ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಉದ್ಯಮಗಳ ತ್ವರಿತ ಸ್ಥಾಪನೆಗೆ ಅನುಕೂಲ ಮಾಡಿ ಕೊಡಲು ಸರ್ಕಾರ, 'ಕರ್ನಾಟಕ ಕೈಗಾರಿಕಾ ಸೌಲಭ್ಯಗಳ ಕಾಯ್ದೆ 2002ಕ್ಕೆ' ಸುಗ್ರೀವಾಜ್ಞೆ ತರಲು ಮುಂದಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಕೈಗಾರಿಕೆ ಆರಂಭಿಸಲು ಇದ್ದ ಅಡ್ಡಿಗಳನ್ನು ನಿವಾರಿಸಿ, ಹೂಡಿಕೆ ಹೂಡಲು ಮುಂದೆ ಬರುವ ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ನೀಡುವತ್ತ ರಾಜ್ಯ ಸರ್ಕಾರ ಮುಂದಾಗಿದೆ.
ತಕ್ಷಣವೇ ಅನುಮತಿ ಸಿಗಲಿದೆ
ಕರ್ನಾಟಕ ಕೈಗಾರಿಕಾ ಸೌಲಭ್ಯಗಳ ಕಾಯ್ದೆ-2002ಕ್ಕೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಸುಗ್ರೀವಾಜ್ಞೆ ತರುತ್ತಿರುವುದರಿಂದ ಕೈಗಾರಿಕೆಗಳ ಸ್ಥಾಪನೆಗೆ ತಕ್ಷಣವೇ ಅನುಮತಿ ಸಿಗಲಿದೆ. ಕೈಗಾರಿಕೆಗಳ ಸ್ಥಾಪನೆಗೆ ಬೇಕಾದ ಎಲ್ಲ ಅನುಕೂಲಕಗಳನ್ನು ಈ ಮೂಲಕ ಉದ್ಯಮಿಗಳಿಗೆ ಮಾಡಿ ಕೊಡಲಾಗುವುದು ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಉದ್ಯೋಗ ಮಿತ್ರ ಪೋರ್ಟಲ್‌ನಲ್ಲಿ
ಕೈಗಾರಿಕೆಗಳನ್ನು ಸ್ಥಾಪಿಸುವವರು ಉದ್ಯೋಗ ಮಿತ್ರ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ ತಕ್ಷಣ ಜಿಲ್ಲಾ ಸಮಿತಿ ಮತ್ತು ರಾಜ್ಯಮಟ್ಟದ ಉನ್ನತಾಧಿಕಾರ ಸಮಿತಿಗಳು ಒಪ್ಪಿಗೆ ನೀಡಬೇಕು. ಲ್ಯಾಂಡ್ ಆಡಿಟ್ ಸಮಿತಿಯು ಕೈಗಾರಿಕೆ ಸ್ಥಾಪನೆಗಾಗಿ ಅರ್ಜಿದಾರ ನಮೂದಿಸಿದ ಜಮೀನಿನ ಮಾಹಿತಿ ತರಿಸಿಕೊಂಡು ಪರಿಶೀಲಿಸುತ್ತದೆ. ಇವೆಲ್ಲದರ ಪರಿಶೀಲನೆ ಮುಗಿಸಿ ಒಪ್ಪಿಗೆ ನೀಡಿದ ತಕ್ಷಣವೇ ಕೈಗಾರಿಕೆ ಸ್ಥಾಪನೆಗೆ ಚಾಲನೆ ನೀಡಬಹುದಾಗಿದೆ.
ಪ್ರಮಾಣಪತ್ರಗಳು ಸಿಗುವ ತನಕ ಕಾಯಬೇಕಿಲ್ಲ
ಕೈಗಾರಿಕೆ ಸ್ಥಾಪಿಸುವವರು ಕೈಗಾರಿಕಾ ಘಟಕದ ಕಟ್ಟಡ ನಿರ್ಮಾಣ, ಯಂತ್ರೋಪಕರಣ ಸ್ಥಾಪನೆ ಇತ್ಯಾದಿ ಕೆಲಸಗಳನ್ನು ಮುಗಿಸಿಕೊಳ್ಳಬಹುದು. ಕೈಗಾರಿಕೆ ಸ್ಥಾಪನೆಗೆ ಮೊದಲೇ ಪಡೆಯಬೇಕಾಗಿದ್ದ ಪರಿಸರ ಅನುಮತಿ ಸೇರಿದಂತೆ ವಿವಿಧ ಬಗೆಯ ಪ್ರಮಾಣಪತ್ರಗಳು ಸಿಗುವ ತನಕ ಕಾಯಬೇಕಿಲ್ಲ. ಇವುಗಳನ್ನು ಮೂರು ವರ್ಷಗಳೊಳಗೆ ಪಡೆದರೆ ಸಾಕು ಎಂಬ ನಿಯಮವನ್ನು ಸುಗ್ರಿವಾಜ್ಞೆಯಲ್ಲಿ ಸೇರಿಸಲಾಗುತ್ತಿದೆ.
ಗುಜರಾತ್ ಮತ್ತು ರಾಜಸ್ಥಾನದಲ್ಲಿ
ಈಗಾಗಲೇ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಈ ರೀತಿಯ ನಿಯಮಗಳು ಇವೆ. ಕಾಯ್ದೆ ಅಲ್ಲಿ ಸಣ್ಣ ಉದ್ಯಮಗಳಿಗೆ ಮಾತ್ರ ಅನ್ವಯವಾಗುತ್ತದೆ. ನಮ್ಮಲ್ಲಿ ಎಲ್ಲ ಬಗೆಯ ಉದ್ಯಮಗಳಿಗೂ ಅನ್ವಯವಾಗಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications