ಕರ್ನಾಟಕ ರಾಜ್ಯದಲ್ಲಿ ಅತ್ತ ದಿನೇ ದಿನೇ ತಾಪಮಾನ ಭಾರೀ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಬೇಗೆ ತೀವ್ರವಾಗುತ್ತಿದ್ದು, ಕೆಲವು ದಿನಗಳವರೆಗೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಮಳೆಯ ಎಚ್ಚರಿಕೆ ಇರದಿದ್ದರೂ, ಕೆಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಬಹುತೇಕ ಭಾಗದಲ್ಲಿ ಒಣ ಹವಾಮಾನ ಮತ್ತು ಬಿಸಿಲು ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಗರಿಷ್ಠ ತಾಪಮಾನ 32 ರಿಂದ 34 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದ್ದು, ಕನಿಷ್ಠ ತಾಪಮಾನ 20 ರಿಂದ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ನಿರೀಕ್ಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಭಾರೀ ಬಿಸಿಲು:
ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಬಾಗಲಕೋಟೆ, ರಾಯಚೂರು, ಬಳ್ಳಾರಿ ಪ್ರದೇಶಗಳಲ್ಲಿ ತಾಪಮಾನ ಭಾರೀ ಹೆಚ್ಚಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34-36 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ:
ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಸುಮಾರು 19-21 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಅದರಲ್ಲೂ ಮಧ್ಯಾಹ್ನ ಆಗುತ್ತಿದ್ದಂತೆ 32-34 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಹೇಗಿದೆ ಹವಾಮಾನ:
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗುವ ಸಾಧ್ಯತೆ ಇದ್ದು, ತಾಪಮಾನ 29-31 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ಇರಲಿದೆ ಎನ್ನಲಾಗಿದೆ. ಇನ್ನು ಮಂಗಳೂರಿನಲ್ಲಿ ಕನಿಷ್ಠ 23 ಡಿಗ್ರಿ ಮತ್ತು ಗರಿಷ್ಠ 29-30 ಡಿಗ್ರಿ ಸೆಲ್ಸಿಯಸ್ ನಿರೀಕ್ಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಯ ಒಂದೆರಡು ಕಡೆ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಇನ್ನು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಂತಹ ಮಲೆನಾಡು ಪ್ರದೇಶಗಳಲ್ಲಿ ಸಹ ತಾಪಮಾನ 28-32 ಡಿಗ್ರಿ ಸೆಲ್ಸಿಯಸ್ ಇರಲಿದೆ ಎನ್ನಲಾಗಿದೆ.
ಈ ಜಿಲ್ಲೆಗಳಲ್ಲಿ ಒಣ ಹವೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಆ ಮೂಲಕ ಇಂದಿನಿಂದ ಕೆಲವು ದಿನಗಳವರೆಗೆ ಶುಷ್ಕ ವಾತಾವರಣವೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾರ್ಚ್‌ನಲ್ಲಿ ಹೆಚ್ಚಾಗಲಿದೆ ತಾಪಮಾನ!
ಹೌದು, ಫೆಬ್ರವರಿ ಅಂತ್ಯದ ವೇಳೆ ತಾಪಮಾನ ಭಾರೀ ಹೆಚ್ಚಳ ಕಂಡಿದ್ದು, ಇದೀಗ ಮಾರ್ಚ್‌ನಲ್ಲೂ ಅದೇ ರೀತಿಯ ಹವಾಮಾನ ಮುಂದುವರೆಯುವ ಸಾಧ್ಯತೆ ಇದೆ. ಅದರಲ್ಲೂ ಮಾರ್ಚ್ ಎರಡನೇ ವಾರದಲ್ಲಿ ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ. ಹವಾಮಾನ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದ್ದು, ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ಅನಗತ್ಯವಾಗಿ ಮನೆಯಿಂದ ಹೊರ ಹೋಗದಂತೆ ಸಲಹೆ ನೀಡಲಾಗಿದೆ.
ಬೇಸಿಗೆ ಹೆಚ್ಚಾಗುವ ಪರಿಣಾಮ, ಜನರು ನಿರಂತರ ನೀರು, ತಂಪು ಪಾನೀಯ, ಆರೋಗ್ಯಕರ ಆಹಾರ ಸೇವಿಸುವ ಅಭ್ಯಾಸ ಮಾಡಿಕೊಳ್ಳಲಿ ಎಂದು ಸಲಹೆ ನೀಡಲಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications