ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದ ಪೆಟ್ರೋಲ್, ಡೀಸೆಲ್ ದರದ ನಡುವೆ ಜನಸಾಮಾನ್ಯರು ಕಷ್ಟ ಪಡುತ್ತಿರುವ ಈ ಸಂದರ್ಭದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಾಗದೇ ಇರುವುದು ತುಸು ನೆಮ್ಮದಿ ತರಿಸಿದೆ. ಮೇ ತಿಂಗಳಲ್ಲಿ ಸರ್ಕಾರಿ ತೈಲ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿಲ್ಲ.
ಪ್ರತಿ ತಿಂಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪರಿಶೀಲನೆಗೊಳ್ಳಲಿದ್ದು, ಹೊಸ ದರಗಳು ಪ್ರಕಟಗೊಳ್ಳುತ್ತವೆ. ಆದರೆ ಮೇ ತಿಂಗಳಿನಲ್ಲಿ ಎಲ್‌ಪಿಜಿ ಬೆಲೆ ಬದಲಾಗದೆ ಉಳಿದಿದ್ದು ಯಥಾಸ್ಥಿತಿ ಮುಂದುವರಿದಿದೆ.
ಇಂದು ಸಬ್ಸಿಡಿ ಅಷ್ಟೇ ಇಲ್ಲದೆ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲೂ ಯಾವುದೇ ಬದಲಾವಣೆಗಳಾಗಿಲ್ಲ. ಕಳೆದ ತಿಂಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 10 ರೂಪಾಯಿ ಕಡಿತಗೊಳಿಸಲಾಗಿತ್ತು.
ದೇಶದ ಪ್ರಮುಖ ನಗರಗಳಲ್ಲಿ ಮೇ ತಿಂಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ ಈ ಕೆಳಕಂಡಂತಿದೆ.