ನವದೆಹಲಿ, ಏಪ್ರಿಲ್ 25: 2ನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ಶುಕ್ರವಾರ ನಡೆಯಲಿದೆ. ಇಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1,120 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಚುನಾವಣೆಯಲ್ಲಿ ಹಲವು ಪ್ರಮುಖ ಅಭ್ಯರ್ಥಿಗಳು ಭಾಗವಹಿಸುತ್ತಿದ್ದು, ಈ ಕಣದಲ್ಲಿರುವ ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಯಾರೆಂದು ತಿಳಿಯೋಣ.
ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯನ್ನು ಬಿಡುಗಡೆ ಮಾಡಿದ್ದು, ಇದು ಮೇಲೆ ತಿಳಿಸಿದ ಮಾನದಂಡಗಳ ಪ್ರಕಾರ ಅಭ್ಯರ್ಥಿಗಳ ಬಗ್ಗೆ ವಿವರಗಳನ್ನು ನೀಡುತ್ತದೆ. ಆ ಪ್ರಕಾರ 2ನೇ ಹಂತದ ಚುನಾವಣೆಯಲ್ಲಿ ಭಾಗವಹಿಸುತ್ತಿರುವ 1,210 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ 390 ಅಭ್ಯರ್ಥಿಗಳು 'ಕೋಟ್ಯಾಧಿಪತಿಗಳು' ಎಂದು ತಿಳಿಸಿದೆ. ಈ ಪೈಕಿ ಶೇ 21ರಷ್ಟು ಅಭ್ಯರ್ಥಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣಗಳಿವೆ.

1. ವೆಂಕಟರಮಣೇಗೌಡ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ವೆಂಕಟರಮಣೇಗೌಡ ಈ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಅವರು 622 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ.
2. ಡಿಕೆ ಸುರೇಶ್
ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ಡಿ ಕೆ ಸುರೇಶ್ ಇದ್ದಾರೆ. ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರರೂ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಿರುವ ಸುರೇಶ್ ಅವರ ಆಸ್ತಿ 593 ಕೋಟಿ ರೂ. ಎಂದು ಅವರು ಘೋಷಿಸಿಕೊಂಡಿದ್ದಾರೆ.
3. ಹೇಮಾ ಮಾಲಿನಿ
ಖ್ಯಾತ ನಟಿ ಹೇಮಾ ಮಾಲಿನಿ ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಉತ್ತರ ಪ್ರದೇಶದ ಮಥುರಾದಿಂದ ಸ್ಪರ್ಧಿಸಿರುವ ಈ ಬಿಜೆಪಿ ಅಭ್ಯರ್ಥಿ 278.9 ಕೋಟಿ ಆಸ್ತಿ ಹೊಂದಿದ್ದಾರೆ.
4. ಎಚ್ ಡಿ ಕುಮಾರಸ್ವಾಮಿ
ಬಿಜೆಪಿಯೊಂದಿಗೆ ಮೈತ್ರಿಯ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮುಖಂಡ ಹಾಗೂ ಮಂಡ್ಯ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಅವರ ಆಸ್ತಿ 217 ಕೋಟಿ ರೂ.
5. ಕನ್ವರ್ ಸಿಂಗ್ ತನ್ವಾರ್
ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರದಿಂದ ಬಿಜೆಪಿಯ ಕನ್ವರ್ ಸಿಂಗ್ ತನ್ವಾರ್ ಕಣಕ್ಕಿಳಿದಿದ್ದು, 214 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.
6. ಎಂಎಸ್ ರಕ್ಷಾ ರಾಮಯ್ಯ
ಕರ್ನಾಟಕದ ಚಿಕ್ಕಬಳ್ಳಾಪುರದಿಂದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಎಂಎಸ್ ರಕ್ಷಾ ರಾಮಯ್ಯ ಸ್ಪರ್ಧಿಸುತ್ತಿದ್ದಾರೆ. ಅವರು 169 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.
7. ಸುಖಬೀರ್ ಸಿಂಗ್ ಜೌನಪುರಿಯಾ
ಬಿಜೆಪಿ ಅಭ್ಯರ್ಥಿಯಾಗಿರುವ ಸುಖಬೀರ್ ಸಿಂಗ್ ಜೌನಪುರಿಯಾ ಅವರು ರಾಜಸ್ಥಾನದ ಟೋಂಕ್-ಸವಾಯಿ ಮಾಧೋಪುರದಿಂದ ಸ್ಪರ್ಧಿಸುತ್ತಿದ್ದು, 142 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.
8. ಸಂಜಯ್ ಶರ್ಮಾ
ಮಧ್ಯಪ್ರದೇಶದ ಹೋಶಂಗಾಬಾದ್ ನಿಂದ ಸ್ಪರ್ಧಿಸಿರುವ ಕಾಂಗ್ರೆಸ್ ನ ಸಂಜಯ್ ಶರ್ಮಾ ಅವರ ಆಸ್ತಿ 232 ಕೋಟಿ ರೂ. ಇದೆ.
9. ಎಂ ವಿ ರಾಜೀವ್ ಗೌಡ
ಪ್ರೊಫೆಸರ್ ಎಂ ವಿ ರಾಜೀವ್ ಗೌಡ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಕರ್ನಾಟಕದ ಬೆಂಗಳೂರು ಉತ್ತರದಿಂದ ಕಣಕ್ಕಿಳಿದಿರುವ ಅವರು 134 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ.
10. ಅಂಜನಾ ಉದೈಲಾಲ್
10ನೇ ಸ್ಥಾನದಲ್ಲಿ ರಾಜಸ್ಥಾನದ ಚಿತ್ತೋರ್‌ಗಢದಿಂದ ಕಾಂಗ್ರೆಸ್‌ನ ಅಂಜನಾ ಉದೈಲಾಲ್ ಸ್ಪರ್ಧಿಸುತ್ತಿದ್ದಾರೆ. ಆಕೆಯ ಆಸ್ತಿ 118 ಕೋಟಿ ರೂ.


Click it and Unblock the Notifications