ದಿನಹೋದಂತೆ ಚಳಿ (Cold) ಕಮ್ಮಿಯಾಗುತ್ತಲೇ ಇದೆ. ಅತ್ತ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಚಳಿಯಿಂದ ಗಢ ಗಢ ನಡುಗುತ್ತಿದ್ದಂತಹ ಬೆಂಗಳೂರು, ಹಲವು ಜಿಲ್ಲೆಗಳ ಜನರಿಗೆ ಇದೀಗ ಸೆಖೆ ಹೆಚ್ಚಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಇದೇ ಹವಾಮಾನ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಫೆಬ್ರವರಿ ಆರಂಭದಿಂದಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದಿದ್ದು, ಇನ್ನೂ ಕೆಲವು ದಿನಗಳವರೆಗೆ ಇದೇ ಹವಾಮಾನ ಪರಿಸ್ಥಿತಿ ಮುಂದುವರೆಯಲಿದೆ ಎಂದು ವರದಿಯಾಗಿದೆ.

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹಾಗಿದ್ರೆ ಕರ್ನಾಟಕ ರಾಜ್ಯದ ಇಂದಿನ ಹವಾಮಾನ ಪರಿಸ್ಥಿತಿ ಹೇಗಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ರಾಜ್ಯದ ಹವಾಮಾನ ಹೇಗಿದೆ?
ಇಂದು ರಾಜ್ಯಾದ್ಯಂತ ಶುಷ್ಕ ಹವಾಮಾನ ಇರಲಿದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಕಳೆದ ಕೆಲವು ದಿನಗಳಿಂದ ಬಿಸಿಲು ಆವರಿಸಿದ್ದು, ಇಂದೂ ರಾಜ್ಯದ ಎಲ್ಲಾ ಭಾಗಗಳಲ್ಲಿ ಇದೇ ಪರಿಸ್ಥಿತಿ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮುಂಜಾನೆ ಸ್ವಲ್ಪ ಮಂಜು, ಚಳಿ ಇದ್ದರೂ, ಮಧ್ಯಾಹ್ನ ಆಗುತ್ತಿದ್ದಂತೆ ಬಿಸಿಲು ಹೆಚ್ಚಾಗಲಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಹವಾಮಾನ ಪರಿಸ್ಥಿತಿ
ಇಂದು ಬೆಂಗಳೂರಿನಲ್ಲಿ ಶುಷ್ಕ ವಾತಾವರಣ ಇರಲಿದೆ. ಬೆಂಗಳೂರಿನ ತಾಪಮಾನ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇದ್ದು, ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬೆಳಗ್ಗಿನ ಜಾವ ಚಳಿ ವಾತಾವರಣ ಇರಲಿದ್ದು, ನಂತರ ಶುಷ್ಕ ವಾತಾವರಣ ಇರಲಿದೆ ಎಂದು ಸೂಚನೆ ನೀಡಲಾಗಿದೆ. ಹವಾಮಾನ ಬದಲಾವಣೆಯಿಂದ ಜನರ ಆರೋಗ್ಯದಲ್ಲೂ ಏರುಪೇರಾಗುತ್ತಿದ್ದು, ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇತರ ನಗರಗಳ ಹವಾಮಾನ ವರದಿ:
ಬೆಂಗಳೂರು: ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ - ಗರಿಷ್ಠ 29-31 ಡಿಗ್ರಿ ಸೆಲ್ಸಿಯಸ್
ಮಂಗಳೂರು: ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ - ಗರಿಷ್ಠ 31 ಡಿಗ್ರಿ ಸೆಲ್ಸಿಯಸ್
ಹುಬ್ಬಳ್ಳಿ: ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ - ಗರಿಷ್ಠ 32 ಡಿಗ್ರಿ ಸೆಲ್ಸಿಯಸ್
ದಾವಣಗೆರೆ: ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ - ಗರಿಷ್ಠ 32 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗ: ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ - ಗರಿಷ್ಠ 33 ಡಿಗ್ರಿ ಸೆಲ್ಸಿಯಸ್
ಕೋಲಾರ: ಕನಿಷ್ಠ 15-17 ಡಿಗ್ರಿ ಸೆಲ್ಸಿಯಸ್ - ಗರಿಷ್ಠ 29 ಡಿಗ್ರಿ ಸೆಲ್ಸಿಯಸ್
ಈ ಜಿಲ್ಲೆಗಳಿಗೆ ಖಡಕ್ ಸೂಚನೆ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಬಿಸಿ ಗಾಳಿ ಮತ್ತು ಶುಷ್ಕ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿಸಿಲು ಹೆಚ್ಚಾಗುವ ನಿರೀಕ್ಷೆಯಿದೆ. ಮುಂದಿನ ವಾರವಿಡೀ ಇದೇ ಹವಾಮಾನ ಪರಿಸ್ಥಿತಿ ಮುಂದುವರೆಯಲಿದೆ, ದಿನ ಹೋದಂತೆ ತಾಪಮಾನ ಏರಿಕೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.


Click it and Unblock the Notifications