ಬೆಂಗಳೂರಲ್ಲಿ ಕೆಎಂಎಫ್ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ

ಬೆಂಗಳೂರು, ಅಕ್ಟೋಬರ್ 23: ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಕೆಎಂಎಫ್ ಹೊಸ ಹೊಸ ದಾಖಲೆಗಳನ್ನು ಮಾಡುತ್ತಿದೆ. ಈಗ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟಕ್ಕೆ ಕೆಎಂಎಫ್ ಮುಂದಾಗಿದೆ. ಈ ತಿಂಗಳ ಅಂತ್ಯದಲ್ಲಿ ಬೆಂಗಳೂರು ನಗರದ ಮಾರುಕಟ್ಟೆಯಲ್ಲಿ ಈ ಉತ್ಪನ್ನ ಸಿಗಲಿದ್ದು, ಜನರ ಪ್ರತಿಕ್ರಿಯೆ ನೋಡಿಕೊಂಡು ಮಾರುಕಟ್ಟೆ ವಿಸ್ತರಣೆ ಮಾಡಲು ಕೆಎಂಎಫ್ ಮುಂದಾಗಿದೆ.

ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ನಂದಿನಿ ಬ್ರಾಂಡ್ ಹೆಸರಿನಲ್ಲಿಯೇ ಇಡ್ಲಿ, ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಈಗಾಗಲೇ ಹಲವು ಖಾಸಗಿ ಕಂಪನಿಗಳು ಈ ಮಾದರಿ ಹಿಟ್ಟನ್ನು ಮಾರುಕಟ್ಟೆಗೆ ತಂದಿವೆ. ಈಗ ಕೆಎಂಎಫ್ ಸಹ ಈ ಮಾರುಕಟ್ಟೆಗೆ ಪಾದಾರ್ಪಣೆ ಮಾಡಲಿದೆ.

ಬೆಂಗಳೂರಲ್ಲಿ ಕೆಎಂಎಫ್ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ

ಬೆಂಗಳೂರು ನಗರದಲ್ಲಿ ನಂದಿನಿ ಬ್ರಾಂಡ್ ದೋಸೆ, ಇಡ್ಲಿ ಹಿಟ್ಟನ್ನು ಪರಿಚಯಿಸಲು ಕೆಎಂಎಫ್ ತಯಾರಿ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ದಿನಾಂಕ ನೋಡಿಕೊಂಡು ಉದ್ಘಾಟನೆ ಕಾರ್ಯಕ್ರಮವನ್ನು ಮಾಡಲಿದೆ. 10 ದಿನದಲ್ಲಿ ಇದು ಮಾರುಕಟ್ಟೆಗೆ ಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೆಎಂಎಫ್‌ ತಯಾರಿ: ಬೆಂಗಳೂರು ನಗರದಲ್ಲಿ ಕೆಎಂಎಫ್ ಮೊದಲ ಹಂತದಲ್ಲಿ ಪ್ರತಿದಿನ 10 ರಿಂದ 20 ಸಾವಿರ ಕೆಜಿ ಇಡ್ಲಿ, ದೋಸೆ ಹಿಟ್ಟನ್ನು ಮಾರಾಟ ಮಾಡಲಿದೆ. ಇದಕ್ಕಾಗಿ ಜಯನಗರದಲ್ಲಿ ಪ್ಯಾಕಿಂಗ್ ಘಟಕವನ್ನು ತೆರೆಯಲಾಗಿದೆ. ಇದಕ್ಕಾಗಿ ತಾಂತ್ರಿಕ ಕೆಲಸಗಳು ಪೂರ್ಣಗೊಂಡಿದ್ದು, ಪ್ರಾಯೋಗಿಕ ಪರೀಕ್ಷೆಯೂ ಯಶಸ್ವಿಯಾಗಿದೆ.

450 ಮತ್ತು 900 ಗ್ರಾಂಗಳ ಪ್ಯಾಕೆಟ್‌ಗಳಲ್ಲಿ ನಂದಿನಿ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ಬರಲಿದೆ. ಆದರೆ ದರವನ್ನು ಮಾತ್ರ ಇನ್ನೂ ಅಂತಿಮಗೊಳಿಸಿಲ್ಲ. ಖಾಸಗಿ ಕಂಪನಿಗಳ ದರಕ್ಕಿಂತ ಕಡಿಮೆ ದರದಲ್ಲಿ ನೀಡಲು ಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲು ಬೆಂಗಳೂರು ನಗರದ ಮಾರುಕಟ್ಟೆಯಲ್ಲಿ ನಂದಿನಿ ದೋಸೆ, ಇಡ್ಲಿ ಹಿಟ್ಟು ಪರಿಚಯಿಸಲಾಗುತ್ತದೆ. ಬಳಿಕ ರಾಜ್ಯಾದ್ಯಂತ ಇದನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾರುಕಟ್ಟೆಗೆ ಲೋಕಾರ್ಪಣೆ ಮಾಡುವ ದಿನಾಂಕ ಅಧಿಕೃತವಾಗಿ ನಿಗದಿಯಾಗಿಲ್ಲ.

ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳ ದಿನಾಂಕಕ್ಕಾಗಿ ಮನವಿ ಸಲ್ಲಿಸಲಾಗಿದೆ. ಆದರೆ ಇನ್ನೂ ದಿನಾಂಕ ನೀಡಿಲ್ಲ. ದಿನಾಂಕ ಅಂತಿಮವಾದ ಬಳಿಕ ಕಾರ್ಯಕ್ರಮದ ಸ್ಥಳವನ್ನು ಸಹ ಅಂತಿಮಗೊಳಿಸಲಾಗುತ್ತದೆ.

ಕೆಎಂಎಫ್ ಹಾಲಿನ ಉತ್ಪಾದನೆಯಲ್ಲಿ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ಕರ್ನಾಟಕ ಮಾತ್ರವಲ್ಲ ಹೊರ ರಾಜ್ಯಗಳಿಗೂ ಸಹ ನಂದಿನಿ ಹಾಲು ಪೂರೈಕೆಯಾಗುತ್ತದೆ. ಅಲ್ಲದೇ ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಕೆಎಂಎಫ್ ತನ್ನದೇ ಆದ ಉತ್ಕೃಷ್ಟತೆ ಉಳಿಸಿಕೊಂಡು ಬಂದಿದೆ. ತಿರುಪತಿಯಲ್ಲಿ ಲಡ್ಡು ಮಾಡಲು ನಂದಿನಿ ತುಪ್ಪವನ್ನು ಬಳಕೆ ಮಾಡಲಾಗುತ್ತದೆ.

ಅಮುಲ್ ನಂತರ ಅತಿ ದೊಡ್ಡ ಸಹಕಾರಿ ಸಂಸ್ಥೆಯಾಗಿದೆ. ಅಮುಲ್ ಪ್ರತಿದಿನ ಸುಮಾರು 1.8 ಕೋಟಿ ಲೀಟರ್ ಹಾಲು ಸಂಗ್ರಹ ಮಾಡುತ್ತದೆ. ಕೆಎಂಎಫ್ 81 ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತದೆ. ನಂದಿನಿ ಬ್ಯಾಂಡ್‌ನ ಮಾರುಕಟ್ಟೆ ಮೌಲ್ಯ ಸುಮಾರು 21 ಸಾವಿರ ಕೋಟಿ ರೂ.ಗಳು.

ನಂದಿನಿ ಕೇವಲ ಹಾಲು ಮಾತ್ರವಲ್ಲ. ಕರ್ನಾಟಕದ ಗ್ರಾಮೀಣ ಭಾಗದ ಜನರು ಈ ಬಗ್ಗೆ ಭಾವನಾತ್ಮಕ ನಂಟನ್ನು ಹೊಂದಿದ್ದಾರೆ. ಗ್ರಾಮೀಣ ಭಾಗದಲ್ಲಿ ನಿರುದ್ಯೋಗಿಗಳಿಗೆ, ಮಹಿಳೆಯರ ಸ್ವಾವಲಂಬನೆಗೆ ಕೆಎಂಎಫ್ ಆಧಾರವಾಗಿ ನಿಂತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+