ನವದೆಹಲಿ, ಮಾರ್ಚ್ 16: ಬಹುನಿರೀಕ್ಷಿತ ಲೋಕಸಭಾ ಚುನಾವಣಾ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯುಕ್ತರು ಲೋಕಸಭೆ ದಿನಾಂಕವನ್ನು ಬಹಿರಂಗಗೊಳಿಸಿದ್ದಾರೆ.
ಮುಖ್ಯ ಚುಮಾವಣಾ ಆಯುಕ್ತ ರಾಜೀವ್ ಕುಮಾರ್ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಒಟ್ಟು 543 ಕ್ಷೇತ್ರಗಳಲ್ಲಿ 7 ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. 2ನೇ ಹಂತದ ಮತದಾನ 26ನೇ ಏಪ್ರಿಲ್, 3ನೇ ಹಂತದ ಮತದಾನ 7ನೇ ಮೇ, 4ನೇ ಹಂತದ ಮತದಾನ 13 ಮೇ, 5ನೇ ಹಂತದ ಮತದಾನ 20 ಮೇ, 6ನೇ ಹಂತದ ಮತದಾನ 25 ಮೇ, ಕೊನೆಯದಾಗಿ 7ನೇ ಹಂತದ ಮತದಾನ 1 ಜೂನ್‌ರಂದು ನಡೆಯಲಿದೆ. ಜೂನ್ 4ರಂದು ಮತ ಏಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26 ಮೊದಲ ಹಂತದ ಮತದಾನ, ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮೊದಲು ದೇಶದ ವಿವಿಧೆಡೆ 26 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸಲಾಗುತ್ತದೆ.
ಏಪ್ರಿಲ್ 26 ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಮೊದಲು ಮತದಾನ ನಡೆಯಲಿದೆ. ಬಳಿಕ ಕರ್ನಾಟಕದಲ್ಲಿ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.ಏಪ್ರಿಲ್ 26 ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದ ಬೆಂಗಳೂರು, ಮೈಸೂರು, ಚಾಮರಾಜನಗರ ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣದ ಕ್ಷೇತ್ರಗಳಲ್ಲಿ ಮತದಾನ ನಡೆಲಿದೆ.
ಹಾಗೆಯೇ ಮೇ 7ರಂದು ಉತ್ತರ ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಹಾವೇರಿ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.
ದೇಶಾದ್ಯತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಚುನಾವಣೆಗೆ 55 ಲಕ್ಷ ಮತ ಯಂತ್ರಗಳನ್ನು ಬಳಸಲಾಗುತ್ತದೆ. 10 ಲಕ್ಷದ 5 ಸಾವಿರ ಮತಗಟ್ಟೆಗಳನ್ನು ಬಳಸಲಾಗುತ್ತದೆ. ಈ ಬಾರಿ 49.70 ಕೋಟಿ ಪುರುಷ ಮತದಾರರು ಇದ್ದಾರೆ. ಮಹಿಳಾ ಮತದಾರರು 47.10 ಕೋಟಿ ಮತದಾರರು ಇದ್ದಾರೆ. ಮೊದಲ ಬಾರಿ ಮತ ಚಲಾಯಿಸುವ ಮತದಾರರ ಸಂಖ್ಯೆ 19 ಕೋಟಿ ಮತದಾರರು ಇದ್ದಾರೆ.

48 ಸಾವಿರ ಮಂದಿ ತೃತೀಯ ಲಿಂಗಿ ಮತದಾರರು, 85 ವರ್ಷದ ದಾಟಿ 82 ಲಕ್ಷ ಮತದಾರರು ಮತದಾರರು, ವಿಶೇಷಚೇತನರಿಗೆ ಮನೆಯಿಂದಲೇ ಮತ ಚಲಾಯಿಸಲಿದ್ದಾರೆ. 2.18 ಲಕ್ಷ ಮಂದಿ ಶತಾಯುಷಿಗಳು ಮತದಾರರು ಇದ್ದಾರೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಡೆಸುವುದು ನಮ್ಮ ಗುರಿ ಎಂದು ಆಯುಕ್ತರು ತಿಳಿಸಿದ್ದಾರೆ.
ಎಲ್ಲೆಡೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆ ಇದ್ದರೆ ಕಡ್ಡಾತ ಮಾಹಿತಿ ನೀಡಬೇಕಿರುತ್ತದೆ. ಅಕ್ರಮವಾಗಿ ಹಣ ಸಾಗಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ಜಿಲ್ಲೆಯಲ್ಲೂ ಕಂಟ್ರೋಲ್ ರೂಂ ಇರುತ್ತದೆ. ಮತದಾರರಿಗೆ ದುಡ್ಡು ಹಂಚಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ.
ಪ್ರಸ್ತುತ ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಹೊಸ ಸದನ ರಚನೆಯಾಗಬೇಕಿದೆ. ಕಳೆದ ಬಾರಿ ಲೋಕಸಭೆ ಚುನಾವಣೆಯನ್ನು ಮಾರ್ಚ್ 10 ರಂದು ಘೋಷಿಸಲಾಯಿತು ಮತ್ತು ಏಪ್ರಿಲ್ 11 ರಿಂದ ಏಳು ಹಂತಗಳಲ್ಲಿ ನಡೆಸಲಾಯಿತು. ಮತಗಳನ್ನು ಮೇ 23 ರಂದು ಎಣಿಕೆ ಮಾಡಲಾಯಿತು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿ 303 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 52 ಸ್ಥಾನಗಳನ್ನು ಪಡೆದಿತ್ತು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಸಾಕಷ್ಟು ಸಂಖ್ಯೆಯ ಜನರನ್ನು ಸಂಗ್ರಹಿಸಲು ಸಾಧ್ಯವಾಗಲಿಲ್ಲ.


Click it and Unblock the Notifications