ಯುಗಾದಿ,ಈದ್-ಉಲ್-ಫಿತರ್ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ಮಾಡಲಿವೆ.
ಹೌದು, ಯುಗಾದಿ ಮತ್ತು ಈದ್-ಉಲ್-ಫಿತರ್ ಹಬ್ಬಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 2,000 ಹೆಚ್ಚುವರಿ ಬಸ್‌ಗಳನ್ನು ಸಾರ್ವಜನಿಕರ ಅನುಕೂಲಕ್ಕೆ ಸೇವೆಯನ್ನು ಸಲ್ಲಿಸಲಿದೆ.

ಈ ವಿಶೇಷ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ (ಮೆಜೆಸ್ಟಿಕ್) ಮಾರ್ಚ್ 28 ರಿಂದ 30 ರವರೆಗೆ ಕರ್ನಾಟಕ ಮತ್ತು ಇತರ ರಾಜ್ಯಗಳ ಕೆಳಗಿನ ನಗರಗಳಿಗೆ ಸಂಚರಿಸಲಿವೆ ಆ ಸ್ಥಳಗಳು ಯಾವುವು ಎಂದರೆ.. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ವಿಜಯನಗರ, ಬೆಳಗಾವಿ-ಧಾರವಾಡ, ವಿಜಯಪುರ, ಬೆಳಗಾವಿ. ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್, ಮತ್ತು ಇತರ ಸ್ಥಳಗಳಿಗೆ ಈ ವಿಶೇಷ ಬಸ್ ಸೇವೆಯನ್ನ ಒದಗಿಸಲಾಗುತ್ತದೆ.
ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಕಡೆಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.
ಶಾಂತಿನಗರ ಬಸ್ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿರಾಪಳ್ಳಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಝಿಕ್ಕೋಡ್ ಮತ್ತು ತಮಿಳುನಾಡು ಮತ್ತು ಕೇರಳದ ಇತರ ಸ್ಥಳಗಳಿಗೆ ಎಲ್ಲಾ ಪ್ರೀಮಿಯರ್ ವಿಶೇಷ ಬಸ್‌ಗಳು ಕಾರ್ಯನಿರ್ವಹಿಸಲಿವೆ. ನಂತರ, ಸೋಮವಾರ ಕರ್ನಾಟಕದ ವಿವಿಧ ನಗರಗಳು ಮತ್ತು ಇತರ ರಾಜ್ಯಗಳಿಂದ ಬೆಂಗಳೂರಿಗೆ ವಿಶೇಷ ಬಸ್ಸುಗಳು ಕಾರ್ಯಾಚರಣೆಗೊಳ್ಳಲಿವೆ.
ಬಸ್ ಟಿಕೆಟ್ ಬುಕ್ಕಿಂಗ್ ಮಾಡುವುದು ಹೇಗೆ..?
ನೀವು ನಿಮ್ಮ ಊರಿಗೆ ಹೋಗಲು ಇ - ಟಿಕೆಟ್ ಬುಕಿಂಗ್ ಮಾಡಲು ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್ ಸೈಟ್ www.ksrtc.karnataka.gov.in ಭೇಟಿ ನೀಡಬೇಕು. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ನಿಮ್ಮ ಸೀಟುಗಳನ್ನು ಕಾಯ್ದಿರಿಸಿಕೊಳ್ಳಬಹುದು.ಕರ್ನಾಟಕ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ,ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇವೆ. ನೀವು ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ಬುಕ್ ಮಾಡಿಕೊಳ್ಳಬಹುದು.
ನೀವು ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಸೀಟುಗಳನ್ನು ಕಾಯ್ದಿರಿಸಿದಲ್ಲಿ ಶೇ 5 ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ 10 ಆಫರ್ ಸಿಗಲಿದೆ.
ಯುಗಾದಿ, ರಂಜಾನ್‌ಗೆ ಖಾಸಗಿ ಬಸ್ ದರ ದುಪ್ಪಟ್ಟು
ಹಬ್ಬಕ್ಕೆ ಊರಿಗೆ ಹೋಗಬೇಕು ಅಂತ ಹೊರಟವರಿಗೆ ಬಿಗ್ ಶಾಕ್..! ಹೌದು, ಹಬ್ಬಗಳ ಸೀಸನ್ (Festival Season) ಬಂತು ಅಂದರೆ ಸಾಕು, ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇರುತ್ತದೆ. ಈ ವಾರದಲ್ಲಿ ಯುಗಾದಿ, ರಂಜಾನ್ ಇರುವುದರಿಂದ ಸಾಲು ಸಾಲು ರಜೆಗಳು ಇವೆ. ಇತ್ತ ಖಾಸಗಿ ಬಸ್ (Private Bus) ಮಾಲೀಕರಿಗೆ ಭರ್ಜರಿ ಲಾಟರಿ ಹೊಡೆದಿದೆ. ಸಿಕ್ಕಿದ್ದೇ ಚಾನ್ಸ್ ಅಂತ ಜನರಿಂದ ಡಬಲ್ ಹಣ ಪೀಕಲು ನಿಂತಿದ್ದಾರೆ. ಈ ಮೂಲಕ ರಜೆ ಅಂತ ಮನೆ ಕಡೆ ಹೊರಟವರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ.
ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಮೂರು ದಿನಗಳ ರಜೆ ಇದೆ ಎಂದು ಊರಿನ ಕಡೆ ಹೋಗಲು ಹೋಗಲು ಸಿದ್ದತೆ ಮಾಡಿಕೊಂಡಿದ್ದರಿಗೆ ಖಾಸಗಿ ಬಸ್ ದರ ಸಂಕಷ್ಟ ತಂದಿದೆ.ಮಾರ್ಚ್ 28 ರ ಶುಕ್ರವಾರ ರಾತ್ರಿ ಊರಿಗೆ ತೆರಳಲು ಜನರು ಯೋಜನೆ ಮಾಡಿದ್ದರೆ ಖಾಸಗಿ ಬಸ್ಗಳಲ್ಲಿ ದುಪ್ಪಟ್ಟು ದರ ಏರಿಕೆ ಮಾಡಲಾಗಿದೆ.ಇದನ್ನು ಸಾರ್ವಜನಿಕರು ವಿರೋಧ ಮಾಡಿದ್ದಾರೆ.


Click it and Unblock the Notifications