ರಾಜ್ಯದಾದ್ಯಂತ ಡಿಸೆಂಬರ್, ಜನವರಿಯಲ್ಲಿ ತಾಪಮಾನದಲ್ಲಿ ಇಳಿಕೆಯಾಗಿತ್ತು. ಚಳಿಯೂ ವೀಪರೀತವಾಗಿತ್ತು. ಆದ್ರೆ ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ ಕಂಡು, ಒಣ ಹವೆ ಮುಂದುವರೆದಿದೆ. ಇಂದೂ (ಫೆ.7) ಕೂಡಾ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ (Bengaluru) ಮಾತ್ರ ಚಳಿ ವಾತಾವರಣ (Cold) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ.

ಎಲ್ಲೆಲ್ಳಿ ಒಣ ಹವೆ ವಾತಾವರಣ?
ಹವಾಮಾ ಇಲಾಖೆ ವರದಿ ಪ್ರಕಾರ, ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ದಾವಣಗೆರೆ, ರಾಮನಗರ, ಚಿತ್ರದುರ್ಗ, ವಿಜಯನಗರ ಸೇರಿ ಹಲವು ಕಡೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ.
ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹಾಗೆಯೇ ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲೂ ಇಂದು ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ?
ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆ ಒಣಹವೆ ಇದ್ದರೂ, ಬೆಳಗ್ಗಿನ ವಾತಾವರಣದಲ್ಲಿ ಚಳಿ ಇರುತ್ತದೆ. ಅದೇ ರೀತಿ ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ಆದ್ದರಿಂದ ಬೆಂಗಳೂರಿನಲ್ಲಿ ಇಂದು ತೀವ್ರ ಚಳಿ ಇರಲಿದೆ ಎನ್ನಲಾಗಿದೆ.
ಹವಾಮಾನದಲ್ಲಿ ನಿರಂತರ ಬದಲಾವಣೆಯಾಗುತ್ತಲೇ ಇದೆ. ಇದರಿಂದ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಚಳಿ ವಿಪರೀತವಿದ್ದಾಗ ಬೆಚ್ಚಗಿನ ಹೊದಿಗೆ, ಬಿಸಿ ಬಿಸಿ ನೀರು, ಆಹಾರ ಸೇವಿಸುವುದು ಉತ್ತಮ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಜನರು ಈ ಚಳಿಗೆ ಮುನ್ನೆಚ್ಚರಿಕೆ ವಹಿಸಬೇಕು.ರಾಜ್ಯದಲ್ಲಿ ಚಳಿಗಾಲದ ತೀವ್ರತೆ ಕೆಲವು ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಇಳಿಕೆ ಕಾಣಲಿದೆ. ಅಲ್ಲದೇ ಮುಂದಿನ ಕೆಲವು ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಬೆಳಿಗ್ಗೆ ಮತ್ತು ರಾತ್ರಿ ಸಮಯದಲ್ಲಿ ದಪ್ಪಗಿನ ಸ್ವೆಟರ್, ಜಾಕೆಟ್, ಶಾಲು, ಟೋಪಿ, ಗ್ಲೌಸ್‌ಗಳನ್ನು ಧರಿಸುವಂತೆ ಸಲಹೆ ನೀಡಲಾಗಿದೆ.
ಅಲ್ಲದೇ ಸಾಕಷ್ಟು ನೀರು ಕುಡಿಯಿರಿ. ಯೋಗ, ಸೂರ್ಯ ನಮಸ್ಕಾರ, ಅಥವಾ ವ್ಯಾಯಾಮ ಮಾಡಿ. ಈ ಮೂಲಕ ಚಳಿಗಾಲದಲ್ಲೂ ಆರೋಗ್ಯವಾಗಿರಬಹುದು.
More From GoodReturns

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications