ಮಾರ್ಚ್ ತಿಂಗಳಲ್ಲಿ ರಾಜ್ಯದ ಹವಾಮಾನ ನಿಜಕ್ಕೂ ಅಚ್ಚರಿ ಮೂಡಿಸುತ್ತಿದೆ. ಈ ತಿಂಗಳು ಬಂತು ಅಂದ್ರೆ ಯಪ್ಪಾ ಸೆಕೆ ತಡೆಯೋಕೆ ಆಗಲ್ಲ ಅನ್ನೋ ಬದಲು, ಅಯ್ಯೋ ಮಳೆ ಬರ್ತಿದೆ ಅನ್ನೋ ಹಾಗಾಗಿದೆ. ತಾಪಮಾನ ಇಳಿಕೆಯಾಗಿದೆ, ಈಗಾಗ್ಲೇ ಹಲವೆಡೆ ಆಲಿಕಲ್ಲು ಮಳೆ ಸುರಿದಿದೆ, ಒಂದಷ್ಟು ಬೆಳೆಗಳು ನಾಶವಾಗಿವೆ. ಮಳೆಗಾಲದ ಅನುಭವ ನೀಡ್ತಿದೆ ಈ ವಾತಾವರಣ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಹವಾಮಾನದಲ್ಲಿ ಗಮನಾರ್ಹ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮಳೆಯಾರ್ಭಟ ಇಂದಿಗೆ ನಿಲ್ಲೋದಂತೂ ಸುಳ್ಳು ಅಂತಿದೆ ಹವಾಮಾನ ಇಲಾಖೆ. ಅಂದರೆ ಮಾರ್ಚ್ 20 ಮತ್ತು 21ರಂದು ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೋಲಾರ, ಮೈಸೂರು, ಹಾಸನ, ಕೊಡಗು, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ಇದೆ. ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಬಹುದು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಇನ್ನು ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಇರಲಿದೆ.
ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವೆಡೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಇದರಿಂದ ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ತಂಪಾದ ವಾತಾವರಣ ಕಂಡುಬರುತ್ತಿದೆ. ಬೆಂಗಳೂರಿನಲ್ಲೂ ತಂಪಾದ ಹವಾಮಾನ ಮುಂದುವರಿದಿದ್ದು, ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುತ್ತಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಮಳೆಯಿಗೆ ಹಲವು ಹವಾಮಾನ ಕಾರಣಗಳು ಒಂದೇ ಸಮಯದಲ್ಲಿ ಪರಿಣಾಮ ಬೀರುತ್ತಿವೆ. ಮಧ್ಯಪ್ರದೇಶದಿಂದ ಮರಾಠವಾಡ ಮತ್ತು ವಿದರ್ಭದವರೆಗೆ ವಾಯುಭಾರ ಕುಸಿತದ ರೇಖೆ ಸಕ್ರಿಯವಾಗಿದೆ. ಆಂಧ್ರಪ್ರದೇಶದ ಕರಾವಳಿ ಭಾಗದಲ್ಲೂ ಗಾಳಿಯ ಚಲನೆ ಹೆಚ್ಚಾಗಿದೆ. ಜೊತೆಗೆ ಮನ್ನಾರ್ ಕೊಲ್ಲಿಯಿಂದ ತಮಿಳುನಾಡು ಮೂಲಕ ದಕ್ಷಿಣ ಕರ್ನಾಟಕದವರೆಗೆ ವಾಯುಭಾರ ಕುಸಿತದ ವ್ಯವಸ್ಥೆ ವಿಸ್ತರಿಸಿದೆ. ಇದರಿಂದ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಿಂದ ತೇವಾಂಶಭರಿತ ಗಾಳಿ ರಾಜ್ಯದತ್ತ ಹರಿದು ಬರುತ್ತಿದೆ.
ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಗರಿಷ್ಠ ತಾಪಮಾನದಲ್ಲಿ ಇಳಿಕೆ ಕಾಣಬಹುದು. ಇದರಿಂದ ಬಿಸಿಲಿನ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ. ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರದಿದ್ದರೂ, ರಾತ್ರಿ ಮತ್ತು ಬೆಳಗಿನ ವೇಳೆಯಲ್ಲಿ ತಂಪಾದ ವಾತಾವರಣ ಮುಂದುವರಿಯಲಿದೆ. ಜನರು ಮಳೆಯ ಸಮಯದಲ್ಲಿ ಎಚ್ಚರಿಕೆಯಿಂದ ಇರಲು ಹಾಗೂ ಗಾಳಿಯ ವೇಗ ಹೆಚ್ಚಿರುವ ಕಾರಣ ಸುರಕ್ಷತಾ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications