ಈಗಾಗಲೇ ಬೆಲೆ ಏರಿಕೆಯಿಂದಾಗಿ ತತ್ತರಿಸಿಹೋಗಿರುವ ಜನರಿಗೆ ಈಗ ಮತ್ತೆ ಆಘಾತ ಉಂಟಾಗಿದೆ. ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್‌ನ ಬೆಲೆಯನ್ನು 50 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯು 999.50 ರೂಪಾಯಿ ಆಗಿದೆ.
ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಜನರು ಈಗಾಗಲೇ ತೊಂದರೆಗೊಳಗಾಗಿರುವ ಸಮಯದಲ್ಲಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಎಲ್‌ಪಿಜಿ ಬೆಲೆ ಏರಿಕೆಯು ಭಾರತದ ಸಾಮಾನ್ಯ ಜನರ ಜೇಬಿಗೆ ಮತ್ತೆ ಕತ್ತರಿ ಹಾಕಿದೆ.
ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಮೇ 1 ರಂದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ರೂ 102.50 ಹೆಚ್ಚಿಸಲಾಗಿದ್ದು, ಬೆಲೆ ರೂ 2355.50 ಕ್ಕೆ ಏರಿದೆ. ಈ ಹಿಂದೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ರೂ 2253 ಆಗಿತ್ತು.

ಅಲ್ಲದೆ, ಈ ತಿಂಗಳ ಆರಂಭದಲ್ಲಿ 5 ಕೆಜಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು 655 ರೂ.ಗೆ ಹೆಚ್ಚಿಸಲಾಗಿದೆ. ಈ ಹಿಂದೆ, ಏಪ್ರಿಲ್ 1 ರಂದು 19-ಕೆಜಿ ವಾಣಿಜ್ಯ ಎಲ್‌ಪಿಜಿ ದರವನ್ನು ಪ್ರತಿ ಸಿಲಿಂಡರ್‌ಗೆ ರೂ 250 ಹೆಚ್ಚಿಸಲಾಗಿದ್ದು, ಬೆಲೆ 2,253 ಕ್ಕೆ ಏರಿತ್ತು. ಇದಲ್ಲದೆ, ಮಾರ್ಚ್ 1, 2022 ರಂದು ವಾಣಿಜ್ಯ ಎಲ್‌ಪಿಜಿ ಬೆಲೆಯನ್ನು ರೂ 105 ರಷ್ಟು ಹೆಚ್ಚಿಸಲಾಯಿತು.


Click it and Unblock the Notifications