ಬೆಂಗಳೂರು, ಏಪ್ರಿಲ್ 30: ಭಾರತೀಯ ಹವಾಮಾನ ಇಲಾಖೆಯು (IMD) ಬೆಂಗಳೂರು ಹವಾಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗುವುದಿಲ್ಲ. ನಗರದಲ್ಲಿ ಶಾಖದ ಅಲೆಯಂತಹ ಪರಿಸ್ಥಿತಿ ಮುಂದುವರೆಯಲಿದೆ ಎಂದು ತಿಳಿಸಿದೆ.
ಐಎಂಡಿ ಪ್ರಕಾರ ಸೋಮವಾರ ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ ಮತ್ತು 23 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಬೆಂಗಳೂರು ಭಾನುವಾರ ಇತಿಹಾಸದಲ್ಲಿ ಎರಡನೇ ಅತಿ ಹೆಚ್ಚು ತಾಪಮಾನಕ್ಕೆ ಸಾಕ್ಷಿಯಾಗಿದ್ದು, ಗರಿಷ್ಠ ತಾಪಮಾನ 38.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸದ್ಯದ ಪರಿಸ್ಥಿತಿ ಪ್ರಕಾರ ನಗರಕ್ಕೆ ಮಳೆ ಬರುವ ಸಾಧ್ಯತೆ ಕಡಿಮೆ ಎಂದು ತಿಳಿಸಲಾಗಿದೆ.

ತಂಪಾದ ಹವಾಮಾನಕ್ಕೆ ಹೆಸರುವಾಸಿಯಾಗಿರುವ ಮೆಟ್ರೋ ನಗರವು ಏಪ್ರಿಲ್ 2016 ರಲ್ಲಿ ತಾಪಮಾನ 39.2 ಡಿಗ್ರಿ ಸೆಲ್ಸಿಯಸ್ ಅನ್ನು ಮುಟ್ಟಿತ್ತು. ಏಪ್ರಿಲ್ 28 ರ ಭಾನುವಾರದಂದು ಐಟಿ ರಾಜಧಾನಿಯು ಸಾಮಾನ್ಯ ತಾಪಮಾನಕ್ಕಿಂತ 4.4 ಡಿಗ್ರಿ ಸೆಲ್ಸಿಯಸ್ ಏರಿಕೆಯನ್ನು ಕಂಡಿದೆ. ಐಎಂಡಿಯ ಭಾನುವಾರದ ಹವಾಮಾನ ಮುನ್ಸೂಚನೆಯ ಪ್ರಕಾರ, ನಗರದಲ್ಲಿ ಹವಾಮಾನದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ ನಷ್ಟು ಇರುವ ಸಾಧ್ಯತೆಯಿದೆ.
"ಮುಖ್ಯವಾಗಿ ಸ್ಪಷ್ಟ ಆಕಾಶ. ಮುಂದಿನ 48 ಗಂಟೆಗಳ ಕಾಲ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38 ° C ಮತ್ತು 23 ° C ಆಗುವ ಸಾಧ್ಯತೆಯಿದೆ" ಎಂದು ಸೋಮವಾರ ಹವಾಮಾನ ಕೇಂದ್ರ ಬೆಂಗಳೂರು ತನ್ನ ದೈನಂದಿನ ಹವಾಮಾನ ವರದಿಯಲ್ಲಿ ತಿಳಿಸಿದೆ.
50 ವರ್ಷಗಳಲ್ಲಿ ಅತಿ ಹೆಚ್ಚು ಬಿಸಿಲು:
ಮೆಟ್ರೋ ನಗರವು ಏಪ್ರಿಲ್ 28 ರಂದು ಎರಡನೇ ಅತಿ ಹೆಚ್ಚು ತಾಪಮಾನವನ್ನು ದಾಖಲಿಸಿದೆ. ತಾಪಮಾನವು 38.5 ಡಿಗ್ರಿ ಸೆಲ್ಸಿಯಸ್‌ಗೆ ಏರಿದೆ. ಬೆಂಗಳೂರಿನ ಹೆಚ್ಚಿನ ತಾಪಮಾನವು ಹಿಂದಿನ ಹೆಚ್ಚಿನ ದಾಖಲೆಗಳನ್ನು ಮೀರಿಸಿದೆ. ಕಳೆದ ಐದು ದಶಕಗಳಲ್ಲಿ ಎರಡನೇ ಅತಿ ಹೆಚ್ಚು ತಾಪಮಾನವಾಗಿ ದಾಖಲಾಗಿದೆ.
ಬಿಸಿಲಿನ ಬೇಗೆಯಿಂದ ನಿವಾಸಿಗಳಿಗೆ ನೆಮ್ಮದಿ ಇಲ್ಲದ ಕಾರಣ ಮುಂದಿನ ದಿನಗಳಲ್ಲಿ ನಗರದಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆ ಇದೆ. ಇಲ್ಲಿಯವರೆಗೆ ಬೆಂಗಳೂರಿನಲ್ಲಿ ಏಪ್ರಿಲ್ 25, 2016 ರಂದು ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.


Click it and Unblock the Notifications