ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಗುರುವಾರ ಬೆಳಗ್ಗೆ 8:30ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಸಾಧಾರಣ ಉತ್ತಮ ಮಳೆಯಾಗಿದೆ. ಬಿಸಿಲಿನ ಧಗೆಯಿಂದ ಸುಡುತ್ತಿದ್ದ ಕರಾವಳಿಯಲ್ಲಿ ಈಗ ಕೊಂಚ ರಿಲೀಫ್ ಆಗಿದೆ. ಆದರೆ ರೈತರಿಗೆ ಸಂಕಷ್ಟವಾಗಿದೆ.
ಹವಾಮಾನ ಇಲಾಖೆಯ ಮೂಲಗಳ ಪ್ರಕಾರ, ಈ ಪ್ರದೇಶದಲ್ಲಿ 5.5 ಮಿಮೀ ಮಳೆಯಾಗಿದ್ದು, ಇದೇ ಅವಧಿಯಲ್ಲಿ ಸಾಮಾನ್ಯ ಸರಾಸರಿ 0.11 ಮಿಮೀ ಮೀರಿದೆ. ಸಮುದ್ರ ಮಟ್ಟದಿಂದ ಸರಿಸುಮಾರು 5.8 ಕಿ.ಮೀ ಎತ್ತರದಲ್ಲಿ ಸುಂಟರಗಾಳಿ ರಚನೆಯಾಗಿದ್ದು, ಸಮುದ್ರ ಮಟ್ಟದಲ್ಲಿ ಕಡಿಮೆ ಒತ್ತಡದ ವ್ಯವಸ್ಥೆಯಿಂದ ಇದು ಸಂಭವಿಸಿದೆ. ಇದರಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವ್ಯಾಪಕ ಮಳೆ ಸುರಿದಿದೆ.

ದಕ್ಷಿಣ ಕನ್ನಡದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಭಾರೀ ಮಳೆಯಾಗಿದ್ದರೆ, ಜಿಲ್ಲೆಯ ಇತರ ಭಾಗಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಿದೆ. ಮಂಗಳೂರಿನಲ್ಲಿ ಗುರುವಾರ ಮುಂಜಾನೆ ಗುಡುಗು ಸಹಿತ ಮಳೆಯಾಗಿದೆ. ಹಲವಾರು ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ.
ಯಾವೆಲ್ಲ ಪ್ರದೇಶದಲ್ಲಿ ಮಳೆ ಸುರಿದಿದೆ?
ಕೋಟ (ಉಡುಪಿ ಜಿಲ್ಲೆ), ಹೊನ್ನಾವರ, ಮಂಕಿ (ಎರಡೂ ಉತ್ತರ ಕನ್ನಡ ಜಿಲ್ಲೆ) ಮಂಗಳೂರು, ಕುಮಟಾ (ಉತ್ತರ ಕನ್ನಡ ಜಿಲ್ಲೆ), ಉಡುಪಿ, ಕುಂದಾಪುರ (ಉಡುಪಿ ಜಿಲ್ಲೆ), ಕಾರವಾರ, ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ),
ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ), ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ), ಬಾಳೆಹೊನ್ನೂರು, ಜಯಪುರ (ಎರರೂ ಚಿಕ್ಕಮಗಳೂರು ಜಿಲ್ಲೆ),
ಪುತ್ತೂರು ಎಚ್‌ಎಂಎಸ್ (ದಕ್ಷಿಣ ಕನ್ನಡ ಜಿಲ್ಲೆ), ಕಳಸ (ಚಿಕ್ಕಮಗಳೂರು ಜಿಲ್ಲೆ) ದಲ್ಲಿ ಮಳೆ ಸುರಿದಿದೆ.
ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ: ಕೆಎಸ್‌ಎನ್‌ಡಿಎಂಸಿ ಎಚ್ಚರಿಕೆ
ಜನವರಿ 4 ರಂದು, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದು, ಮಂಗಳೂರು ಮತ್ತು ಉಡುಪಿಯಂತಹ ಪ್ರದೇಶಗಳ ಮೇಲೆ ಪರಿಣಾಮ ಬೀರಿತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶವು ಹವಾಮಾನ ಪರಿಸ್ಥಿತಿಗಳಿಗೆ ಕಾರಣವಾಗಿದೆ ಎಂದು ತಿಳಿಸಿದೆ.
ಯಾವೆಲ್ಲ ಪ್ರದೇಶದಲ್ಲಿ ಮಳೆ ಮುಂದುವರಿಯಲಿದೆ?
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಗೆಯೇ ಚಾಮರಾಜನಗರ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲಲ್ಲಿ ವ್ಯಾಪಕ, ಹಗುರ, ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಉಳಿದ ಪ್ರದೇಶಗಳು ಮುಂದಿನ ಐದು ದಿನಗಳಲ್ಲಿ ಮೋಡ ಕವಿದ ವಾತಾವರಣವ ಹೊಂದಿರುವ ನಿರೀಕ್ಷೆಯನ್ನು ಕೆಎಸ್‌ಎನ್‌ಡಿಎಂಸಿ ವ್ಯಕ್ತಪಡಿಸಿದೆ.
ಜನವರಿ 6ರವರೆಗೆ ಮುಂಜಾನೆಯವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು/ ದಟ್ಟಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 26 ಮತ್ತು
ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Click it and Unblock the Notifications