ಕರ್ನಾಟಕದ ಹಾಗೂ ಕನ್ನಡಿಗ ಹೆಮ್ಮಯ ಕೆಎಂಎಫ್ ಈಗಾಗಲೇ ದೇಶದಾದ್ಯಂತ ತನ್ನ ಮಾರುಕಟ್ಟೆಯನ್ನು ವಿಸ್ತರಿಸುತ್ತಲೇ ಬಂದಿದೆ. ಶುದ್ಧತೆ ಮತ್ತು ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ದೇಶಾದ್ಯಂತ ಗ್ರಾಹಕರಿಗೆ ಪ್ರಿಯವಾದ ಉತ್ಪನ್ನವಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಂದಿನಿ ಹಾಲು, ಉತ್ಪನ್ನಗಳು ಪರಿಚಯಗೊಂಡಿರುವ ನಂದಿನಿ, ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ " ಮಹಾಕುಂಭಮೇಳ- 2025" ರಲ್ಲಿ ಕಮಾಲ್ ಮಾಡಲು ಹೊರಟಿದೆ.
ಹೌದು 144 ವರ್ಷಗಳಿಗೊಮ್ಮೆ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್ ಪಾಯಿಂಟ್ ಸಂಸ್ಥೆಯೊಂದಿಗೆ ನಂದಿನಿ ಬ್ರ್ಯಾಂಡ್ ಆಗಿ ಪ್ರಸಿದ್ದಿ ಪಡೆದಿರುವ ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್ (KMF) ಪಾಲುದಾರಿಕೆ ಘೋಷಿಸಿದೆ. ಕನ್ನಡಿಗರ ಸ್ವಾಭಿಮಾನದ ಹೆಗ್ಗುರುತು ನಂದಿನಿ ಉತ್ತರ ಭಾರತದಲ್ಲಿ ನಿಧಾನವಾಗಿ ತನ್ನ ವಿಸ್ತರಣೆ ಹೆಜ್ಜೆ ಇಡುತ್ತಿದ್ದು, ಹಾಲಿನ ಉತ್ಪನ್ನಗಳ ಮಾರಾಟ ಪ್ರಮಾಣವನ್ನು ಹೆಚ್ಚಿಸಲು ಕೆಎಂಎಫ್ ಹಲವು ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ಮಹಾಕುಂಭ ಮೇಳದಲ್ಲಿ ಪಾಲುದಾರಿಕೆಯೂ ಪ್ರಮುಖವಾಗಿದೆ.

ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ 2025ರ ಮಹಾ ಕುಂಭಮೇಳವೂ ಜನವರಿ 13ರ ಇಂದಿನಿಂದ ಪ್ರಾರಂಭವಾಗಿ ಫೆಬ್ರವರಿ 26ರವರೆಗೆ ನಡೆಯಲಿದೆ. ಹೀಗಾಗಿ ಕೆಎಂಎಫ್ ನಂದಿನಿ" ಯುಹೆಚ್‌ಟಿ ಗುಡ್‌ಲೈಫ್ ಹಾಲು ಹಾಗೂ ಇತರೆ ಉತ್ಪನ್ನಗಳ ಮಾರಾಟ ಮಾಡುವ ಸಲುವಾಗಿ ಚಾಯ್ ಪಾಯಿಂಟ್ ರವರೊಂದಿಗೆ ಪಾಲುದಾರಿಕೆಯನ್ನು ಹೊಂದಿರುವುದಾಗಿ ಘೋಷಣೆ ಮಾಡಿದೆ.
ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ 2025 ರಲ್ಲಿ ಪಾನೀಯಗಳನ್ನು ಮಾರಾಟ ಮಾಡುವಲ್ಲಿ ಭಾರತದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾದ ಚಾಯ್ ಪಾಯಿಂಟ್ ಅಗ್ರಸ್ಥಾನದಲ್ಲಿದೆ. ಚಾಯ್ ಪಾಯಿಂಟ್ ಸಂಸ್ಥೆ ಮಹಾ ಕುಂಭ ಮೇಳವನ್ನು ಆಯೋಜಿಸಲಾಗಿರುವ ಪ್ರದೇಶದಲ್ಲಿ 10ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದಿದ್ದು, ಸದರಿ ಮಳಿಗೆಗಳ ಮೂಲಕ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳುವ ಪ್ರವಾಸಿಗರಿಗೆ ಒಂದು ಕೋಟಿ ಕಪ್ ಗಳಿಗಿಂತಲೂ ಹೆಚ್ಚು ಚಹಾವನ್ನು ತಯಾರಿಸಿ, ಒದಗಿಸಲು ಸಿದ್ಧತೆಯನ್ನು ಮಾಡಿಕೊಂಡಿದೆ.
ಗಿನ್ನಿಸ್ ದಾಖಲೆ ಗುರಿ
ಮಹಾ ಕುಂಭ ಮೇಳದ ಒಂದೇ ಸಮಾರಂಭದಲ್ಲಿ ಚಾಯ್ ಪಾಯಿಂಟ್ ಸಂಸ್ಥೆ ನಂದಿನಿ ಜೊತೆ ಸಹಯೋಗದೊಂದಿಗೆ ಅತೀ ಹೆಚ್ಚು ಕಪ್ ಚಹಾವನ್ನು ಮಾರಾಟ ಮಾಡಿ ಗಿನ್ನೀಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ಗುರಿಯನ್ನು ಸಹ ಹೊಂದಿದೆ. ಮಹಾ ಕುಂಭ ಮೇಳದಲ್ಲಿ ಸಿದ್ಧಪಡಿಸಲಾಗುವ ಪ್ರತಿಯೊಂದು ಕಪ್ ಚಹಾವು ನಂದಿನಿಯ ಪರಿಶುದ್ಧ ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲನ್ನು ಬಳಸಿ ತಯಾರಿಸಲಾಗುತ್ತದೆ. ಚಹಾದ ಜೊತೆಗೆ ಚಾಯ್ ಪಾಯಿಂಟ್ ಮಳಿಗೆಗಳು ನಂದಿನಿ ಸಿಹಿ ಉತ್ಪನ್ನ ಮತ್ತು ಮಿಲ್ಕ್ ಶೇಕ್ ಗಳು ಸೇರಿದಂತೆ ಕೆಎಂಎಫ್ ನ ಅನೇಕ ಉತ್ಪನ್ನಗಳನ್ನು ಸಹ ಮಾರಾಟ ಮಾಡುತ್ತದೆ.
'ಮಹಾ ಕುಂಭಮೇಳ ಧಾರ್ಮಿಕ ಉತ್ಸವದಲ್ಲಿ ಕೆಎಂಎಫ್ ಸಂಸ್ಥೆ ಚಾಯ್ ಪಾಯಿಂಟ್ ಅವರೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ. ಕುಂಭ ಮೇಳದಲ್ಲಿ ನಂದಿನಿ ಉತ್ಪನ್ನಗಳನ್ನು ಪ್ರದರ್ಶಿಸಿ, ವೈವಿಧ್ಯಮಯ ಗ್ರಾಹಕರಿಗೆ ಹಾಗೂ ಉತ್ತರ ಭಾರತದಲ್ಲಿ ನಂದಿನಿ ಉತ್ಪನ್ನಗಳ ಲಭ್ಯತೆಯನ್ನು ಬಲಪಡಿಸಲು ಸುವರ್ಣ ಅವಕಾಶವಾಗಿದೆ. ಈ ಐತಿಹಾಸಿಕ ಮೇಳದಲ್ಲಿ ನಂದಿನಿಯ ಉತ್ಪನ್ನಗಳ ಲಭ್ಯತೆಯೊಂದಿಗೆ ಮಹಾ ಕುಂಭ ಮೇಳದ ಯಶಸ್ಸನ್ನು ನಿರೀಕ್ಷಿಸುತ್ತಿದ್ದೇವೆ' ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದ್ದಾರೆ.
ಅಂದ ಹಾಗೆ ಚಾಯ್ ಪಾಯಿಂಟ್ ಸಂಸ್ಥೆಯೂ ಕೆಎಂಎಫ್ ನ ದೀರ್ಘಾವಧಿಯ ಗ್ರಾಹಕರಾಗಿರುವುದಲ್ಲದೇ, ಭಾರತದಲ್ಲಿಯೇ ಅತಿದೊಡ್ಡ ನಂದಿನಿ ಯುಹೆಚ್ ಗುಡ್ ಲೈಫ್ ಹಾಲು, ಬೆಣ್ಣೆ, ತುಪ್ಪ ಹಾಗೂ ಪನ್ನಿ ಇತ್ಯಾದಿ ಉತ್ಪನ್ನಗಳ ಬಳಕೆದಾರರಲ್ಲಿ ಒಬ್ಬರಾಗಿದ್ದಾರೆ. ಒಟ್ಟಾರೆ ನಂದಿನಿ ಮಾರುಕಟ್ಟೆ ಹೊರ ರಾಜ್ಯಕ್ಕೂ ವ್ಯಾಪಿಸಿದ್ದು, ಅಲ್ಲಿನ ಜನತೆಗೂ ಫೇವರೇಟ್ ಮಿಲ್ಕ್ ಬ್ರ್ಯಾಂಡ್ ಆಗಿದೆ. ನಮ್ಮ ರೈತರ ಶ್ರಮದ ಫಲವಾಗಿರುವ ನಂದಿನಿ ಉತ್ಪನ್ನಗಳು ಹಳ್ಳಿಯಿಂದ ದೇಶದೆಲ್ಲೆಡೆ ತಲುಪುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications