ಕರ್ನಾಟಕ ರಾಜ್ಯದಲ್ಲಿ (Karnataka) ಕೆಲವು ವಾರಗಳ ಹಿಂದಷ್ಟೇ ಮೈಕೊರೆಯುವ ಚಳಿ ಇತ್ತು. ಆದರೆ ಇತ್ತೀಚೆಗೆ ಚಳಿ ಪ್ರಮಾಣ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. ಇದೀಗ ಹವಾಮಾನ ಇಲಾಖೆ ಕೂಡಾ ಚಳಿ ಪ್ರಮಾಣ ಇಳಿಕೆಯಾಗಬಹುದು ಎಂದು ಸೂಚನೆ ಹೊರಡಿಸಿದ್ದು, ಬಿಸಿಲು ಹೆಚ್ಚಾಗಬಹುದು ಎಂದು ಸೂಚನೆ ನೀಡಿದೆ. ಈ ವರ್ಷ ರಾಜ್ಯದಲ್ಲಿ ತಾಪಮಾನದಲ್ಲಿ ಏರಿಕಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.

ಹೌದು, ಇತ್ತೀಚೆಗೆ ಕರ್ನಾಟಕದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಮುಂದಿನ ವಾರದಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ಕೆಲವು ಪ್ರದೇಶಗಳಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಿಂದ 35 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಬಹುದು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ವಿಪರೀತ ಚಳಿ ವಾತಾವಾರಣವಿತ್ತು. ಆದ್ರೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲೂ ವಾತಾವರಣದಲ್ಲಿ ಬದಲಾಗಲಿದೆ ಎಂದು ವರದಿಯಾಗಿದೆ.
ಈ ಜಿಲ್ಲೆಗಳಲ್ಲಿ ಭಾರೀ ಚಳಿ
ರಾಜ್ಯದ ಬಯಲು ಸೀಮೆಗಳಲ್ಲಿ ಕನಿಷ್ಠ ತಾಪಮಾನ ದಾಖಲಿಸುವ ಮೂಲಕ ಮಂಡ್ಯ ಜಿಲ್ಲೆ ಸದ್ಯ ಭಾರೀ ಸುದ್ದಿಯಲ್ಲಿದೆ. ಇತ್ತೀಚೆಗಷ್ಟೇ ಮಂಡ್ಯದಲ್ಲಿ 15.5°C ತಾಪಮಾನ ದಾಖಲಾಗಿದ್ದು, ಇದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಇರುವುದನ್ನು ಸೂಚಿಸುತ್ತದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂಜಾನೆ ಮತ್ತು ರಾತ್ರಿ ವೇಳೆಯಲ್ಲಿ ಶೀತ ಹಾಗೂ ಒಣ ಹವಾಮಾನವು ಪ್ರಬಲವಾಗಿದೆ ಎಂದು ತಿಳಿಸಿದೆ.
ಇದೇ ವೇಳೆ, ಕರಾವಳಿ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಯಾವುದೇ ಗಮನಾರ್ಹ ಮಳೆ ನಿರೀಕ್ಷೆಯಿಲ್ಲದಿದ್ದರೂ, ಚಳಿ ಕಮ್ಮಿಯಾಗಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಕೆಲವು ದಿನಗಳಿಂದ ಚಳಿ ವಾತಾವರಣ ಕಡಿಮೆಯಾಗಿದೆ. ಬೆಳಗಾವಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನಲ್ಲೂ ಶುಷ್ಕ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ. ಮೈಸೂರು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಚಳಿ ವಾತಾವರಣ ಕಡಿಮೆಯಾಗಲಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ನಿರೀಕ್ಚೆಯಿದೆ. ಇದುವರೆಗೆ ಚಳಿ ಚಳಿ ಎನ್ನುತ್ತಿದ್ದ ಜನರಿಗೆ ಇನ್ಮೇಲೆ ಬಿಸಿಲಿನ ಬೇಗೆ ತಟ್ಟಲಿದೆ. ದಿನವಿಡೀ ಬಿಸಿಲಿದ್ದರೆ, ಸೆಖೆಯಂತೂ ತಡೆಯೋಕೆ ಸಾಧ್ಯವಿಲ್ಲ. ಆದ್ದರಿಂದ ಎಸಿ, ಫ್ಯಾನ್‌ಗಳನ್ನು ಈಗಲೇ ಸರಿಪಡಿಸಿಕೊಳ್ಳಿ. ಈ ಬಾರಿ ನಿರೀಕ್ಷೆಗಿಂತಲೂ ಮೊದಲೇ ಬೇಸಿಗೆ ಕಾಲ ಆರಂಭವಾಗುತ್ತಿದೆ. ಈ ಪರಿಣಾಮ ರಾಜ್ಯದಲ್ಲಿ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದೆ ಎಂದು ವರದಿಯಾಗಿದೆ. ಜನರು ಕೂಡಾ ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.


Click it and Unblock the Notifications