ಜೀವ ವಿಮೆ ಪಾಲಿಸಿ ಪ್ರೀಮಿಯಂ ನವೀಕರಣದ ದಿನಾಂಕ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ಇದ್ದವರಿಗೆ ಹೆಚ್ಚುವರಿಯಾಗಿ 30 ದಿನಗಳ ಸಮಯವನ್ನು ಒದಗಿಸಲಾಗಿದೆ. ಇನ್ಷೂರೆನ್ಸ್ ರೆಗ್ಯುಲೇಟರಿ ಅಂಡ್ ಡೆವಲಪ್ ಮೆಂಟ್ ಅಥಾರಿಟಿ ಆಫ್ ಇಂಡಿಯಾ (ಐಆರ್ ಡಿಎಐ) ಈಗಾಗಲೇ ಹೆಲ್ತ್ ಇನ್ಷೂರೆನ್ಸ್ ಮತ್ತು ಮೋಟಾರ್ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಪ್ರೀಮಿಯಂ ಪಾವತಿಗೆ ಹೆಚ್ಚುವರಿ ಸಮಯ ನೀಡಿದೆ.
ಮೂರು ವಾರಗಳ ಕಾಲ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಆಗಿರುವುದರಿಂದ ಪಾಲಿಸಿದಾರರಿಗೆ ಪ್ರೀಮಿಯಂ ಪಾವತಿಸಲು ಸಮಸ್ಯೆಯಾಗುತ್ತದೆ. ಆದ್ದರಿಂದ ಹೆಚ್ಚುವರಿ ಸಮಯ ನೀಡಬೇಕು ಎಂದು ಮನವಿ ಮಾಡಲಾಗಿತ್ತು. ಇನ್ನು ಯೂನಿಟ್ ಲಿಂಕ್ಡ್ ಪಾಲಿಸಿಗಳು ಮೆಚ್ಯೂರ್ ಆದರೆ (ಮೇ 31,2020) ಮತ್ತು ಹಣದ ಮೊತ್ತವನ್ನು ಒಂದೇ ಸಲ ಪಾವತಿಸಬೇಕು. ನಿಯಮಾನುಸಾರ ಇನ್ಷೂರೆನ್ಸ್ ಕಂಪೆನಿಗಳು ತೀರುವಳಿ ಆಯ್ಕೆ ನೀಡಬಹುದು ಎನ್ನಲಾಗಿದೆ.
ಈ ಒಂದು ಸಲದ ತೀರುವಳಿ ಆಯ್ಕೆ ಆ ನಿರ್ದಿಷ್ಟ ಯೋಜನೆಯಲ್ಲಿ ಇದೆಯೋ ಇಲ್ಲವೋ ಆದರೆ ನೀಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ನಿತ್ಯದ ಎನ್ ಎವಿ (ನೆಟ್ ಅಸೆಟ್ ವ್ಯಾಲ್ಯೂ) ಕಡಿಮೆ ಆಗಬಹುದಾದ ಅಪಾಯವನ್ನು ಇನ್ಷೂರೆನ್ಸ್ ಕಂಪೆನಿಗಳು ವಿವರಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಮೋಟಾರ್ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಮತ್ತು ಹೆಲ್ತ್ ಇನ್ಷೂರೆನ್ಸ್ ಪ್ರೀಮಿಯಂ ಮಾರ್ಚ್ 25ರಿಂದ ಏಪ್ರಿಲ್ 14, 2020ರ ಮಧ್ಯೆ ಪಾವತಿಸಬೇಕಿದ್ದಲ್ಲಿ ಅದನ್ನು ಏಪ್ರಿಲ್ 21 ಅಥವಾ ಅದಕ್ಕಿಂತ ಮುಂಚೆ ಪಾವತಿಸಬಹುದು. ಅವಧಿ ಮುಗಿದರೂ ನವೀಕರಣ ಆಗಿಲ್ಲ ಎಂಬ ಕಾರಣಕ್ಕೆ ರಿಸ್ಕ್ ಕವರ್ ನಿಲ್ಲಲ್ಲ ಎಂದು ತಿಳಿಸಲಾಗಿತ್ತು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications