ನವದೆಹಲಿ, ಜೂನ್ 1: ಜೂನ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪರಿಷ್ಕರಿಸಲಾಗಿದೆ. ಪ್ರತಿ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ ಪರಿಷ್ಕೃತ ದರಪಟ್ಟಿಯಂತೆ
ದೆಹಲಿಯಲ್ಲಿ 2219( ಈ ಹಿಂದಿನ ದರ 2,354 ರೂ)., ಕೋಲ್ಕತ್ತಾದಲ್ಲಿ 2,322 ರೂ (2,454 ರೂ.), ಮುಂಬೈನಲ್ಲಿ 2,171.50 ರೂ (2,306 ರೂ) . ಮತ್ತು ಚೆನ್ನೈನಲ್ಲಿ 2,373 ರೂ (2,507 ರೂ) ಎಂದು ಬೆಲೆಯನ್ನು ಪರಿಷ್ಕರಿಸಲಾಗಿದೆ.
ಮೇ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆ 100 ರೂ.ಗಳಷ್ಟು ಏರಿಕೆಯಾಗಿತ್ತು. ಮಾರ್ಚ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಕೇವಲ 2,012 ರೂ. ಏಪ್ರಿಲ್ 1 ರಂದು 2,253 ರೂ ಆಗಿದ್ದು, ಮೇ 1 ರಂದು 2,355 ರೂ. ಇತ್ತು. ಕಳೆದ ವಾರ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 3.50 ರೂ. ವಾಣಿಜ್ಯ ಸಿಲಿಂಡರ್ ಬೆಲೆ 8 ರೂಪಾಯಿ ಏರಿಕೆಯಾಗಿದೆ.

ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 10 ರೂಪಾಯಿ ಕಡಿಮೆ ಮಾಡಲಾಗಿದೆ.
ಕಳೆದ ತಿಂಗಳು, ಕೇಂದ್ರ ಸರ್ಕಾರವು ಹಣ ದುಬ್ಬರ ನಿಯಂತ್ರಣಕ್ಕಾಗಿ ಹಲವು ಕ್ರಮವನ್ನು ಕೈಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಈ ಮೂಲಕ ಅಗತ್ಯ ವಸ್ತುಗಳ ಗಗನಕ್ಕೇರಿರುವ ಬೆಲೆಗಳನ್ನು ತಗ್ಗಿಸುವ ಪ್ರಯತ್ನ ಮಾಡಲಾಯಿತು. ಇದಾದ ಬಳಿಕ ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳು ಕೂಡ ಮೌಲ್ಯವರ್ಧಿತ ತೆರಿಗೆಯನ್ನು ಇಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.


Click it and Unblock the Notifications