ಕರ್ನಾಟಕದಲ್ಲಿ (Karnataka) ದಿನ ಕಳೆದಂತೆ ಹವಾಮಾನ ಬದಲಾಗುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಚಳಿಗಾಲ (Winter) ಮುಗಿಯುತ್ತಾ ಬರುತ್ತಿದೆ. ಈ ಮಧ್ಯೆ ಬಿಸಿಲಿನ ತಾಪವೂ ಹೆಚ್ಚಾಗುತ್ತಿದೆ. ಇದೀಗ ರಾಜ್ಯದಲ್ಲಿ ಕೆಲವು ದಿನಗಳವರೆಗೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆ ತಕ್ಕ ಮಟ್ಟಿಗೆ ಚಳಿ ಇದ್ದರೂ, ಮಧ್ಯಾಹ್ನದ ವೇಳೆಗೆ ತಾಪಮಾನ ಹೆಚ್ಚಾಗಬಹುದು. ಅಲ್ಲದೇ ದಿನವಿಡೀ ಒಣ ಹವೆ ಮುಂದುವರೆಯಲಿದೆ. ಹಾಗಿದ್ರೆ ಯಾವ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಅಂದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ತುಮಕೂರು, ರಾಮನಗರ, ಚಿತ್ರದುರ್ಗ, ವಿಜಯನಗರ, ಮೈಸೂರು, ಚಿಕ್ಕಮಗಳೂರು, ಕೊಡಗು, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ತಿಳಿಸಿದೆ.
ಹಾಗೆಯೇ ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಬಳ್ಳಾರಿ, ಯಾದಗಿರಿ, ವಿಜಯನಗರ, ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಇಂದು ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ?
ಬೆಂಗಳೂರಿನಲ್ಲಿ ಬೆಳಿಗ್ಗೆ ಚಳಿಯಿದ್ದರೂ, ನಂತರ ತಾಪಮಾನದಲ್ಲಿ ಏರಿಕೆ ಕಾಣಲಿದೆ. ಅಂದರೆ ಬೆಂಗಳೂರಿನ ತಾಪಮಾನ ಇಂದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಹವಾಮಾನ ಇಲಾಖೆಯ ಸೂಚನೆ:
ಮುಂದಿನ 4 ರಿಂದ 5 ದಿನಗಳ ಕಾಲ ರಾಜ್ಯದಲ್ಲಿ ಒಣ ಹವೆಯೇ ಮುಂದುವರೆಯುವ ಸಾಧ್ಯತೆ ಇದೆ. ಮಳೆ ಬರುವ ಸೂಚನೆ ಕಡಿಮೆ ಇದ್ದು, ಚಳಿ ತಕ್ಕ ಮಟ್ಟಿಗೆ ಇರಲಿದೆ ಎಂದು ಸೂಚನೆ ನೀಡಿದೆ. ಅಲ್ಲದೇ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಇಲ್ಲ. ವಿಶೇಷವಾಗಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮಂಜಿನ ವಾತಾವರಣ ಇರಲಿದ್ದು, ನಂತರ ಬಿಸಿಲು ಹೆಚ್ಚಾಗುವ ನಿರೀಕ್ಷೆ ಇದೆ.
ಜನರಿಗೆ ಸಲಹೆ:
ಹವಾಮಾನದಲ್ಲಿ ಬದಲಾವಣೆಯಾಗುತ್ತಿದ್ದಂತೆ, ಆರೋಗ್ಯದಲ್ಲೂ ಏರಿಳಿತಗಳಾಗುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನೀರು ಹೆಚ್ಚು ಕುಡಿಯಿರಿ. ಅಲ್ಲದೇ ಆಹಾರ, ಆರಾಮದಾಯಕ ಉಡುಪು, ಆರೋಗ್ಯಕರ ಜೀವನಶೈಲಿ ಪಾಲಿಸುವುದು ಮುಖ್ಯ.
ಕಳೆದ ಕೆಲವು ತಿಂಗಳಿಂದ ರಾಜ್ಯದಲ್ಲಿ ಚಳಿ ವಾತಾವರಣವೇ ಹೆಚ್ಚಾಗಿತ್ತು. ಆದ್ರೆ ಇದೀಗ ತಕ್ಕ ಮಟ್ಟಿಗೆ ಕಡಿಮೆಯಾಗಿದೆ. ಆದ್ರೆ ಕರಾವಳಿ ಸೇರಿ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಾಗಿದೆ. ಆದ್ದರಿಂದ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ.


Click it and Unblock the Notifications