, ಬೆಳಗಾವಿ, ಹಾವೇರಿ, ಧಾರವಾಡದಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ ಉಳಿದಂತೆ ರಾಯಚೂರು, ಯಾದಗಿರಿ, ವಿಜಯಪುರ, ಬೀದರ, ಕಲಬುರಗಿ, ಬಾಗಲಕೋಟೆಯಲ್ಲಿ ಒಣಹವೆ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Click it and Unblock the Notifications