ಕರ್ನಾಟಕ (Karnataka) ರಾಜ್ಯದಲ್ಲಿ ಕಳೆದೊಂದು ವಾರದಿಂದ ಬಿಸಿಲು ವ್ಯಾಪಕವಾಗಿದೆ. ರಾಜ್ಯಾದ್ಯಂತ ತಾಪಮಾನದಲ್ಲಿ ಗಣನೀಯವಾಗಿ ಏರಿಕೆ ಕಂಡಿದ್ದು, ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡುತ್ತಾ ಬಂದಿದೆ. ಇದೀಗ ಮಾರ್ಚ್ 3 ರಂದು ಒಣ ಹವೆ ಮುಂದುವರೆಯಲಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಶುಷ್ಕ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದ್ದರಿಂದ ಎಲ್ಲೂ ಮಳೆ ಬರುವ ಸೂಚನೆಗಳಿಲ್ಲ ಎಂದು ಹೇಳಲಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆ ಹೆಚ್ಚಾಗಿದ್ದು, ಬೆಂಗಳೂರಿನಲ್ಲೂ (Bengaluru) ಅದೇ ರೀತಿ ಇರಲಿದೆ ಎಂದು ವರದಿಯಾಗಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಕಲಬುರಗಿ, ರಾಯಚೂರು, ಬಳ್ಳಾರಿ ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಕಾಣಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಜಿಲ್ಲೆಗಳ್ಲಲಿ 35 ರಿಂದ 37 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ದಾಖಲಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ತಾಪಮಾನ ಹೆಚ್ಚಳ
ರಾಯಚೂರು, ಬೀದರ್, ಬಳ್ಳಾರಿ, ವಿಜಯಪುರ ಸೇರಿದಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ 35 ರಿಂದ 37 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ತಾಪಮಾನ:
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 32 ರಿಂದ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19-20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎನ್ನಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಹವಾಮಾನ ತಂಪಾಗಿರಲಿದ್ದು, ಮಧ್ಯಾಹ್ನದ ವೇಳೆ ಬಿಸಿಲು ತೀವ್ರವಾಗಿ ಏರಿಕೆಯಾಗಲಿದೆ ಎನ್ನಲಾಗಿದೆ. ಮೈಸೂರು, ಮಂಡ್ಯ, ಹಾಸನ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ತಾಪಮಾನ 31 ರಿಂದ 34 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಾಗುವ ನಿರೀಕ್ಷೆಯಿದೆ.
ಕರಾವಳಿಯಲ್ಲಿ ಬಿಸಿಲು ಹೆಚ್ಚು
ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿ ತಾಪಮಾನ ಹೆಚ್ಚೇ ಇರುತ್ತದೆ. ಆದ್ರೆ ಇದೀಗ ಮಾರ್ಚ್‌ನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 32-34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಯಾವುದೇ ಮಳೆ ಸೂಚನೆ ನೀಡಲಾಗಿಲ್ಲ. ಇನ್ನು ಮಲೆನಾಡು ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕನಿಷ್ಠ ತಾಪಮಾನ 18-21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ 30-33 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.
ಮಾರ್ಚ್‌ನಲ್ಲಿ ಹೆಚ್ಚಾಗಲಿದೆ ತಾಪಮಾನ:
ನಗರದಲ್ಲಿ ಮಾರ್ಚ್ ಎರಡನೇ ವಾರವೂ ಬಿಸಿಲಿನ ಝಳ ಹೆಚ್ಚಾಗಲಿದೆ. ಈ ಪರಿಣಾಮ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಕೂಡಾ ಎಚ್ಚರಿಕೆಯಿಂ ಇರುವಂತೆ ಸೂಚನೆ ನೀಡಿದೆ. ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಅಗತ್ಯ ಇಲ್ಲದಿದ್ದರೆ, ಮನೆಯಿಂದ ಹೊರ ಹೋಗದಂತೆ ಸೂಚನೆ ನೀಡಲಾಗಿದೆ. ಈ ಸಮಯದಲ್ಲಿ ನಿರಂತರ ನೀರು, ತಂಪು ಪಾನೀಯ, ಆರೋಗ್ಯಕರ ಆಹಾರ ಸೇವಿಸಿದರೆ ಉತ್ತಮ ಎಂದು ಸಲಹೆ ನೀಡಿದ್ದಾರೆ.


Click it and Unblock the Notifications